ಚಾಮರಾಜನಗರ (Chamarajanagara): ಮಾಜಿ ಸಂಸದ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ಧ್ರುವನಾರಾಯಣ್ (R.Dhruvanaryana)ಅವರ ಸಮಾಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿದರು.

ಚಾಮರಾಜನಗರದ ಹೆಗ್ಗೋಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿ, ಅವರನ್ನು ನೆನೆದರು.

ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ (H.C.Mahadevappa), ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ (K.Venkatesh), ಶಾಸಕ ದರ್ಶನ್ ಧ್ರುವನಾರಾಯಣ್ (Darshan Dhruvanarayan), ಅನಿಲ್ ಚಿಕ್ಕಮಾದು (Anil chikkamadu), ರವಿಶಂಕರ್ (Ravishankar), ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.
#karnataka #chamarajanagara #siddaramaiah #dhruvanarayan #deathanniversary





