• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಹ್ಲಾದ್ ಜೋಶಿಗೆ ಸುಳ್ಳೇ ಮನೆ ದೇವರು: ಸಿಎಂ ಸಿದ್ದರಾಮಯ್ಯ ಲೇವಡಿ

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in ಕರ್ನಾಟಕ, ರಾಜಕೀಯ
0
ಪ್ರಹ್ಲಾದ್ ಜೋಶಿಗೆ ಸುಳ್ಳೇ ಮನೆ ದೇವರು: ಸಿಎಂ ಸಿದ್ದರಾಮಯ್ಯ ಲೇವಡಿ
Share on WhatsAppShare on FacebookShare on Telegram

ಬೆಂಗಳೂರು: ʼಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಖಂಡ್ ರಾಜ್ಯದ ಲೆಕ್ಕ ನೀಡಿದ್ದಾರೆʼ ಎಂದು ಹೇಳಿಕೆ‌ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ADVERTISEMENT

ಸಾಮಾಜಿಕ ಜಾಲತಾಣದ X ನಲ್ಲಿ ಕಬ್ಬು ಹೋರಾಟ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ಸುಧೀರ್ಘವಾಗಿ ಬರೆದುಕೊಂಡಿರುವ ಸಿಎಂ, ತಾವು ಸುಳ್ಳನ್ನೇ ಮನೆದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ವಿಧೇಯ ಅನುಯಾಯಿʼ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಬೀತು ಪಡಿಸಿದ್ದಾರೆ ಎಂದು‌ ಲೇವಡಿ ಮಾಡಿದ್ದಾರೆ.

ಇಂತಹದ್ದೊಂದು ಬೆತ್ತಲೆ ಸುಳ್ಳನ್ನು ನಿರ್ಲಜ್ಜತೆಯಿಂದ ರಾಜಾರೋಷವಾಗಿ ಹೇಳುವಾಗ ತಾನು ಹೊಂದಿರುವ ಸಚಿವ ಸ್ಥಾನದ ಮರ್ಯಾದೆಯನ್ನಾದರೂ ಜೋಶಿ ಅವರು ಗಮನದಲ್ಲಿಡಬೇಕಿತ್ತು. ನಾನು ಇಂದಿನ ಪತ್ರಿಕಾಗೋಷ್ಠಿಯಲ್ಲಿ 2024-25ನೇ ಸಾಲಿನಲ್ಲಿ ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದ್ದ ಎಥೆನಾಲ್ ಪ್ರಮಾಣವನ್ನು ಸೀಮಿತವಾಗಿಟ್ಟುಕೊಂಡು ಮಾತನಾಡಿದ್ದೆ, 2024-25ನೇ ಸಾಲಿನಲ್ಲಿ ಕರ್ನಾಟಕದ 46 ಡಿಸ್ಟಿಲರಿಗಳ ಏಥೆನಾಲ್ ಉತ್ಪಾದನಾ ಸಾಮರ್ಥ್ಯ 270 ಕೋಟಿ ಲೀಟರ್, ನಮ್ಮಿಂದ ತೈಲ ಕಂಪೆನಿಗಳಿಗೆ ಹಂಚಿಕೆಯಾಗಿರುವುದು ಕೇವಲ 47 ಕೋಟಿ ಲೀಟರ್.

CM SiddaramaiahonBelagavi Protest:ನಾಳೆ ಮೀಟಿಂಗ್ ಇದೆ  ಹಾರ್ಡ್ ಡಿಸ್ಕ್ ಕೊಡಪ್ಪ..ರೊಚ್ಚಿಗೆದ್ದ ಸಿಎಂ ಸಿದ್ದು...

ಈ ಅಂಕಿ ಅಂಶ ಕರ್ನಾಟಕ ಸರ್ಕಾರದ್ದಲ್ಲ, ಇದು ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾದ ಪ್ರಹ್ಲಾದ್ ಜೋಶಿ ಅವರೇ 2025ರ ಆಗಸ್ಟ್ ಆರರಂದು ಲೋಕಸಭೆಯಲ್ಲಿ ನೀಡಿರುವ ಉತ್ತರವಾಗಿದೆ. ಒಂದೋ ಜೋಶಿ ಅವರು ಇಂದು ನೀಡಿರುವ ಹೇಳಿಕೆ ಸುಳ್ಳಾಗಿರಬೇಕು, ಇಲ್ಲವಾದರೆ ಲೋಕಸಭೆಯಲ್ಲಿ ನೀಡಿದ್ದ ಉತ್ತರ ಸುಳ್ಳಾಗಿರಬಹುದು. ಯಾವ ಹೇಳಿಕೆಯನ್ನು ಒಪ್ಪಿಕೊಂಡರೂ ಜೋಶಿ ಅವರಿಗೆ ಸುಳ್ಳುಗಾರನ ಪಟ್ಟ ತಪ್ಪಿದ್ದಲ್ಲ.

ಎಥೆನಾಲ್ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಅನ್ಯಾಯ ಆಗಿರುವುದು ಇದೇ ಮೊದಲನೆ ಸಲವಲ್ಲ. 2021-22, 2022-23, 2023-24, 2024-2025ನೇ ಸಾಲಿನ ಕರ್ನಾಟಕದ ಎಥೆನಾಲ್ ಉತ್ಪಾದನೆಯ ಒಟ್ಟು ಸಾಮರ್ಥ್ಯ 879 ಕೋಟಿ ಲೀಟರ್ ಗಳಾದರೆ ರಾಜ್ಯದಿಂದ ಖರೀದಿ ಮಾಡಲಾಗಿರುವುದು 171 ಕೋಟಿ ಲೀಟರ್ ಮಾತ್ರ. ಇದು ಕರ್ನಾಟಕದ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಾಡಿರುವ ಘೋರ ಅನ್ಯಾಯವಲ್ಲದೆ ಮತ್ತೇನು?

ಆದರೆ ಗುಜರಾತ್ ರಾಜ್ಯದ ವಾರ್ಷಿಕ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 40 ಕೋಟಿ ಲೀಟರ್ ಇದ್ದರೆ, ತೈಲ ಮಾರಾಟ ಕಂಪನಿಗಳಿಗೆ 31 ಕೋಟಿ ಲೀಟರ್ ಹಂಚಿಕೆ ಮಾಡಲಾಗಿದೆ. ಇದ್ಯಾವ ನ್ಯಾಯ? ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡಬೇಕು ಎಂಬ ರೈತಪರವಾದ ನಮ್ಮ ಬೇಡಿಕೆಗೆ ಬೆಂಬಲ ನೀಡಬೇಕಿದ್ದ ಪ್ರಹ್ಲಾದ್ ಜೋಶಿ ಯವರು ನಮ್ಮ ವಿರುದ್ಧವೇ ಮಾತನಾಡಿ ರಾಜ್ಯದ ರೈತರಿಗೆ ದ್ರೋಹ ಎಸಗಿದ್ದಾರೆ.

ಸನ್ಮಾನ್ಯ ಜೋಶಿ ಅವರೇ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸ್ವತಃ ನಿಮಗೆ ಪತ್ರ ಬರೆದು ಕಬ್ಬಿಗೆ ಎಫ್.ಆರ್.ಪಿ ಮತ್ತು ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚು ಮಾಡಬೇಕು ಎಂಬ ಮನವಿ ಮಾಡಿದ್ದಾರೆ. ಕರ್ನಾಟಕದ ಬಿಜೆಪಿಯ ನಾಯಕರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕರ್ನಾಟಕದ ಎಥೆನಾಲ್ ಹಂಚಿಕೆ ಪ್ರಮಾಣ ಹೆಚ್ಚಿಸುವಂತೆ ಕೋರಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ಕುರುಡಾಗಿದೆ.

ಪ್ರಧಾನ ಮಂತ್ರಿಯವರ ಎದುರು ನೆಟ್ಟಗೆ ನಿಂತು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಿ ಅವರ ಹಿತರಕ್ಷಣೆ ಮಾಡಬೇಕೆಂದು ಹೇಳುವ ಧೈರ್ಯವಾಗಲಿ, ಬದ್ಧತೆಯಾಗಲಿ ಸಚಿವ ಜೋಶಿ  ಅವರಿಗಿಲ್ಲ. ಅವರದ್ದೇನಿದ್ದರೂ ರಾಜಕೀಯ ವಿವಾದ ಎಬ್ಬಿಸುವ ಸುಳ್ಳು ಹೇಳಿಕೆಗಳ ಉತ್ತರಕುಮಾರನ ಪೌರುಷ.

ರಾಜ್ಯದ ರೈತರನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟಬೇಕೆಂಬ ಏಕೈಕ ದುರುದ್ದೇಶದಿಂದ ಸುಳ್ಳು ಹೇಳಿಕೆ ನೀಡಿರುವ ಸಚಿವ ಜೋಶಿ ಅವರು ತಮ್ಮ ಸುಳ್ಳಿಗಾಗಿ ರಾಜ್ಯದ ರೈತರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ. ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ಹೇರಿ ಕರ್ನಾಟಕದಿಂದ ಹೆಚ್ಚಿನ ಪ್ರಮಾಣದ ಎಥೆನಾಲ್ ಖರೀದಿ ಮಾಡುವಂತೆ ಆದೇಶ ನೀಡುವಂತೆ ಮಾಡಿ, ರೈತರಿಗೆ ಬಗೆದಿರುವ ದ್ರೋಹದ ಪಾಪವನ್ನು ತೊಳೆದುಕೊಳ್ಳಬೇಕೆಂದು ಜೋಶಿ ಅವರನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

Tags: BJPcentral minister pralhad joshiCM Siddaramaiahcongresskaranataka politicsPolitics
Previous Post

ಈ ದಿನದ ರಾಶಿ ಭವಿಷ್ಯ: ಈ ರಾಶಿಯವರು ಖರ್ಚು ವೆಚ್ಚಿನ ಬಗ್ಗೆ ಎಚ್ಚರ ವಹಿಸಿ

Next Post

ನವೆಂಬರ್ ಕ್ರಾಂತಿ ಚರ್ಚೆ ಮಧ್ಯೆ ಸಿಎಂಗೆ ರಾಜಣ್ಣ ಔತಣಕೂಟ

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ನವೆಂಬರ್ ಕ್ರಾಂತಿ ಚರ್ಚೆ ಮಧ್ಯೆ ಸಿಎಂಗೆ ರಾಜಣ್ಣ ಔತಣಕೂಟ

ನವೆಂಬರ್ ಕ್ರಾಂತಿ ಚರ್ಚೆ ಮಧ್ಯೆ ಸಿಎಂಗೆ ರಾಜಣ್ಣ ಔತಣಕೂಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada