• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʻʻಸಿದ್ಧರಾಮಯ್ಯ ಒಬ್ಬ ಭಯೋತ್ಪಾದಕʼʼ : ನಳಿನ್‌ ಕುಮಾರ್‌ ಕಟೀಲು

Any Mind by Any Mind
September 29, 2021
in ಕರ್ನಾಟಕ, ರಾಜಕೀಯ
0
ʻʻಸಿದ್ಧರಾಮಯ್ಯ ಒಬ್ಬ ಭಯೋತ್ಪಾದಕʼʼ : ನಳಿನ್‌ ಕುಮಾರ್‌ ಕಟೀಲು
Share on WhatsAppShare on FacebookShare on Telegram
ADVERTISEMENT

ಸಿದ್ಧರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ʻRSS ತಾಲಿಬಾನ್‌ʼ  ವಾಕ್ಸಮರ ಮತ್ತೆ ಮುಂದುವರೆದಿದೆ.  “ಸಿದ್ದರಾಮಯ್ಯ ಒಬ್ಬ ದೊಡ್ಡ ಭಯೋತ್ಪಾದಕ” ಎಂದು ಹೇಳುವ ಮೂಲಕ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, “ಇಂದು ಕಾಂಗ್ರೆಸ್‌ ಅತಂತ್ರ ಸ್ಥಿತಿಯಲ್ಲಿರುವ ಕಾರಣ ಅವರು ಇಂತಹ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಹತ್ಯೆಗಳಾಗಿವೆ.  ಶರತ್‌ ಮಡಿವಾಳ, ದೀಪಕ್‌ ರಾವ್‌, ಪ್ರತಾಪ್‌ ಪೂಜಾರಿ, ಹೀಗೆ ಹಲವು ಹಿಂದೂ ಮುಖಂಡರು ಮತ್ತು ಕಾರ್ಯಕರ್ತರ ಹತ್ಯೆಯಾಗಿದೆ. ಸುಳ್ಯದಲ್ಲಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯನ್ನು ಬರ್ಬರವಾಗಿ  ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಎಟಿಎಂ ಒಳಗೆ ಹೋದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಇದೆಲ್ಲ ಅವರ ಕಾಲಘಟ್ಟದಲ್ಲೇ ನಡೆದಿದ್ದು, ಅವರ ಆಡಳಿತದಲ್ಲೇ ಅತಿ ಹೆಚ್ಚು ಕೊಲೆ, ಸುಲಿಗೆ, ಅತಿ ಹೆಚ್ಚು ಗೋ ಹತ್ಯೆ ನಡೆದಿದೆ” ಎಂದು ನಳಿನ್‌ ಕುಮಾರ್‌ ಕಿಡಿಕಾರಿದ್ದಾರೆ.

ಕಳೆದ ಎರಡು ದಿನಗಳಿಂದ ಸಿದ್ದರಾಮಯ್ಯ ಹಾಗು ಬಿಜೆಪಿ ನಾಯಕರ ನಡುವೆ ಮಾತಿನ ಸಮರ ನಡೆಯುತ್ತಿದೆ . RSSನವರದ್ದು ತಾಲಿಬಾನ್‌ ಸಂಸ್ಕೃತಿ ಎಂದು ಭಾಷಣದ ವೇಳೆ ಸಿದ್ಧರಾಮಯ್ಯ ಟೀಕಿಸಿದ್ದರು. ಅದಾದ ಬಳಿಕ ಸಿದ್ದರಾಮಯ್ಯ ಟೀಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಖಾರವಾಗಿ ಪ್ರತಿಕ್ರಿಯಿಸಿದ್ದರು. “ಕಾಂಗ್ರೆಸ್‌ ಆಡಳಿತವಿದ್ದಾಗ ಭಾರತದ ಒಳಗೆ ತಾಲಿಬಾನಿಗಳು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗು ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು ನೂರಾರು ಮುಗ್ಧರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದು ಮರೆತುಬಿಟ್ಟಿರಾ? ಸಿದ್ದರಾಮಯ್ಯನವರೇ” ಎಂದು ಸಿ.ಟಿ.ರವಿ ಟ್ವೀಟ್‌ ಮಾಡಿದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ “ನಾನು ಸಿದ್ದರಾಮಯ್ಯರವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಆರ್‌ಎಸ್‌ಎಸ್‌ ಬಗ್ಗೆ ಅವರಿಗೆ ಗೊತ್ತಿರಲಿಲ್ಲ ಎಂಬಿದನ್ನು ನಾನು ತಿಳಿದುಕೊಂಡಿದೆ. ಆದರೆ, ಅವರಿಗೆ ತಾಲಿಬಾನ್‌ ಬಗ್ಗೆಯೂ ಗೊತ್ತಿಲ್ಲವೆಂಬುದನ್ನು ಅವರು ಸಾಬೀತು ಪಡಿಸಿದ್ದಾರೆ ಎಂಬುದು ನನಗೀಗ ಅರ್ಥ ಆಗಿದೆ” ಎಂದು ಸಿದ್ದರಾಮಯ್ಯ ಹೇಳಿಕೆಗೆ ಕುಟುಕಿದ್ದಾರೆ.

ಸಿದ್ದರಾಮಯ್ಯ ಅವರಿಗೆ RSS ಬಗ್ಗೆನೂ ಗೊತ್ತಿಲ್ಲ, ತಾಲಿಬಾನ್ ಬಗ್ಗೆಯೂ ಸರಿಯಾಗಿ ಗೊತ್ತಿಲ್ಲ -  Dr K Sudhakar
Tags: BJPCongress PartyCT RaviNalin Kumar KateelRSSTalibanನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ʼಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ , ಅವರ ಸಂಸ್ಕೃತಿ ತಾಲಿಬಾನ್ ಸಂಸ್ಕೃತಿʼ – ನಳಿನ್ ಕುಮಾರ್ ಕಟೀಲ್

Next Post

ವಿಶ್ವ ಹೃದಯ ದಿನದ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ವಿಶ್ವ ಹೃದಯ ದಿನದ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ವಿಶ್ವ ಹೃದಯ ದಿನದ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada