ಮಂಡ್ಯ : ಅಂಬರೀಶ್ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಸಹ ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಸರ್ಕಾರದ ಕಾರಣದಿಂದಾಗಿ ಕಾಂಗ್ರೆಸ್ಗೆ ಸುಮಲತಾಗೆ ಟಿಕೆಟ್ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾಗೆ ಬಿಜೆಪಿಯಿಂದ ಬಾಹ್ಯ ಬೆಂಬಲ ಸಿಕ್ಕಿತ್ತು.

ಈ ಬಾರಿ ಸಂಸದೆ ಸುಮಲತಾ ಬಿಜೆಪಿಗೆ ಸೇರೋದಿಲ್ಲ. ಆದರೆ ಬಿಜೆಪಿಗೆ ನನ್ನ ಬಾಹ್ಯ ಬೆಂಬಲವಿದೆ ಎಂದು ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಇಂದು ಮಂಡ್ಯದ ನಾಗಮಂಗಲದಲ್ಲಿ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಆಯಮ್ಮನನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ ಎಂದಿದ್ದಾರೆ.
ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಎಲ್ಲರಿಗೂ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಯಾರೂ ನನ್ನ ಮಾತು ಕೇಳ್ತಿಲ್ಲ ಅಂತಿದ್ರಿ. ನನಗೆ ಈಗ ಎನಿಸುತ್ತಿದೆ ಆಯಮ್ಮನನ್ನು ಗೆಲ್ಲಿಸಿದ್ದು ಸರಿಯಲ್ಲ ಎಂದು ಬಹಿರಂಗವಾಗಿ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.