• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಡಿಮೆ ದುಡ್ಡಲ್ಲಿ ಆಹಾರ ಸಿಗುತ್ತಿದ್ದ ಇಂದಿರಾ ಕ್ಯಾಟೀನ್‌ಗೆ ಬೀಗ ಹಾಕುವ ಸ್ಥಿತಿಗೆ ತಂದ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

Any Mind by Any Mind
June 21, 2021
in ಕರ್ನಾಟಕ, ರಾಜಕೀಯ
0
ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆ ನಡೆಸಲಿ : ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಲಾಕ್ ಡೌನ್ ಸಮಯದಲ್ಲಿ ಬಡಜನ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಗೆ ಅನುದಾನ ಬಿಡುಗಡೆ ಮಾಡದೆ ಬೀಗ ಹಾಕುವ ಸ್ಥಿತಿಗೆ ತಂದ ಕುರಿತು ಸರಣಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಇಂದು ಕೊಪ್ಪಳದ ಇಂದಿರಾ ಕ್ಯಾಂಟೀನ್ ಗೆ ಭೇಟಿನೀಡಿದೆ. ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾರ್ಡಿಗೊಂದರಂತೆ 198 ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳು ಸೇರಿದಂತೆ ಒಟ್ಟು 461 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ಮುಂದುವರೆದು, ಬಡಜನರಿಗೆ ಕೈಗೆಟುಕುವ ದರದಲ್ಲಿ ಆಹಾರ ಪದಾರ್ಥಗಳನ್ನು ವಿತರಣೆ ಮಾಡಬೇಕು ಎಂಬುದು ಇಂದಿರಾ ಕ್ಯಾಂಟೀನ್ ಯೋಜನೆಯ ಹಾಗೂ ನಮ್ಮ ಸರ್ಕಾರದ ಮೂಲ ಉದ್ದೇಶವಾಗಿತ್ತು.

ಆದರೆ ಈಗಿನ ರಾಜ್ಯ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಈ ಕ್ಯಾಂಟೀನ್ ಗಳಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರು ಇಡಲಾಗಿದೆ ಎಂಬ ಏಕೈಕ ಕಾರಣಕ್ಕೆ ಅನುದಾನ ಬಿಡುಗಡೆ ಮಾಡದೆ, ಮುಚ್ಚಲು ಹೊರಟಿತ್ತು ಎಂದು ಕಿಡಿಕಾರಿದ್ದಾರೆ.

ಕಳೆದೆರಡು ತಿಂಗಳುಗಳ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡಜನರ ಹಸಿವು ನೀಗಿಸಲು ನೆರವಾದದ್ದು ನಮ್ಮ ಸರ್ಕಾರದ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆ. ಲಾಕ್ ಡೌನ್ ಇರುವ ಕಾರಣ ಸರ್ಕಾರ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿತ್ತು.

ಈಗ ಲಾಕ್ ಡೌನ್ ತೆರವಾಗಿರುವ ಕಾರಣ ರಾಜ್ಯ ಸರ್ಕಾರ ಹಿಂದಿನಂತೆ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡದೆ, ಬೀಗ ಹಾಕಬೇಕಾದ ಸ್ಥಿತಿಗೆ ತಳ್ಳಲಿದೆ. ಈ ಬಗ್ಗೆ ಜನ ಜಾಗೃತರಾಗಬೇಕು. ಇಂಥದ್ದೊಂದು ಜನಪರವಾದ ಯೋಜನೆ ನಿಲ್ಲದಂತೆ ಜನರೇ ಸರ್ಕಾರದ ಕಿವಿಹಿಂಡುವ ಕೆಲಸ ಮಾಡಬೇಕು ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳಲ್ಲಿ ಈಗ ನೀಡುತ್ತಿರುವ ಉಚಿತ ಆಹಾರವನ್ನು ಮುಂದಿನ ಆರು ತಿಂಗಳವರೆಗೆ ಮುಂದುವರೆಸಿಕೊಂಡು ಹೋಗಬೇಕು ಮತ್ತು ಹೆಚ್ಚಿನ ಬೇಡಿಕೆಯಿರುವ ಕಡೆ ಹೆಚ್ಚುವರಿ ಸಂಚಾರಿ ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಪೂರೈಕೆ ಮಾಡಬೇಕು ಎಂದು ರಾಜ್ಯ ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

Tags: Karnataka GovernmentsiddaramaiahYediyurappa
Previous Post

ಪ್ರತಿಪಕ್ಷ ಕಾಂಗ್ರೆಸ್ ಹೊಣಗೇಡಿತನ ಬಯಲು ಮಾಡಿದ ಸಿಎಂ ಅಭ್ಯರ್ಥಿ ಚರ್ಚೆ

Next Post

ಉತ್ತರಪ್ರದೇಶ ಚುನಾವಣೆ ಹಿನ್ನೆಲೆ: ವಿರೋಧ ಪಕ್ಷಗಳ ಒಗ್ಗಟ್ಟಿಗೆ ಶರದ್ ಪವಾರ್ ತಯಾರಿ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಉತ್ತರಪ್ರದೇಶ ಚುನಾವಣೆ ಹಿನ್ನೆಲೆ: ವಿರೋಧ ಪಕ್ಷಗಳ ಒಗ್ಗಟ್ಟಿಗೆ ಶರದ್ ಪವಾರ್ ತಯಾರಿ

ಉತ್ತರಪ್ರದೇಶ ಚುನಾವಣೆ ಹಿನ್ನೆಲೆ: ವಿರೋಧ ಪಕ್ಷಗಳ ಒಗ್ಗಟ್ಟಿಗೆ ಶರದ್ ಪವಾರ್ ತಯಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada