ಮೈಸೂರು : ಬರ ಪರಿಹಾರ ವಿಷಯವನ್ನು ಪ್ರಧಾನಿಗಳ (Modi) ಗಮನಕ್ಕೆ ತರಲಾಗಿದೆ.ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ (Amithsha) ಅವರನ್ನು ಭೇಟಿ ನೀಡಿದಾಗ ಡಿಸೆಂಬರ್ 23 ರಂದು ಸಭೆ ಕರೆದು ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಲ್ಲ. ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು. ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದ ರೈತರು ಬರಗಾಲದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಬಿಡುಗಡೆ ಮಾಡಿ ಎಂದು ಅವರಿಗೆ ನೆನಪು ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು
![](https://pratidhvani.com/wp-content/uploads/2024/01/IMG-20240124-WA0079-1-1024x768.webp)
ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ
ಇಂದಿನವರೆಗೆ ನಮ್ಮ ಸರ್ಕಾರ ದನಕರುಗಳಿಗೆ ಹಾಗೂ ಜನಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಜನರು ಗುಳೇ ಹೋಗದಂತೆ ನಿಭಾಯಿಸಿದ್ದೇವೆ. 550 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರವಾಗಿ ಈವರೆಗೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತನ್ನು ತಲುಪಿಸುವ ಪ್ರಯತ್ನ ಮಾಡಲಾಗುವುದು ಎಂದರು.
![](https://pratidhvani.com/wp-content/uploads/2024/01/IMG-20240124-WA0078-1-1024x768.webp)