ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿ ಆದೇಶ ಹೊರಡಿಸಿತ್ತು. ಇನ್ನು ಈ ಕುರಿತು ಹೇಳಿಕೆ ನೀಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ವ್ಯಂಗ್ಯವಾಗಿ ನಗುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಪಿಎಫ್ ಐ ಕಾಂಗ್ರೆಸ್ ನ ಪಾಪದ ಕೂಸಾದರೆ ಆರ್ ಎಸ್ ಎಸ್ ಏನು?. ಆರ್ ಎಸ್ ಎಸ್ ಬಿಜೆಪಿಯ ಪಾಪದ ಕೂಸು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ರಾಹುಲ್ ವಾಸ್ತವ್ಯಕ್ಕೆ ಎಲ್ಲ ತಯಾರಿ ನಡೆದಿದೆ ಎಂದಿದ್ದಾರೆ.
ಮೈಸೂರಿನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲ್ಲ ರಾಹುಲ್ ಗಾಂಧಿ ಕಾರ್ಯಕ್ರಮ ಮಾತ್ರ ನಡೆಯಲಿದೆ ಎಂದು ತಿಳಿಸಿದ್ದಾರೆ.