• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
November 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೇ ಆಗಲಿ ಮಾತನಾಡಿಲ್ಲ. ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಾ ಇದ್ದೀರಿ. ನೀವುಗಳೇ ಅನವಶ್ಯಕ ಗೊಂದಲ ಮೂಡಿಸುತ್ತಿದ್ದೀರಿ. ನನಗೂ ಹಾಗೂ ಯಾರಿಗೂ ಗೊಂದಲಗಳಿಲ್ಲ. ಏನಾದರೂ ಇದ್ದರೆ ನಾನು ಹಾಗೂ ಪಕ್ಷದ ಹೈಕಮಾಂಡ್ ಬಗೆಹರಿಸಿಕೊಳ್ಳುತ್ತೇವೆ. ಏನೇ ತೀರ್ಮಾನ ಆಗಿದ್ದರು ಅದು ಒಂದು ಕೊಠಡಿಯ ಆಂತರಿಕ ಚೌಕಟ್ಟಿನ ಒಳಗೆ ಆಗಿರುತ್ತದೆ” ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಳಿದಾಗ, “ಮೊನ್ನೆಯೇ ದೆಹಲಿಯಲ್ಲಿ ಭೇಟಿ ಮಾಡಿದ್ದೇನೆ. ಪದೇ, ಪದೇ ಭೇಟಿ ಮಾಡುವುದು ಸರಿಯೇ? ಸಂದರ್ಭ ಬಂದರೆ ಹೋಗಿ ಭೇಟಿ ಮಾಡುತ್ತೇನೆ. ಅವರು ದೆಹಲಿಗೆ ಹೋಗಿ ಬಂದ ನಂತರ ಭೇಟಿಗೆ ಅವಕಾಶ ಕೇಳುತ್ತೇನೆ. ಸುಮ್ಮನೆ ಅವರಿಗೆ ತೊಂದರೆ ಕೊಡುವುದು ಬೇಡ” ಎಂದರು.

“ನೀವು (ಮಾಧ್ಯಮ) ನನಗೆ ಹಾಗೂ ಅವರಿಗೆ ಓಡಾಡುವುದಕ್ಕೂ ಬಿಡದಂತೆ ಬಾಗಿಲಿನಲ್ಲೇ ನಿಂತಿದ್ದೀರಿ. ಡಿ.ಕೆ.ಶಿವಕುಮಾರ್ ಒಳ ಹೋದರು, ಬಂದರು. ಕಾಫಿ ಕುಡಿದರು, ಉಪಹಾರ ಮಾಡಿದರು, 40-50 ನಿಮಿಷ ಮಾತನಾಡಿದರು ಎಂದು ಎಲ್ಲರ ಉದ್ವೇಗವನ್ನು ಜಾಸ್ತಿ ಮಾಡುತ್ತಾ ಇದ್ದೀರಿ. ಎಲ್ಲರಿಗೂ ಮಾಧ್ಯಮಗಳದ್ದೇ ಹೆಚ್ಚು ತೊಂದರೆಯಾಗಿದೆ. ನಮಗೆಲ್ಲ ಯಾವುದೇ ತೊಂದರೆಗಳಿಲ್ಲ” ಎಂದರು.

ದೆಹಲಿಗೆ ಹೋಗುವವರನ್ನು ಬೇಡ ಎನ್ನಲು ಆಗುತ್ತದೆಯೇ?
ಬಾಲಕೃಷ್ಣ ಸೇರಿದಂತೆ ಕೆಲವರು ದೆಹಲಿಗೆ ಹೋಗಿರುವ ಬಗ್ಗೆ ಕೇಳಿದಾಗ, “ಮಂತ್ರಿಯಾಗ ಬೇಕು ಎನ್ನುವ ಆಸೆ ಇರುತ್ತದೆ. ತಪ್ಪೇನಿದೆ ಅದಕ್ಕೆ ಹೋಗುತ್ತಾರೆ. ದೆಹಲಿಗೆ ಹೋಗುವವರನ್ನು ಬೇಡ ಎನ್ನಲು ಆಗುತ್ತದೆಯೇ? ದೆಹಲಿಯ ಪಕ್ಷದ ಕಚೇರಿ ನಮಗೆಲ್ಲ ದೇವಸ್ಥಾನ ಇದ್ದಂತೆ. ಭವಿಷ್ಯ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಹೋಗುತ್ತಾರೆ” ಎಂದರು.

ಇದರಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗುತ್ತಿದೆ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ಪಕ್ಷ ವಿರೋಧಿ ಹೇಳಿಕೆ ನೀಡಿ. ಗುಂಪುಗಳನ್ನು ಮಾಡಿ, ಡಿನ್ನರ್ ಮೀಟಿಂಗ್ ಗಳ ರೀತಿ ಮಾಡಿ ಪಕ್ಷದ ವಿರುದ್ಧ ಹೋದರೆ ಉಲ್ಲಂಘನೆಯಾಗುತ್ತದೆ.‌ ಈಗ ಏನು ಉಲ್ಲಂಘನೆ ಆಗುತ್ತದೆ? ಯಾರಾದರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆಯೇ? ಸಂಪುಟ ಪುನರ್ ರಚನೆ ಮಾಡಲಾಗುತ್ತದೆ ಎನ್ನುವ ಕಾರಣಕ್ಕೆ ತಮಗೂ ಅವಕಾಶ ಸಿಗಲಿ ಎಂದು ಹೋಗಿದ್ದಾರೆ” ಎಂದರು.

ಏಕಾಏಕಿ ತೀರ್ಮಾನ ಮಾಡಲು ಆಗುತ್ತದೆಯೇ?
ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎನ್ನುವ ಹೇಳಿಕೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ರಬ್ಬರ್ ಸ್ಟಾಂಪ್ ಅಧ್ಯಕ್ಷರು ಎಂದು ಜೆಡಿಎಸ್- ಬಿಜೆಪಿ ವ್ಯಂಗ್ಯದ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಎಂದು ಏಕೆ ಹೇಳಿದ್ದಾರೆ ಎಂದರೆ ಪಕ್ಷದಲ್ಲಿ ಒಂದಷ್ಟು ನಾಯಕರನ್ನು ಒಳಗೊಂಡ ಸಮಿತಿಯಿದೆ. ನಾನು ಕೆಪಿಸಿಸಿ ಅಧ್ಯಕ್ಷನಾದ ತಕ್ಷಣ ಏಕಾಏಕಿ ತೀರ್ಮಾನ ಮಾಡಲು ಆಗುತ್ತದೆಯೇ? ಇತ್ತೀಚಿಗೆ ನಾಲ್ಕು ಜನರ ಹೆಸರನ್ನು ಅಂತಿಮಗೊಳಿಸುವಾಗ ಸಿದ್ದರಾಮಯ್ಯ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಅಧ್ಯಕ್ಷರು, ಆಂಕಾಕ್ಷಿಗಳನ್ನು ಕರೆದು ಮಾತನಾಡಿದ್ದೇನೆ. ಇಷ್ಟು ಜನ ಅರ್ಜಿ ಹಾಕಿದ್ದಾರೆ. ಇಂತಹವರ ಅಭಿಪ್ರಾಯ ಈ ರೀತಿಯಿದೆ, ಅವರ ಹಿನ್ನೆಲೆ ಈ ರೀತಿಯಿದೆ ಎಂದು ಕಳಿಸುತ್ತೇನೆ. ಆ ದಾಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಚುನಾವಣಾ ಸಮಿತಿ ಎಂದ ಮೇಲೆ ಒಬ್ಬರೇ ಮಾಡುತ್ತಾರಾ? ಹತ್ತಾರು ಜನ ಸೇರಿ ತೀರ್ಮಾನ ಮಾಡುತ್ತಾರೆ” ಎಂದರು.

ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಅವರ ನಿಧನಕ್ಕೆ ಸಂತಾಪ
“ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಅವರು ತಮ್ಮ ಶೋಲೆ ಚಿತ್ರದ ಮೂಲಕ ಬೆಂಗಳೂರು ದಕ್ಷಿಣ ಜಿಲ್ಲೆಯ ಬೆಟ್ಟ ಗುಡ್ಡಗಳಿಗೆ ಮಹತ್ವ ತಂದು ಕೊಟ್ಟವರು. ಚಿತ್ರರಂಗದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ಕೊಟ್ಟವರು. ಅವರ ಕೆಲಸ ಕಾರ್ಯಗಳನ್ನು ಗಮನಿಸುತ್ತಾ ಬಂದವನು ನಾನು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದವರು. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆತ್ಮಕ್ಕೆ ಶಾಂತಿ ಸಿಗಲಿ ಎಂದು ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಆ ದೇವರಲ್ಲಿ ಬೇಡಿಕೊಳ್ಳುತ್ತೇನೆ” ಎಂದರು.

Tags: cm siddaramaiah dk shivakumarDCM DK ShivakumarDK Shivakumardk shivakumar cm buzzdk shivakumar delhidk shivakumar interviewdk shivakumar latest newsdk shivakumar meetingdk shivakumar newsdk shivakumar next cm karnatakadk shivakumar on rahul gandhidk shivakumar pm modidk shivakumar press updatedk shivakumar speechdk shivakumar today newsdk shivakumar updateskarnataka cm dk shivakumarkarnataka dk shivakumarrahul gandhi dk shivakumarsiddaramaiah vs dk shivakumar
Previous Post

ಎಟಿಎಂ ಹಣ ರಾಬರಿ: ಮತ್ತೆ ಇಬ್ಬರ ಬಂಧನ

Next Post

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada