• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ತಿರುಗೇಟು..!

Any Mind by Any Mind
April 29, 2023
in ಕರ್ನಾಟಕ
0
ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ತಿರುಗೇಟು..!
Share on WhatsAppShare on FacebookShare on Telegram

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ತಿರುಗೇಟು ನೀಡಿದ್ದಾರೆ. ʻಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ(BJP) ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ? ರಾಜ್ಯದ ಬಿಜೆಪಿ ಸಚಿವರ 40% ಕಮಿಷನ್ ಕಿರುಕಳದ ವಿರುದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ? ಕಳೆದ ಮೂರುವರೆ ವರ್ಷಗಳಲ್ಲಿ ಒಂದು ವರೆ ಲಕ್ಷ ಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ ಅಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ADVERTISEMENT

ʻರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ  ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ(BS yediyurappa) ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಬಿ.ಎಸ್.ಯಡಿಯೂರಪ್ಪನವರನ್ನು  ಜೈಲಿಗೆ ಕಳಿಸಿದಿರಿ, ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ, ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ? ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ?  ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ? ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ? ಯಾಕೆ ಅವರನ್ನು ಮೂಲಗೆ ತಳ್ಳಿದ್ದೀರಿ? ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ(lingayath) ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ ಎಂದು ಪ್ರಧಾನಿಗೆ ಸಿದ್ದು ಟಾಂಗ್‌ ಕೊಟ್ಟಿದ್ದಾರೆ.

ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ? ನರೇಂದ್ರ ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು(rahul gandhi) ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ? ಸೋನಿಯಾಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಅವರು ನಿನ್ನೆ ತಾನೆ ಸೋನಿಯಾಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷಾಸೂಯೆಯ ವಿಷ ಇಲ್ಲವೇ? ರಾಜ್ಯದ ಬಿಜೆಪಿ ಸರ್ಕಾರ 9 ಲಕ್ಷ ಮನೆಗಳನ್ನು ಕಟ್ಟಿದೆ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಿರಲ್ಲಾ, ನಾವು ಕಟ್ಟಿರುವ ಮನೆಗಳ ಲೆಕ್ಕವನ್ನು ನಿಮಗೆ ಕೊಟ್ಟು ನಿಮ್ಮಿಂದ ಸುಳ್ಳು ಹೇಳಿಸಿದ ವಸತಿ ಸಚಿವರನ್ನು ಒಮ್ಮೆ ಜನರ ಮಧ್ಯೆ ಬಹಿರಂಗ ಚರ್ಚೆಗೆ ಕರೆತನ್ನಿ ಅಂತ ಸಿದ್ದರಾಮಯ್ಯ(siddaramaiah) ಸವಾಲು ಹಾಕಿದ್ದಾರೆ

2013-18ರ ಅವಧಿಯಲ್ಲಿ ರೈತರಿಗೆ ಕೊಟ್ಟ ಮಾತಿನಂತೆ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೀರಾವರಿಗೆ ಖರ್ಚು ಮಾಡಿ ರೈತರ ಹೊಲಕ್ಕೆ ನೀರು ಹರಿಸಿದ ಹೆಮ್ಮೆ ನಮ್ಮದು.. ಮೇಕೆದಾಟು, ಕಳಸ -ಬಂಡೂರಿ ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳೆರಡೂ ನಿರ್ಲಕ್ಷಿಸುತ್ತಾ ಬಂದಿದೆ ಎನ್ನುವುದನ್ನು ರಾಜ್ಯದ ರೈತರಿಗೆ ಗೊತ್ತಿದೆ.  ಕಮಿಷನ್ ನುಂಗುವ ಬಿಜೆಪಿ ಸರ್ಕಾರದ ಚಾಳಿ ಮಠ-ಮಂದಿರಗಳನ್ನೂ ಬಿಟ್ಟಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತರ ಕರ್ನಾಟಕದ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೆ ಅದು ತಲುಪುವಾಗ ಕಡ್ಡಿ ಮಾತ್ರ ಉಳಿಯುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಆಕ್ರೋಶ ನಿಮಗೆ ಕೇಳಿಸಿಲ್ಲವೇ ಸ್ವಾಮಿಗಳೇ? ನಿಮ್ಮದೇ ಪಕ್ಷ ಶಾಸಕ ವಿರೂಪಾಕ್ಷಪ್ಪ ಮಾಡಾಳ್(verupakshappa madal) ಮತ್ತು ಅವರ ಮಗ ಈಗ ಜೈಲಲ್ಲಿರುವುದು ಯಾವ ದೇಶ ಸೇವೆ ಮಾಡಿದ್ದಕ್ಕಾಗಿ ಮೋದಿಯವರೇ? ಪ್ರತಿಷ್ಠಿತ ಕೆಎಸ್ ಡಿಸಿಎಎಲ್ ಕಚೇರಿಯಲ್ಲಿಯೇ ಈ ಶಾಸಕರ ಮಗ ಲಂಚ ತಿನ್ನುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದನ್ನಲ್ಲಾ? ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಎಂಟುವರೆ ಕೋಟಿ ಹಣವನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದರಲ್ಲಾ ಅದೇನು ಅವರು ಬೆಳೆದ ಅಡಿಕೆಯ ಮಾರಾಟದ ದುಡ್ಡೇ? ಅಂತ ಸಿದ್ದರಾಮಯ್ಯ ಬಿಜೆಪಿ(BJP) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #bjp#election2023#karnataka#karnatakaassemblyelection#narendramodi#pratidhvani#pratidhvanidigital#pratidhvaninews#siddaramaiah
Previous Post

ನಟ ಕಿಚ್ಚ ಸುದೀಪ್‌ ಬಿಜೆಪಿ ಪರ ಪ್ರಚಾರಕ್ಕೆ ಬ್ರೇಕ್..! ‌

Next Post

ಶ್ರಮಿಕ ವರ್ಗದ ಆದ್ಯತೆ ಆಯ್ಕೆ ಹಾಗೂ ಅನಿವಾರ್ಯತೆಗಳು..ವರ್ಗ ಪ್ರಜ್ಞೆಯಿಲ್ಲದ ಸಾಮಾಜಿಕ ನ್ಯಾಯದ ಹೋರಾಟಗಳು ಮರುವಿಮರ್ಶೆಗೊಳಗಾಗಬೇಕಿದೆ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಶ್ರಮಿಕ ವರ್ಗದ ಆದ್ಯತೆ ಆಯ್ಕೆ ಹಾಗೂ ಅನಿವಾರ್ಯತೆಗಳು..ವರ್ಗ ಪ್ರಜ್ಞೆಯಿಲ್ಲದ ಸಾಮಾಜಿಕ ನ್ಯಾಯದ ಹೋರಾಟಗಳು ಮರುವಿಮರ್ಶೆಗೊಳಗಾಗಬೇಕಿದೆ

ಶ್ರಮಿಕ ವರ್ಗದ ಆದ್ಯತೆ ಆಯ್ಕೆ ಹಾಗೂ ಅನಿವಾರ್ಯತೆಗಳು..ವರ್ಗ ಪ್ರಜ್ಞೆಯಿಲ್ಲದ ಸಾಮಾಜಿಕ ನ್ಯಾಯದ ಹೋರಾಟಗಳು ಮರುವಿಮರ್ಶೆಗೊಳಗಾಗಬೇಕಿದೆ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada