ಮಾಜಿ ಸಿಎಂ ಸಿದ್ದರಾಮಯ್ಯ ಗುರುವಾರ ಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವಾಪಸ್ ಬರುವ ವೇಳೆ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕೈ – ಕಮಲ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ವಿಡುದ್ದ ಪ್ರತಿಭಟನೆ ಮಾಡಿದ್ದು ಹೇಡಿಗಳ ಕೆಲಸ ಎಂದು ಕಿಡಿಕಾರಿದ್ದಾರೆ.
ಕೊಡಗಿನಲ್ಲಿ ಕಳೆದ ಕೆಲವು ವರ್ಷಗಳಿಂದ ಜನರು ಮಳೆಯಿಂದಾಗಿ ತೀವ್ರ ಸಂಕಷ್ಟ ಅನುಭವಿಸಿದ್ದು ಸರ್ಕಾರ ಇವರೊಗೆ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆ ಕಳಪೆಯದಾಗಿದ್ದು ಈ ವಿಚಾರ ನನ್ನಗೆ ಗೊತ್ತಾಗಬಾರದು ಎಂದು ಸರ್ಕಾರ ಜನರಿಗೆ ದುಡ್ಡು ಕೊಟ್ಟು ನನ್ನ ವಿರುದ್ದ ಘೋಷಣೆಗಳನ್ನ ಕೂಗಿಸಿದ್ದಾರೆ ಈ ಸರ್ಕಾರ ಸತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಸಿದ್ದರಾಮಯ್ಯ ಬೇಟಿ ವೇಳೆ ಜನರು ಸರ್ಕಾರ ತಮ್ಮಗೆ ನೀಡಿರುವ ಪರಿಹಾರ ಮೊತ್ತ ಯಾವುದಕ್ಕು ಸಾಲದು ಎಂದು ವಿಪಕ್ಷ ನಾಯಕರ ಬಳಿ ಅಳಲು ತೋಡಿಕೊಂಡಿದ್ದಾರೆ.