ಮಂಗಳೂರು : 24 ಹಿಂದೂ ಕಾರ್ಯಕರ್ತರನ್ನು ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಂಭೀರ ಆರೋಪ ಮಾಡಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂರಲ್ಲಿ ವೇದಿಕೆಯಲ್ಲಿ ಬಿಜೆಪಿ ಶಾಸಕ ಈ ರೀತಿಯಾಗಿ ನಾಲಗೆ ಹರಿಬಿಟ್ಟಿದ್ದಾರೆ.

ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಸಂದರ್ಭದಲ್ಲಿ ಹರೀಶ್ ಪೂಂಜಾ ಈ ರೀತಿಯ ಹೇಳಿಕೆ ನೀಡಿದ್ದಾರೆ. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದವರ ಪರ ನೀವು ಪ್ರಚಾರ ಮಾಡಿದ್ದೀರಾ ಎಂದು ನಾಲಗೆ ಹರಿಬಿಟ್ಟಿದ್ದಾರೆ.
ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದಿದ್ದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಪ್ರಶ್ನೆ ಮಾಡಿದ್ದ ಹರೀಶ್ ಪೂಂಜಾರ ಹೇಳಿಕೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.













