• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಲಸಿಕೆ ಕೊರತೆ; ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?: ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
July 14, 2021
in ಕರ್ನಾಟಕ, ದೇಶ, ರಾಜಕೀಯ
0
‘ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು’ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿದೆ.  ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು, ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ADVERTISEMENT

ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇಕಡಾ 20ರಷ್ಟು ಲಸಿಕೆಗಳೂ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ದ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲಿ ಲಭ್ಯ ಇರುವ ಲಸಿಕೆಗಳನ್ನು ಕೂಡಾ ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ ಎಂದು ದೂರಿದ್ದಾರೆ.

ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಡೋಸ್ ಗಳಂತೆ ಒಟ್ಟು 9.6 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ.

ಒಂದೆಡೆ ಯುವಜನರನ್ನು ಗುರಿಯಾಗಿಟ್ಟುಕೊಂಡಿದೆಯೆನ್ನಲಾದ ಕೊರೊನಾ ಮೂರನೇ ಅಲೆಯ ಭೀತಿ, ಇನ್ನೊಂದೆಡೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರದ ಪ್ರಯತ್ನ. ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಪೂರ್ವ ಸಿದ್ದತೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದಿದ್ದಾರೆ.

ಜುಲೈ ಅಂತ್ಯದೊಳಗೆ ದೇಶಾದ್ಯಂತ 51.6 ಕೋಟಿ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿತ್ತು. ಈ ಗುರಿ ಸಾಧನೆಗಾಗಿ ಪ್ರತಿದಿನ 70 ಲಕ್ಷ ಲಸಿಕೆ ನೀಡಬೇಕಾಗಿದ್ದರೂ ಈಗ 40 ಲಕ್ಷ ಲಸಿಕೆ ಮಾತ್ರ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 38.5 ಕೋಟಿ ಲಸಿಕೆಗಳನ್ನಷ್ಟೇ ನೀಡಲಾಗಿದೆ. ದಿನದಿಂದ ದಿನಕ್ಕೆ ಲಸಿಕೆ ನೀಡಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾದರೆ ಮುಂದೇನು? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಸುಳ್ಳಿನ ಸೇರ್ಪಡೆ ಅಷ್ಟೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

Tags: Karnataka GovernmentModi GovernmentsiddaramaiahYediyurappa
Previous Post

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯಾಗುವ ದೊಡ್ಡ ಸುಳಿವು: ಮೂವರು ಗಾಂಧಿಗಳೊಂದಿಗೆ ಚರ್ಚೆ?

Next Post

ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನ ಮಾಡಲು ಚಿಂತನೆ; ಸಚಿವ ಎಸ್.ಟಿ.ಸೋಮಶೇಖರ್

Related Posts

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ
ಕರ್ನಾಟಕ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

by ಪ್ರತಿಧ್ವನಿ
May 15, 2026
0

ಬೆಂಗಳೂರು: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಶಿವಧಾರ ಸೇರಿದಂತೆ ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ...

Read moreDetails
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನ ಮಾಡಲು ಚಿಂತನೆ; ಸಚಿವ ಎಸ್.ಟಿ.ಸೋಮಶೇಖರ್

ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನ ಮಾಡಲು ಚಿಂತನೆ; ಸಚಿವ ಎಸ್.ಟಿ.ಸೋಮಶೇಖರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada