ಬೆಂಗಳೂರು : ಶಾಲಾ ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಿದ್ದು ಈ ಸಮಿತಿಗೆ ಸಿಎಂ ಸಿದ್ದರಾಮಯ್ಯ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬರಗೂರು ರಾಮಚಂದ್ರಪಪ, ನಿರಂಜನ ಆರಾಧ್ಯ ಸೇರಿದಂತೆ ಅನೇಕರ ಜೊತೆ ಚರ್ಚಿಸಿದ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆಯಲ್ಲಿನ ಲೋಪದೋಷಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಶಕ್ತಿ ಭವನದಲ್ಲಿ ಮಂಗಳವಾರದಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ 2017ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಖ್ಯಸ್ಥರಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಸೇರಿದಂತೆ ಅನೇಕ ಶಿಕ್ಷಣ ತಜ್ಞರು ಭಾಗಿಯಾಗಿದ್ದರು.
ವಿವಾದಿತ ಪಠ್ಯಗಳನ್ನು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈ ಬಿಡುವಂತೆ ಸಿಎಂ ಸಿದ್ದರಾಮಯ್ಯ ಈ ಸಮಿತಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.