ಜೆಡಿಎಸ್ನವರು ಯಾವ ಯಾತ್ರೆ ಮಾಡಿದ್ರು ಪರವಾಗಿಲ್ಲ ಅಷ್ಟ ರತ್ನ,ದಶರತ್ನ ಮಾಡಲಿ ಅವರ ಸಂಘಟನೆ ಅವರಿಗೆ ನಾನು ಯಾರಿಗೂ ತಲೆ ಕೆಡೆಸಿಕೊಳ್ಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯ ಬಂದಿದೆ ನಾನು ಮೂರು ಕ್ಷೇತ್ರಗಳನ್ನ ಶಾರ್ಟ್ ಲಿಸ್ಟ್ ಮಾಡಿದ್ದೇನೆ ಕೋಲಾರ, ಬಾದಾಮಿ ಹಾಗೂ ವರುಣಾ ಕ್ಷೇತ್ರ ಶಾರ್ಟ್ ಲಿಸ್ಟ್ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ಘೋಷಣೆ ನಂತರ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಹೇಳುತ್ತೇನೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಸೋಲಿನ ಭಯದಲ್ಲಿ ಸರ್ವೆ ಮೊರೆ ಹೋಗಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ ಸರ್ವೆ ಮಾಡಿಸಿದರೆ ತಪ್ಪೇನು ನರೇಂದ್ರ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ವ ಹಾಗಾದ್ರೆ ಅವ್ರು ಸರ್ವೆ ಮಾಡಿಸಿರಲಿಲ್ವ. ನಾವು ರಾಜ್ಯವ್ಯಾಪಿ ಪ್ರವಾಸ ಮಾಡುತ್ತೇವೆ ಸುರಕ್ಷಿತ ಕ್ಷೇತ್ರಕ್ಕಾಗಿ ಸರ್ವೆ ಮಾಡಿಸಿರುತ್ತಾರೆ ನಾನು ಸರ್ವೆ ಮಾಡಿಸಿಲ್ಲ, ಪಕ್ಷ ಸರ್ವೆ ಮಾಡಿಸಿಲ್ಲ ಎಂದಿದ್ದಾರೆ.






