• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

NewsMinute-ಪ್ರತಿಧ್ವನಿ ವರದಿಯನ್ನು ಶ್ಲಾಘಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 17, 2022
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯಗೆ ಸುರಕ್ಷಿತ ಕ್ಷೇತ್ರ ಅಂದ್ರೆ ಮನೆ ಮಾತ್ರ : ಬಿಜೆಪಿ
Share on WhatsAppShare on FacebookShare on Telegram

“ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ADVERTISEMENT

“ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು.

ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ರಾಜ್ಯದ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ. ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವ ಇಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಹಿರಿಯ ಸಚಿವರೆಲ್ಲರೂ ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

‘ಮೇಲಿನವರ’ ರಕ್ಷಣೆ ಇಲ್ಲದೆ ಮಹಾನಗರ ಪಾಲಿಕೆ ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡಲು ಅನುಮತಿ ನೀಡಲು ಹೇಗೆ ಸಾಧ್ಯ. ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು ಖಾಸಗಿ ಸಂಸ್ಥೆಗೆ ಇದನ್ನು ಒಪ್ಪಿಸುವುದೇ ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ ಇದು ವಿಶ್ವಾಸ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.

ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ. ಯಾವುದೋ ಒಂದು ಸಂಸ್ಥೆ ಅರ್ಜಿ ನೀಡಿ ತಾವು ಮತದಾರರನ್ನು ಜಾಗೃತಗೊಳಿಸುವ ಮತ್ತು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದಾಗಲೇ ಸಂಸ್ಥೆಯ ಉದ್ದೇಶದ ಬಗ್ಗೆ ಸಂಶಯ ಮೂಡಬೇಕಿತ್ತು. ಹೀಗಿದ್ದರೂ 20 ಆಗಸ್ಟ್ 2022ರಂದು ಬಿಬಿಎಂಪಿ ಆಯುಕ್ತರು ಅನುಮತಿ ನೀಡಿದ್ದಾರೆ.

ಜಾಹಿರಾತು ನೀಡದೆ. ಟೆಂಡರ್ ಕರೆಯದೆ ಬಿಬಿಎಂಪಿ ಒಂದು ಖಾಸಗಿ ಕಂಪನಿಗೆ ಈ ಕಾರ್ಯವನ್ನು ಈ ಕೆಲಸವನ್ನು ನೀಡಲು ಹೇಗೆ ಸಾಧ್ಯ? ಅನುಮತಿ ನೀಡುವಾಗ ಸಂಸ್ಥೆಯ ಹಿನ್ನೆಲೆಯನ್ನು ಯಾಕೆ ಪರಿಶೀಲಿಸಿಲ್ಲ? ಉಚಿತ ಸೇವೆ ನೀಡುವ ಉದ್ದೇಶದ ಹಿನ್ನೆಲೆಯನ್ನು ಯಾಕೆ ತಿಳಿದುಕೊಂಡಿಲ್ಲ. ಚಿಲುಮೆ ಕಂಪನಿಯವರು ಬಿಬಿಎಂಪಿ ಮೂಲಕ ತಮ್ಮ ನೌಕರರಿಗೆ ಬೂತ್ ಮಟ್ಟದ ಅಧಿಕಾರಿ ಎಂಬ ಗುರುತಿನ ಚೀಟಿ ನೀಡಿದ್ದೇ ಅಕ್ರಮವಾಗಿದೆ. ಕಾನೂನಿನ ಪ್ರಕಾರ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿವೃತ್ತ ಸರ್ಕಾರಿ ನೌಕರರಲ್ಲದವರು ಬೂತ್ ಲೆವೆಲ್ ಆಫೀಸರ್ ಆಗಲು ಅವಕಾಶ ಇಲ್ಲ ಎಂದಿದ್ದಾರೆ.

ಈ ಹಗರಣ ಬಯಲಾಗಿರುವುದು ಗೊತ್ತಾದ ಕೂಡಲೇ ಬಿಬಿಎಂಪಿ ನಿಬಂಧನೆಗಳನ್ನು ಉಲ್ಲಂಘನೆಯ ಕಾರಣ ನೀಡಿ 16-11-2022ರಂದು ಮತಪಟ್ಟಿ ಪರಿಷ್ಕರಣೆಗಾಗಿ ಖಾಸಗಿ ಸಂಸ್ಥೆಗೆ ನೀಡಿರುವ ಗುತ್ತಿಗೆ ಆದೇಶವನ್ನು ರದ್ದು ಮಾಡಿದ್ದರೂ ರದ್ದತಿಗೆ ಕಾರಣ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ. ಚಿಲುಮೆ ಸಂಸ್ಥೆಯ ಜೊತೆಗಿನ ಒಪ್ಪಂದವನ್ನು ರದ್ದುಮಾಡಿಕೊಂಡಿರುವ ಸಂದರ್ಭದಲ್ಲಿ ಈ ವರೆಗೆ ಅವರು ಸಂಗ್ರಹಿಸಿರುವ ಮಾಹಿತಿಯನ್ನು ಆ ಸಂಸ್ಥೆಯಿಂದ ಯಾಕೆ ಪಡೆದುಕೊಂಡಿಲ್ಲ? ಸಂಗ್ರಹಿಸಿದ ಮಾಹಿತಿಯನ್ನು ಬಿಬಿಎಂಪಿಗೆ ನೀಡಿದ್ದಾರೆಯೇ? ಬಿಬಿಎಂಪಿ ಅದನ್ನು ಹೇಗೆ ಬಳಸಿಕೊಂಡಿದೆ? ಎಂದು ಪ್ರಶ್ನಿಸಿದ್ದಾರೆ.

ಸದ್ಯಕ್ಕೆ ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ ಬೆಂಗಳೂರು ಮಹಾನಗರಕ್ಕಷ್ಟೇ ಸೀಮಿತವಾಗಿದ್ದರೂ ಶೀಘ್ರದಲ್ಲಿಯೇ ಇದನ್ನು ಬೇರೆ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಿಸುವ ಯೋಚನೆ ಇತ್ತಂತೆ. ಈ ಬಗ್ಗೆಯೂ ತನಿಖೆ ನಡೆಯಬೇಕು. 40% ಭ್ರಷ್ಟಾಚಾರ ಮತ್ತು ಆಂತರಿಕ ಬಿಕ್ಕಟ್ಟಿನಲ್ಲಿ ಮುಳುಗಿಹೋಗಿರುವ ಬಿಜೆಪಿ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ವಾಮಮಾರ್ಗದಿಂದ ಗೆಲ್ಲಲು ಸಂಚು ಹೂಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳು ಮಾತ್ರವಲ್ಲ ಬಿಜೆಪಿ ಪಕ್ಷವೇ ಶಾಮೀಲಾಗಿದೆ ಎಂದು ಕೆಂಡಕಾರಿದ್ದಾರೆ.

ಇಂತಹ ಹಗರಣಗಳಿಂದ ಜನತೆ ಚುನಾವಣಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳಲಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಕೇಂದ್ರ ಚುನಾವಣಾ ಆಯೋಗ ತಕ್ಷಣ ಮಧ್ಯಪ್ರವೇಶಿಸಿ ತನಿಖೆಗೆ ಸಹಕಾರ ನೀಡಬೇಕು. ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಈ ಹಗರಣವನ್ನು ನಡೆಸಿರುವಂತೆ ಮೇಲ್ನೊಟಕ್ಕೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಇಡೀ ರಾಜ್ಯಕ್ಕೆ ಈ ಆಪರೇಷನ್ ವಿಸ್ತರಿಸುವ ದುರುದ್ದೇಶ ಇದ್ದಂತಿದೆ.

ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ. ಈ ಕೂಡಲೇ ಬಸವರಾಜ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ ಎಫ್,ಐ,ಆರ್ ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ. ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸುವ ಈ ರಾಜಕೀಯ ಸಂಚನ್ನು ಬಯಲಿಗೆಳೆಯುವ ಮೂಲಕ ಮಾಧ್ಯಮ ಧರ್ಮವನ್ನು ಎತ್ತಿಹಿಡಿದರುವ Newsminute ಮತ್ತು ಪ್ರತಿಧ್ವನಿ ಮಾಧ್ಯಮ ಸಂಸ್ಥೆಗಳಿಗೆ ಅಭಿನಂದನೆಗಳು. ಈ ಸಂಸ್ಥೆಗಳ ಕಾರ್ಯ ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಮಾದರಿಯಾಗಲಿ ಎಂದು ಹಾರೈಸಿದ್ದಾರೆ.

PRATIDHVANI AND TNM ಪ್ರತಿಧ್ವನಿ ಶೋಧ | ಸರ್ಕಾರದ ಬೆಂಬಲದೊಂದಿಗೆ ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿದ ಬೆಂಗಳೂರಿನ NGO
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರೇಯಸಿ ಹತ್ಯೆ ಪ್ರಕರಣ; ಪತ್ತೆಯಾಗದ ಪ್ರಮುಖ ಸಾಕ್ಷ್ಯಾಧಾರಗಳು

Next Post

ಪ್ರತಿಧ್ವನಿ ಇಂಪ್ಯಾಕ್ಟ್‌; ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ಪ್ರತಿಧ್ವನಿ ಇಂಪ್ಯಾಕ್ಟ್‌; ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ

ಪ್ರತಿಧ್ವನಿ ಇಂಪ್ಯಾಕ್ಟ್‌; ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada