ಸಂಸದ ಪ್ರತಾಪ್ ಸಿಂಹ ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ, ʼʼಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ, ಸ್ಟಾಲಿನ್ ಅವ್ರ ಡಿಎಂಕೆ ಜೊತೆ ಮೈತ್ರಿ ಮುಖ್ಯ, ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ʼʼತಮಿಳು ನಾಡಿಗೆ ನೀರು ಬಿಡಬೇಡಿ, ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆ, ಮೊನ್ನೆಯ ಸಭೆಯಲ್ಲಿ ಅದನ್ನೇ ಹೇಳಿದ್ದೆ, ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ, ಲೋಕ ಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ, ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರರೆ

ʼʼರಾಜ್ಯದ ಜನ 135 ಸೀಟು ಕೊಟ್ಟಿದ್ದಾರೆ, ಇನ್ನು 5 ವರ್ಷ ಯಾರು ಏನು ಮಾಡೋಕ್ಕಾಗಲ್ಲ ಎಂದುಕೊಂಡಿದ್ದಾರೆ, ಇದೇ ತರ ನೀರು ಬಿಟ್ಟರೆ ಬೆಂಗಳೂರು ಮೈಸೂರು ಮಂಡ್ಯ ಎಲ್ಲಾ ಕಡೆ ಕುಡಿಯುವ ನೀರಿಗೂ ಹಾಹಾಕಾರ ಬರತ್ತೆ, ತಮಿಳು ನಾಡಿನಲ್ಲಿ 4 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಬೆಳೆದಿದ್ದಾರೆ, ಅಳತೆಗೆ ಮೀರಿದ ಬೆಳೆ ಬೆಳೆದಿದ್ದಾರೆ, ಸುಪ್ರೀಂ ಕೋರ್ಟ್ ನಲ್ಲಿ ಇದನ್ನು ಮನವರಿಕೆ ಮಾಡಿಕೊಡಬೇಕು, ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ