ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ, ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿಎಂ(CM) ಸಿದ್ದರಾಮಯ್ಯ(Siddaramaiah) ಅವರು ಬಿಜೆಪಿ(BJP) ಸದಸ್ಯರಿಗೆ ಸವಾಲು ಹಾಕಿದರು.
ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದರು. ಈ ವೇಳೆ ಪರಿಷತ್ ವಿರೋಧ ಪಕ್ಷದ(Opposition Leader) ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ(Kota Srinivasa Poojari) ಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ(Prime Minister) ಮತ್ತು ರಾಷ್ಟ್ರಪತಿ(President) ಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ. ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ ಎಂದು ಪ್ರಶ್ನಿಸಿದರು.
#Siddaramaiah #CMofKarnataka #OppsitionLeader #Congress