• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಸುಳಿವು ಕೊಟ್ಟ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ!

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕವಾಗಿ ಆರೋಪ ಬಂದರೂ ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇವತ್ತು ಸಿಎಂ‌ ಆಗಿರ್ತಾರೆ, ನಾಳೆ ಇರಲ್ಲ, ಪಕ್ಷ ಮಾತ್ರ ಮುಂದುವರಿಯುತ್ತದೆ.ಪಕ್ಷದ ಮುಂದೆ ಯಾರೋ ದೊಡ್ಡವರಲ್ಲ ಎಂಬ ಮಾತಿನ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ADVERTISEMENT

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ತನಿಖೆ ವಿಚಾರದ ಬಗ್ಗೆ ಮಾತನಾಡಿದ ಅವರು, ಗೋದ್ರಾ ಘಟನೆ ನಡೆದಾಗ ಮೋದಿ ರಾಜೀನಾಮೆ ಕೊಟ್ಟರಾ? ಆ ಕಾಲದಲ್ಲಿ ಮೋದಿ, ಅಮಿತ್ ಶಾ ವಿರುದ್ದ ಸಾಕಷ್ಟು ಕೇಸ್ ದಾಖಲಾಗಿದ್ದವು. ವೈಯಕ್ತಿಕವಾಗಿ ಯಾರನ್ನೂ ಟಾರ್ಗೆಟ್ ಮಾಡಬಾರದು. ಅವರ ಇಮೇಜ್ ಡ್ಯಾಮೇಜ್ ಮಾಡೋ ಯತ್ನ ಮಾಡಬಾರದು. ಅವರ ಜೊತೆ ಪಕ್ಷಕ್ಕೂ ಡ್ಯಾಮೇಜ್ ಆಗುತ್ತದೆ. ನಿಮ್ಮ ಇಂಟ್ರಸ್ಟ್ ಇರೋದು ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಮಾಡೋದು, ಆದ್ರೆ ವೈಯಕ್ತಿಕ ಅಲ್ಲ. ಆದರೆ, ಸಿದ್ದರಾಮಯ್ಯ ಸಿಎಂ‌ ಇವತ್ತು ಇರ್ತಾರೆ, ನಾಳೆ ಇರಲ್ಲ, ಪಕ್ಷ ಮಾತ್ರ ಮುಂದುವರಿಯುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನ ಮುಗಿಸುವ ಹಾಗೂ ಪಕ್ಷದ ಮತಗಳನ್ನ ಡಿಸ್ಟ್ರಬ್ ಮಾಡೋದಿದೆ. ಹೀಗಾಗಿ ಇದನ್ನ ಬಿಜೆಪಿಯವರು ಮಾಡುತ್ತಿದ್ದಾರೆ. ಇರಲಿ, ಕಾನೂನು ಅದರ ಕ್ರಮ ತೆಗೆದುಕೊಳ್ಳುತ್ತದೆ. ಮುಂದೆ ಅಂತಹ ಸ್ಥಿತಿ ಬಂದ್ರೆ ಕ್ರಮ ತೆಗೆದುಕೊಳ್ಳುವ ಚಿಂತನೆ ಮಾಡುತ್ತೇವೆ. ಕಾನೂನು ಅದರ ಕ್ರಮ ತೆಗೆದುಕೊಳ್ಳುತ್ತದೆ. ಪ್ರತಿ ದಿನ ಮುಡಾ, ಮೂಡ ಅಂತ ಕೇಳ್ತಾನೆ ಇದೀವಿ. ವಿಪಕ್ಷಗಳ ನಾಯಕರು ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ಸಮಸ್ಯೆ ಎಂಬಂತೆ ಇಶ್ಯು ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಮೇಲೆ ಎಫ್ ಐ ಆರ್ ದಾಖಲಾದ ಮೇಲೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಜೊತೆಗೆ ನಿಲ್ಲುತ್ತಾ ಅನ್ನೋದು ಹೈಪೊಥಿಟಿಕಲ್‌ ಪ್ರಶ್ನೆ. ನಾವು ಅವರ ಜೊತೆ ನಿಂತಿದ್ದೇವೆ, ಅವರಿಗೆ ಬೆಂಬಲ ಕೊಟ್ಟಿದ್ದೇವೆ. ಯಾಕೆಂದರೆ ಅವರು ಪಕ್ಷವನ್ನು ಪ್ರತಿನಿಧಿಸುತ್ತಾರೆ ಅವರು ವೈಯುಕ್ತಿಕ ಅಲ್ಲ. ಮೋದಿ‌ ದಲಿತ ನಾಯಕ ಹಾಗೂ ದಲಿತ ಫಂಡ್ ಬಗ್ಗೆ ಹರಿಯಾಣದಲ್ಲಿ ಮಾತನಾಡಿದಕ್ಕೆ ಹರಿಯಾಣದಲ್ಲೆ ಉತ್ತರ ಕೊಡುತ್ತೇವೆ. ಇನ್ನು ಸಿಬಿಐಗೆ ಮುಕ್ತ ತನಿಖೆ ಅವಕಾಶ ವಾಪಸ್ ಪಡೆದಿದ್ದು ಇದೇ ಮೊದಲಲ್ಲ‌. ದೇವರಾಜ್ ಅರಸು ಕಾಲದಲ್ಲೂ ಹೀಗೆ ಮಾಡಲಾಗಿತ್ತು ಎಂದು ಸಮಜಾಯಿಸಿ ನೀಡಿದರು.

ನಾನೇ ಗೃಹ ಸಚಿವನಾಗಿದ್ದಾಗ ವೀರಪ್ಪನ್ ಪ್ರಕರಣ, ತೆಲಗಿ ಪ್ರಕರಣ ಹಾಗೂ ಕೋಲಾರದ ಒಂದು ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳನ್ನು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದರು. ಆದರೆ, ಅವರು ತನಿಖೆ ಮಾಡಲಿಲ್ಲ. ವೀರಪ್ಪನ್ ನೂರಾರು ಜನರನ್ನ ಕೊಂದನು. ತೆಲಗಿ ಸಾವಿರಾರು ಕೋಟಿ ರೂ. ಸರ್ಕಾರದ ಹಣ ಬಳಸಿಕೊಂಡನು. ಆಗ ಸಿಬಿಐ ಅದನ್ನ ತನಿಖೆ ಮಾಡಲಿಲ್ಲ. ಇನ್ನು ರಾಜಭವನ ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಬಗ್ಗೆ ನಾನು ಮಾತನಾಡಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Tags: CM SiddaramaiahCongress PartyDCM DK ShivakumarMallikarjun Kharge Leader of the Opposition in Rajya SabhaMallikarjuna Kharge's statement that hinted!
Previous Post

ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡಲ್ಲ

Next Post

ಮಲ್ಲಿಕಾರ್ಜುನ ಖರ್ಗೆ, ಎಂ ಬಿ ಪಾಟೀಲ್ ಸೇರಿದಂತೆ 7 ಜನರ ವಿರುದ್ದ ದೂರು ದಾಖಲು..!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ಮಲ್ಲಿಕಾರ್ಜುನ ಖರ್ಗೆ, ಎಂ ಬಿ ಪಾಟೀಲ್ ಸೇರಿದಂತೆ 7 ಜನರ ವಿರುದ್ದ ದೂರು ದಾಖಲು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada