• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddaramaiah: 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ!!

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಕರ್ನಾಟಕ, ರಾಜಕೀಯ
0
Siddaramaiah: 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ!!
Share on WhatsAppShare on FacebookShare on Telegram

ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

ADVERTISEMENT

ಅಕ್ರಮ ಗಣಿಗಾರಿಕೆ; ಹೆಚ್.ಕೆ. ಪಾಟೀಲ್‌ ಪತ್ರವನ್ನು ಕಸದ ಬುಟ್ಟಿಗೆ ಹಾಕಿ ಎಂದು ಕೇಂದ್ರ ಸಚಿವರ ಗುಡುಗು

ಜನ 5 ವರ್ಷ ಅಧಿಕಾರ ಕೊಟ್ಟರೆ ಹೆಚ್.ಕೆ. ಪಾಟೀಲ್ ಪತ್ರಕ್ಕೆ ಉತ್ತರ ಕೊಡುತ್ತೇನೆ

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್‌ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕಳೆದ ಬಾರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಹೆಚ್.ಕೆ. ಪಾಟೀಲರೇ ಎಂದು ಖಾರವಾಗಿ ಪ್ರಶ್ನಿಸಿದರು.

ರಾಜಕೀಯ ದುರುದೇಶದಿಂದ ಹಾಗೂ ವಸತಿ ಇಲಾಖೆಯಲ್ಲಿ ಎದ್ದಿರುವ ಕಮೀಷನ್‌ ಮುಜುಗರದಿಂದ ಪಾರಾಗಲು ಹೆಚ್.ಕೆ. ಪಾಟೀಲ್‌ ಅವರ ಪತ್ರವನ್ನು ಹೊರಗೆ ಬಿಡಲಾಗಿದೆ ಎಂದು ಅವರು ಕಿಡಿಕಾರಿದರು.

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಈಗ ಹೆಚ್.ಕೆ. ಪಾಟೀಲ್ ಎಚ್ಚರಗೊಂಡಿದ್ದಾರೆ. 1.5 ಲಕ್ಷ ಕೋಟಿ ಹಗರಣ ಆಗಿದೆ ಎಂದಿದ್ದಾರೆ. ಎರಡು ವರ್ಷದಿಂದ ತಾವು ಕಾನೂನು ಮಂತ್ರಿಯಾಗಿದ್ದರಿ, ಕುಂಭಕರ್ಣನ ನಿದ್ದೆಯಲ್ಲಿ ಇದ್ರಾ? ಎಂದು ಅವರಗೆ ಪ್ರಶ್ನೆ ಮಾಡಿದರು ಕೇಂದ್ರ ಸಚಿವರು.

ಹೆಚ್.ಕೆ. ಪಾಟೀಲ್ ಅವರು 10 ವರ್ಷಗಳ ಬಳಿಕ ಪತ್ರ ಬರೆದಿದ್ದಾರೆ. ಗ್ರೇಟ್.. ಸಿದ್ದರಾಮಯ್ಯನವರೇ, ಏನು ಮಾಡಿದ್ರೀ ನೀವು ರಾಜ್ಯದ ಸಂಪತ್ತು ಉಳಿಸಲು? ಹೆಚ್.ಕೆ. ಪಾಟೀಲರೇ ಡ್ರಾಮಾ ಬಿಡಿ. ನಿಮ್ಮ ನೇತೃತ್ವದ ಉಪ ಸಮಿತಿ ಕೊಟ್ಟ ವರದಿ ಇಟ್ಟುಕೊಂಡೇ ಸಿದ್ದರಾಮಯ್ಯ ಏನೂ ಮಾಡಿಲ್ಲ. ಈಗ ಪತ್ರ ಬರೆದು ಏನು ಮಾಡುತ್ತೀರಿ? ಅದನ್ನು ತೆಗೆದು ಕಸದಬುಟ್ಟಿಗೆ ಎಸೆಯಿರಿ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದಿರು.

ಕಳೆದ ಬಾರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಪಾಟೀಲರೇ? ಆ ಬಗ್ಗೆ ಮೌನವೇಕೆ? ಯಾವ ನೈತಿಕತೆ ಇಟ್ಟುಕೊಂಡು ಸಿದ್ದರಾಮಯ್ಯ ಪಕ್ಕದಲ್ಲಿ ಕೂತು ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುತ್ತಿದ್ದೀರಿ ಹೆಚ್.ಕೆ. ಪಾಟೀಲರೇ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ನಾನು ಸಿದ್ದರಾಮಯ್ಯ ಗಣಿ ಅಕ್ರಮದ ಬಗ್ಗೆ ವಿಧಾನಮಂಡಲದಲ್ಲಿಯೂ ಮಾತನಾಡಿದದೇನೆ. ಏಳು ಗಣಿಗಳಿಗೆ ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗ ಅಕ್ರಮವಾಗಿ ಅನುಮತಿ ನೀಡಿದ್ದಾರೆ. ಎಲ್ಲರ ಬಾಯಿ ಮುಚ್ಚಲು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಇಡಿ, ಐಟಿ ಎಂದು ಕೇಂದ್ರ ಸರಕಾರವನ್ನು ದೂರುತ್ತಿದ್ದಾರೆ. ಹಾಗಾದರೆ ಇವರು ಮಾಡುತ್ತಿರುವುದು ಏನು? ಎಂದು ಅವರು ಕಿಡಿಕಾರಿದರು.

ರಾಜ್ಯದ ಜನರು ನನಗೆ ಶಕ್ತಿ ನೀಡಿ ಮುಂದೆ ಐದು ವರ್ಷ ಅಧಿಕಾರ ಕೊಟ್ಟರೆ ಈ ಹೆಚ್.ಕೆ. ಪಾಟೀಲ್ ಅವರು ಬರೆದ ಪತ್ರಕ್ಕೆ ಉತ್ತರ ಕೊಡುತ್ತೇನೆ. ಎಲ್ಲಾ ದಾಖಲೆಗಳನ್ನೂ ಇಟ್ಟುಕೊಂಡಿದ್ದೇನೆ. 2012ರಲ್ಲಿ ನನ್ನ ವಿರುದ್ಧ ಹಾಕಲಾದ ಕೇಸ್‌ ಅದು. ನನ್ನಿಂದ ರಾಜ್ಯಕ್ಕೆ ನಯಾಪೈಸೆ ನಷ್ಟವಾಗಿಲ್ಲ. ಇವರು ಕೊಳ್ಳೆ ಹೊಡೆದು ವಿದೇಶಗಳಿಗೆ ಅದಿರು, ಹಣ ಸಾಗಿಸಿದ ಹಾಗೆ ನಾನು ಮಾಡಿಲ್ಲ. ಈಗ ಕಾನೂನು ಸಚಿವರು ಪತ್ರ ಬರೆಯುತ್ತಾರೆ. ಯಾಕೆ ಬರೆದಿದ್ದೀರಿ ಪಾಟೀಲರೇ.. ನಮ್ಮನ್ನು ಹೆದರಿಸಲಿಕ್ಕಾ? ನಮ್ಮನ್ನು ಹೆದರಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ ಎಂದು ಕುಮಾರಸ್ವಾಮಿ ನೇರವಾಗಿ ಹೆಚ್.ಕೆ.ಪಾಟೀಲರಿಗೇ ಟಾಂಗ್‌ ಕೊಟ್ಟರು.

ಈ ಸರಕಾರದ ಸಿಎಂ, ಡಿಸಿಎಂ ಇಬ್ಬರಿಂದ ರಾಜ್ಯ ಹಾಳಾಗುತ್ತಿದೆ. ಕಾಂಗ್ರೆಸ್‌ ಹೈಕಮಾಂಡ್‌ ನಿಜಕ್ಕೂ ನೈತಿಕತೆ ಇದ್ದರೆ ಇವರಿಬ್ಬರ ರಾಜೀನಾಮೆ ತೆಗೆದುಕೊಂಡು ಯಾರಾದರೂ ಉತ್ತಮರಾದ ಮೂರನೇ ವ್ಯಕ್ತಿಯನ್ನು ಸಿಎಂ ಮಾಡಿ ರಾಜ್ಯದ ಮರ್ಯಾದೆ ಉಳಿಸಿ‌. ಉಳಿದ ಮೂರು ವರ್ಷವಾದರೂ ಸರಿಯಾಗಿ ಆಡಳಿತ ಮಾಡಿ ಎಂದು ಹೆಚ್ಡಿಕೆ ಒತ್ತಾಯಿಸಿದರು.

ಸಾಲಮನ್ನಾ; ನಾನು ಬಿಟ್ಟಿ ಪ್ರಚಾರ ಪಡೆದಿಲ್ಲ

ಕುಮಾರಸ್ವಾಮಿ ಸಾಲಮನ್ನಾ ಮಾಡಿ ಪ್ರಚಾರ ಮಾಡಿಕೊಂಡರು. ನಾನು 300 ಕೋಟಿ ತೀರಿಸಿದೆ ಎಂದು ತುಮಕೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ, 25000 ಕೋಟಿ ಸಾಲಮನ್ನಾ ಮಾಡಿದ್ದು ಯಾರು? ಸುಖಾಸುಮ್ಮನೆ ಸುಳ್ಳು ಹೇಳುವುದೇಕೆ? ಇಷ್ಟೆಲ್ಲಾ ಆದ ಮೇಲೆಯೂ ಇವರಿಗೆ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇದೆಯಾ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Just Married: ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರದ “ಶಿಶುಪಾಲ” ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್. .

Next Post

Ananth Nag: ಭಾರತೀಯ ಚಿತ್ರರಂಗದ ಸಪ್ತ ಭಾಷಾ ನಟ ಅನಂತನಾಗ್

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
Ananth Nag: ಭಾರತೀಯ ಚಿತ್ರರಂಗದ ಸಪ್ತ ಭಾಷಾ ನಟ ಅನಂತನಾಗ್

Ananth Nag: ಭಾರತೀಯ ಚಿತ್ರರಂಗದ ಸಪ್ತ ಭಾಷಾ ನಟ ಅನಂತನಾಗ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada