ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಇಂದು ಇಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ, ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸಿದ್ದರಾಮಯ್ಯನವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮುನ್ನ ಸಿದ್ದರಾಮಯ್ಯನವರು ನಂಜನಗೂಡಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕ್ಷೇತ್ರದ ಜನತೆ ಸಿದ್ದರಾಮಯ್ಯನವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ, ಅವರ ಮನೆ ದೇವರಾದ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿ, ಬಳಿಕ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
