ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ -ಸಿದ್ದರಾಮಯ್ಯ

ಕರೋನಾ ಲಸಿಕೆ  ಹಾಕಿಸಿಕೊಳ್ಳುವ ವಿಚಾರ,  ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಜನರು ಕರೋನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ರಾಜ್ಯ ಬಿಜೆಪಿ ನಾಯಕರ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಪ್ರತಿಕ್ರಿಯಿಸಿದ್ದಾರೆ.

ಕರೋನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ, ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ  ಕಾಂಗ್ರೆಸ್ ಪಕ್ಷ ಸಹಮತ ವ್ಯಕ್ತಪಡಿಸಿತ್ತು. ಕರೋನಾ ವ್ಯಾಕ್ಸಿನನ್ನು ಕರೋನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18ರಂದು. ಪ್ರಧಾನಮಂತ್ರಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ  ನರೇಂದ್ರ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.

ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕರೋನಾ ವಾರಿಯರ್ಸ್ ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ..? ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು 4 ಕೋಟಿ ಜನ ಮಾತ್ರ (3%), ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೊದಲು ಕರೋನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ  ನರೇಂದ್ರ ಮೋದಿ ಮಾತಿಗೆ ಕಿವಿಗೊಡಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ..? ಎಂದು ತಿರುಗೇಟು ನೀಡಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...