• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗುಜರಾತ್‌ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರಲ್ಲ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 8, 2022
in ಕರ್ನಾಟಕ, ದೇಶ, ರಾಜಕೀಯ
0
ಬೆಳಗಾವಿ ಗಡಿ ವಿವಾದ; ಸರ್ವ ಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಗುಜರಾತ್‌-ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಎಎಪಿ ವಿರುದ್ದ ಹರಿಹಾಯ್ದಿದ್ದಾರೆ.

ADVERTISEMENT

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಹೆಚ್ಚಿನ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ಕಾಂಗ್ರೆಸ್‌ ಮತಗಳನ್ನು ಕಬಳಿಸಿರುವುದರಿಂದ ಗುಜರಾತ್‌ ನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಆರೋಪಿಸಿದ್ದಾರೆ.

ನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್‌ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿತ್ತು. ಗುಜರಾತ್‌ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ ಎಂದು ಕಿಡಿಕಾರಿದ್ದಾರೆ.

ಇದರಿಂದ ಗುಜರಾತ್‌ ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಕಾಂಗ್ರೆಸ್‌ ಪಕ್ಷ ಮುನ್ನಡೆಯಲ್ಲಿದೆ, ಹಾಗೆಯೇ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಬೇರೆ ರಾಜ್ಯಗಳ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ ಅದು ನಡೆಯಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್‌ನಲ್ಲಿ 40% ಸರ್ಕಾರ ಇತ್ತು ಎಂದು ಯಾರಾದರೂ ಹೇಳಿದ್ರಾ? ಕರ್ನಾಟಕದ್ದು ಹೇಳಿದ್ರಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಅಷ್ಟು ದುಡ್ಡ ಖರ್ಚು ಮಾಡಿದರೂ ಎಎಪಿ 6 ಸ್ಥಾನ ಪಡೆದಿದ್ದು, ಎಎಪಿಯಿಂದಾಗಿ ಮತ ವಿಭಜನೆ ಆಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರು ಗೆಲ್ಲುತ್ತೆ. ನಾವು ಏನೂ ತಂತ್ರಗಾರಿಕೆ ಮಾಡುವುದೆ ಬೇಡ, ಮೋದಿ ಹವಾ ಎಲ್ಲೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಯಾಕೆ ಸೋಲ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಕುರಿತಂತೆ ಮಾತನಾಡಿದ ಸಿದ್ದರಾಮಯ್ಯ, ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯ ಕರ್ನಾಟಕದ ಬಿಜೆಪಿಗೆ ಇಲ್ಲ. ಕರ್ನಾಟಕದ ಬಿಜೆಪಿ ನಾಯಕರು ಹೇಡಿಗಳು. ಎರಡು ಕಡೆಗಳಲ್ಲಿ ಬಿಜೆಪಿ ಸರ್ಕಾರ ಇದ್ದರೂ, ಗಡಿಯಲ್ಲಿ ಏಕೆ ಗಲಾಟೆ ನಡೆಯುತ್ತಿದೆ? ಎಂದು ಕಿಡಿಕಾರಿದ್ದಾರೆ.

ಇಬ್ಬರು ಮಾತಾಡಿಕೊಂಡೆ ಈ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ? ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಅಲ್ಲದೇ ಗಡಿ ವಿವಾದದ ಬಗ್ಗೆ ಒಳ್ಳೆಯ ಲಾಯರ್ ಇಟ್ಟು ವಾದ ಮಾಡಿಸಬೇಕು. ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು ಎಂದ ಅವರು, ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದಲ್ಲಿ ಮಹಾಜನ್‌ ವರದಿ ಅಂತಿಮವಾಗಿದ್ದು, ಬೆಳಗಾವಿ ನಮ್ಮದ್ದು. ಒಂದಿಂಚೂ ಜಾಗವನ್ನ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ ಎಂದು ಪ್ರತಪಾದಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಸಕ ಮುನಿರತ್ನ ವಿರುದ್ಧ ಪೋಸ್ಟರ್‌ ಪಾಲಿಟಿಕ್ಸ್‌: 10 ಸಾವಿರ ಕೋಟಿ ರೂ. ಎಲ್ಲಿ? ಎಂದು ಪ್ರಶ್ನೆ

Next Post

ಗುಜರಾತ್‌ ಫಲಿತಾಂಶದಿಂದ ನಮಗೆ, ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿ ಸಿಕ್ಕಿದೆ: ಬಿಎಸ್‌ವೈ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಅಧಿಕಾರದ ಹಗಲುಗನಸು ಕಾಣುತ್ತಿರುವವರ ಕನಸು ನನಸಾಗಲ್ಲ : ಬಿ.ಎಸ್‌.ವೈ

ಗುಜರಾತ್‌ ಫಲಿತಾಂಶದಿಂದ ನಮಗೆ, ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿ ಸಿಕ್ಕಿದೆ: ಬಿಎಸ್‌ವೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada