• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ, ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ ಬ್ರಹ್ಮಾಸ್ತ್ರ ಬಳಸುತ್ತಿದ್ದಾರೆ..!

Any Mind by Any Mind
April 24, 2023
in Top Story, ಇದೀಗ, ದೇಶ, ರಾಜಕೀಯ
0
ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ, ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ  ಬ್ರಹ್ಮಾಸ್ತ್ರ ಬಳಸುತ್ತಿದ್ದಾರೆ..!
Share on WhatsAppShare on FacebookShare on Telegram

ಎಲೆಕ್ಶನ್ ಹೊಸ್ತಿಲಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ಯುದ್ಧ ಜೋರಾಗಿದೆ.ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ ಮುಂದುವರೆಸಿದ್ದಾರೆ. ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಅವರನ್ನು ಚಕ್ರವ್ಯೂಹದಿಂದ ಬಿಡಿಸಲು ಕೃಷ್ಣ ಅವರ ಜೊತೆ ಇಲ್ಲ. ಕೃಷ್ಣ ಬಿಜೆಪಿಯಲ್ಲಿ ಇದ್ದಾನೆ. ಡಿ.ಕೆ ಶಿವಕುಮಾರ್ ಸಹ ಸಿದ್ದರಾಮಯ್ಯ ಜೊತೆಗಿಲ್ಲ. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಅವರೂ ತಮ್ಮ ಎಲ್ಲಾ ಅಸ್ತ್ರ ಬಳಸುತ್ತಿದ್ದಾರೆ ಅಂತ ಬಿಜೆಪಿ ಮುಖಂಡ ಶಾಸಕ ಸಿಟಿ ರವಿ ಕಿಡಿಕಾರಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು ,ಸಿದ್ದರಾಮಯ್ಯ ಅವರಿಗೆ ಪರಮೇಶ್ವರ್ ಶಾಪ ತಟ್ಟದೆ ಬಿಡುವುದಿಲ್ಲ. ತನಗೆ ಸಿಕ್ಕದ್ದು ಬೇರೆಯವರಿಗೆ ಸಿಗಬಾರದು ಅನ್ನೋ ಮನಸ್ಥಿತಿ ಅವರಿಗಿದೆ. ಖರ್ಗೆ, ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಅನ್ನೋ ಕಾರಣಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರದಂತೆ ತಡೆಯಲು ಈ ರೀತಿ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ಲಿಂಗಾಯತ ಸಿಎಂ ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ರು. ಸಿದ್ದರಾಮಯ್ಯ ಅವರು ತಮ್ಮ ಅಸಹನೆ ಆಕ್ರೋಶ ಹೊರ ಹಾಕಿದ್ದಾರೆ. ವರುಣದಲ್ಲಿ ಲಿಂಗಾಯತರು ಎಸ್ಸಿ, ಎಸ್ಟಿ ಎಲ್ಲರೂ ಒಂದಾಗಿದ್ದಾರೆ. ಅಹಿಂದ ಕಾರ್ಡ್ ನಡೆಯುತ್ತಿಲ್ಲ. ಹಿಂದು ಕಾರ್ಡ್ ನಡೆಯುತ್ತಿದೆ ಅನಿಸಿರಬಹುದು. ಭಯಮಿಶ್ರಿತ ಆಕ್ರೋಶವಾಗಿ ಈ ಮಾತು ಬಂದಿದೆ. ಎರಡು ರೀತಿಯ ಸಿಟ್ಟು ಸಿದ್ದರಾಮಯ್ಯಗೆ ಇದೆ. ಒಂದು ಕೋಲಾರ ವರುಣದಲ್ಲಿ ಸ್ಪರ್ಧೆ ಮಾಡಬೇಕು ಅಂತಾ ಇತ್ತು. ಆದರೆ ಅದಕ್ಕೆ ಅವಕಾಶ ಸಿಗಲಿಲ್ಲ. ಸಿದ್ದರಾಮಯ್ಯ ಒತ್ತಡದಿಂದ ಏನೇನೋ ಮಾತಾಡುತ್ತಿದ್ದಾರೆ ಅಂತ ಟೀಕೆ ಮಾಡಿದ್ರು.

ಹಿಂದುತ್ವದ ಡ್ಯಾಂ ಗಟ್ಟಿಯಾಗಿದೆ..
ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಸಮಾಜ ಒಡೆಯುವ ಕೆಲಸ ಮಾಡಿದೆ. ಹಿಂದೆ ವೀರಶೈವ ಲಿಂಗಾಯತ ಹೆಸರಲ್ಲಿ ಒಡೆದು ಅದನ್ನು ಅನುಭವಿಸಿದ್ದರು. ನಾವು ಲಿಂಗಾಯತರ ಡ್ಯಾಂನ್ನು ಗಟ್ಟಿ ಮಾಡಿದ್ದೇವೆ. ಬೇರೆ ಬೇರೆ ಸಮುದಾಯದವನ್ನು ಸೇರಿಸಿಕೊಂಡು ಡ್ಯಾಂ ಗಟ್ಟಿ‌ ಮಾಡಿದ್ದೇವೆ. ಹಿಂದುತ್ವದ ಡ್ಯಾಂನ್ನು ಗಟ್ಟಿ ಮಾಡಿ ಎತ್ತರಿಸಿದ್ದೇವೆ. ಚುನಾವಣೆಯಲ್ಲಿ ಮುಳುಗಿದಾಗ ನಿಮಗೆ ಗೊತ್ತಾಗುತ್ತದೆ. ಕಾಂಗ್ರೆಸ್ ಮುಳುಗುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದ್ರು.

ಹೊಸಬರಿಗೆ ಟಿಕೆಟ್
ಈ ಬಾರಿ ಕರ್ನಾಟಕದಲ್ಲಿ ಹಳೆಬೇರು ಹೊಸ ಚಿಗುರು ಮಾದರಿಯಲ್ಲಿ ಟಿಕೆಟ್ ನೀಡಲಾಗಿದೆ. ಕಾಲ ಕಾಲಕ್ಕೆ ಬದಲಾವಣೆ ಅಗತ್ಯ. ರಾಜಕೀಯ ಪಕ್ಷದಲ್ಲೂ ಒಳಹರಿವು ಇರಬೇಕು. ಬಡವರಿಂದ ಮೇಧಾವಿಗಳವರೆಗೂ ರಾಜಕೀಯ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ಒದಗಿಸೋದು ನಮ್ಮ ಬದ್ದತೆ. ಕೆಲವು ಪಕ್ಷಗಳಿಗೆ ಅದು ಬರೀ ಘೋಷಣೆ ಮಾತ್ರ. ಬಿಜೆಪಿ ಅಂದುಕೊಂಡಿದ್ದನ್ನ ಮಾಡಿ ಜನರ ವಿಶ್ವಾಸ ಗಳಿಸುತ್ತೆ ಅಂತ ಹೇಳಿದ್ರು.

ಸ್ಪಷ್ಟ ಬಹುಮತ..
ಚುನಾವಣಾ ಕಾವು ಜೋರಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಯಾವ ಭರವಸೆಗಳನ್ನ ಜನರು ನಂಬೋದಿಲ್ಲ. ಬಿಜೆಪಿ ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತಿದೆ. ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಮೇ 13 ಕ್ಕೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ ಅಂತ ಸಿಟಿ ರವಿ ಹೇಳಿದ್ರು.

Tags: bjpkarnatakacmbommaiCongress PartyctraviDKShivakumarKPCCMysoresiddaramaiahVaruna Constituencyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಮಾಧ್ಯಮಗಳ ಬಳಿ ಕ್ಷಮೆ ಕೇಳಿದ್ರಾ ಸ್ಯಾಂಡಲ್‌ವುಡ್‌ ನಟ ದರ್ಶನ್‌..!?

Next Post

ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

Related Posts

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!
Top Story

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

by ಪ್ರತಿಧ್ವನಿ
May 12, 2026
0

ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ NEET ಕುರಿತು ಮತ್ತೊಮ್ಮೆ ಭಾರೀ ವಿವಾದ ಎದ್ದಿದೆ. ಮಹಾರಾಷ್ಟ್ರದ ನಾಶಿಕ್‌ನಲ್ಲಿ ನಡೆದಿರುವ ಘಟನೆ ಇದೀಗ ದೊಡ್ಡ ಮಟ್ಟದ ಪರೀಕ್ಷಾ ಹಗರಣದ...

Read moreDetails
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post
ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ  ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada