Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನಾವು ನೀಡಿದ್ದ 165 ಭರವಸೆಗಳಲ್ಲಿ 157 ಈಡೇರಿಸಿದ್ದೇವೆ, 600 ಭರವಸೆಗಳನ್ನು ನೀಡಿದ ಬಿಜೆಪಿ 25 ಮಾತ್ರ ಈಡೇರಿಸಿದೆ: ಸಿದ್ದರಾಮಯ್ಯ

ಪ್ರತಿಧ್ವನಿ

ಪ್ರತಿಧ್ವನಿ

November 28, 2022
Share on FacebookShare on Twitter

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ, ಮಲೆನಾಡು ಭಾಗದ ರೈತರ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್ ಜನಾಕ್ರೋಶ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ಥರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದರು, ಕೊಡಿಸಿದ್ದಾರ? ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಡಬ್ಬಲ್‌ ಇಂಜಿನ್‌ ಸರ್ಕಾರ ಇದೆ, ಯಡಿಯೂರಪ್ಪ, ಈಶ್ವರಪ್ಪ ಇದೇ ಜಿಲ್ಲೆಯವರು, ರೈತರ ಪರ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಾರೆ ಆದರೆ ಜಿಲ್ಲೆಯ ರೈತರಿಗೆ ನ್ಯಾಯ ಸಿಕ್ಕಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

ಕಾವೇರಿ ಬಿಕ್ಕಟ್ಟು ಬಗೆಹರಿಸಲು ರಾಜ್ಯಗಳ ನಡುವೆ ಒಮ್ಮತ ಮೂಡಬೇಕು: ಎಚ್‌ಡಿ ದೇವೇಗೌಡ

ಸಿದ್ದರಾಮಯ್ಯ ಅವರ ಭಾಷಣದ ಸಂಪೂರ್ಣ ಪಠ್ಯ ಇಲ್ಲಿದೆ:

ಶಿವಮೊಗ್ಗದಲ್ಲಿ ನಾನು ಅನೇಕ ಸಭೆಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದೇನೆ ಆದರೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದು ಇದು ಮೊದಲು, ಇದಕ್ಕೆ ಕಾರಣ ಈ ಭಾಗದ ಸಮಸ್ಯೆಗಳು. ರೈತರ ಅಡಿಕೆ, ತೆಂಗು, ಮೆಣಸು, ಭತ್ತ ಮುಂತಾದ ಬೆಳೆಗಳು ರೋಗಗಳಿಗೆ ತುತ್ತಾಗಿ, ಸೂಕ್ತ ಬೆಲೆ ಸಿಗದೆ ರೈತರು ಸಂಕಷ್ಟದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುವುದು ಶತಸಿದ್ಧ. ನಾವು ಅಧಿಕಾರಕ್ಕೆ ಬಂದ ನಂತರ ಇಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ನಾವು ಮಾಡುತ್ತೇವೆ. ನಾವು ನುಡಿದಂತೆ ನಡೆದ ಸರ್ಕಾರ. 2013ರಲ್ಲಿ ನಾವು ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ್ದೇವೆ. ಇದರ ಜೊತೆಗೆ 30 ಹೆಚ್ಚುವರಿ ಕಾರ್ಯಕ್ರಮಗಳನ್ನು ಜನರಿಗೆ ನೀಡಿದ್ದೇವೆ. ಹೀಗೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದ ಸರ್ಕಾರ ಇದ್ದರೆ ಅದು ಕಾಂಗ್ರೆಸ್‌ ಸರ್ಕಾರ. ಈಗಿನ ಬಿಜೆಪಿ ಸರ್ಕಾರ ಜನರಿಗೆ 600 ಭರವಸೆಗಳನ್ನು ನೀಡಿ ಅದರಲ್ಲಿ 25 ಭರವಸೆಗಳನ್ನು ಈಡೇರಿಸಿ, 30 ಭರವಸೆಗಳನ್ನು ಅರ್ಧಬಂರ್ಧ ಈಡೇರಿಸಿದ್ದಾರೆ. ಇದು ಜನರಿಗೆ ಮಾಡಿದ ದ್ರೋಹ ಅಲ್ಲವಾ?

ಶಿವಮೊಗ್ಗ ಜಿಲ್ಲೆ ಹೋರಾಟಗಳ ತವರೂರು. ಇಲ್ಲಿ ಉಳುವವನೇ ಭೂಮಿಯ ಒಡೆಯ ಹೋರಾಟ, ಸಮಾಜವಾದಿ ಹೋರಾಟಗಳು ನಡೆದಿವೆ. ಈ ಹೋರಾಟಗಳಲ್ಲಿ ಭಾಗಿಯಾಗಿರುವಂತಹ ಕಾಗೋಡು ತಿಮ್ಮಪ್ಪನವರು ಇಂದು ನಮ್ಮ ನಡುವೆ ಸಾಕ್ಷಿಪ್ರಜ್ಞೆಯಾಗಿ ಜೊತೆ ನಿಂತಿದ್ದಾರೆ. 2015ರಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದರು, ಕಾಗೋಡು ತಿಮ್ಮಪ್ಪನವರು ಅಂದು ಸಭಾಪತಿಗಳಾಗಿದ್ದರು, ಈ ಸಮಸ್ಯೆಯನ್ನು ಬಗೆಹರಿಸಲೇಬೇಕು ಎಂದು ಹೇಳಿದಾಗ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಾಗಿದ್ದ ಮದನ್‌ ಗೋಪಾಲ್‌ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚನೆ ಮಾಡಿದ್ದೆ, ಈ ಸಮಿತಿ ಸಭೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡಿತ್ತು. ಶರಾವತಿ ಸಂತ್ರಸ್ಥ 7 ಸಾವಿರ ಕುಟುಂಬಗಳಿಗೆ 9945 ಎಕರೆ ಅರಣ್ಯ ಭೂಮಿಯನ್ನು ಹಿಂದೆ ನೀಡಲಾಗಿತ್ತು, ಆದರೆ ಈ ಜಮೀನಿನ ಹಕ್ಕು ಪತ್ರವನ್ನು ವಾಸವಿದ್ದ ಜನರಿಗೆ ನೀಡಿರಲಿಲ್ಲ. ನಮ್ಮ ಸರ್ಕಾರ ಈ ಜನರಿಗೆ ಹಕ್ಕು ಪತ್ರ ನೀಡುವ ತೀರ್ಮಾನ ಮಾಡಿದೆವು. ನಾವು ಸುಮಾರು 1000ಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ನೀಡುವ ಕೆಲಸ ಮಾಡಿದ್ದೆವು, ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದ್ದರೆ ಎಲ್ಲಾ ಜನರಿಗೂ ಹಕ್ಕು ಪತ್ರ ನೀಡುವ ಕೆಲಸ ಮಾಡುತ್ತಿದ್ದೆವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿಲ್ಲ. 2019ರಲ್ಲಿ ಗಿರೀಶ್‌ ಆಚಾರ್‌ ಎಂಬುವವರು ನಾವು ಹೊರಡಿಸಿದ್ದ 56 ಆದೇಶಗಳನ್ನು ಹೈಕೋರ್ಟ್‌ ನಲ್ಲಿ ಪ್ರಶ್ನಿಸಿದರು, ಇದರಿಂದಾಗಿ ಹೈಕೋರ್ಟ್‌ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ನಮ್ಮ ನೋಟಿಫಿಕೇಷನ್‌ ಅನ್ನು ವಜಾ ಮಾಡಿತು.

ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ಥರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದರು, ಕೊಡಿಸಿದ್ದಾರ? ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಡಬ್ಬಲ್‌ ಇಂಜಿನ್‌ ಸರ್ಕಾರ ಇದೆ, ಯಡಿಯೂರಪ್ಪ, ಈಶ್ವರಪ್ಪ ಇದೇ ಜಿಲ್ಲೆಯವರು, ರೈತರ ಪರ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಾರೆ ಆದರೆ ಜಿಲ್ಲೆಯ ರೈತರಿಗೆ ನ್ಯಾಯ ಸಿಕ್ಕಿದೆಯಾ? ಈಶ್ವರಪ್ಪ ಅವರಂಥ ಕಡು ಭ್ರಷ್ಟ ಯಾರು ಇಲ್ಲ, ಸಂತೋಷ್‌ ಎಂಬ ಗುತ್ತಿಗೆದಾರ 40% ಲಂಚ ನೀಡಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಿಲ್‌ ಹಣ ನೀಡಿಲ್ಲ, ಇದರಿಂದ ನೊಂದು ಆತ ಆತ್ಮಹತ್ಯೆ ಮಾಡಿಕೊಂಡರು. ತನ್ನ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡರೂ ಅವರಿಗೆ ಪೊಲೀಸರ ಮೂಲಕ ತನಿಖೆ ನಡೆಸಿ ನಿರಾಪರಾಧಿ ಎಂದು ಬಿ ರಿಪೋರ್ಟ್‌ ನೀಡಿದರು. ಉತ್ತರ ಕನ್ನಡದ ಪರೇಶ್‌ ಮೇಸ್ತಾ ಸಾವಿಗೀಡಾದಾಗ ಕೊಲೆ ಆಗಿದೆ ಎಂದು ಇಡೀ ಜಿಲ್ಲೆಯಾದ್ಯಾಂತ ಹೋರಾಟ ಮಾಡಿ, ಜನರನ್ನು ರೊಚ್ಚಿಗೆಬ್ಬಿಸಿ ಚುನಾವಣೆ ಗೆಲ್ಲುವ ಕುತಂತ್ರ ಮಾಡಿದರು. ಈ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಬಿಐ ರಿಪೋರ್ಟ್‌ ಅನ್ನು ಸಿದ್ದರಾಮಯ್ಯ ಹೇಳಿ ಬರೆಸಿದ್ದು, ಸಿದ್ದರಾಮಯ್ಯ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಹೇಳುವ ಬಿಜೆಪಿ ಅವರಿಗೆ ನಾಚಿಕೆಯಾಗಲ್ವಾ?

ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಸಿದ್ದರಾಮಯ್ಯ ಅವರು ತಮ್ಮ ಲೇಬಲ್‌ ಅಂಟಿಸಿಕೊಂಡು ಪ್ರಚಾರ ಪಡೆದಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಅವರು ಆರೋಪ ಮಾಡಿದ್ದಾರೆ. ಹಾಗಾದರೆ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿದವರು ಯಾರು ಎಂದು ಬೊಮ್ಮಾಯಿ ಅವರಿಗೆ ಗೊತ್ತಿಲ್ವಾ? ಅಟಲ್‌ ಬಿಹಾರಿ ವಾಜಪೇಯಿ ಅವರಾಗಲೀ ನರೇಂದ್ರ ಮೋದಿ ಅವರಾಗಲೀ ಅಲ್ಲ, ಮನಮೋಹನ್‌ ಸಿಂಗ್‌ ಅವರ ಕಾಂಗ್ರೆಸ್‌ ಸರ್ಕಾರ. ಎಲ್ಲಾ ಜಾತಿಯ ಬಡ ಜನರಿಗೆ ಉಚಿತವಾಗಿ 7 ಕೆ.ಜಿ ಅಕ್ಕಿ ನೀಡುವ ಕಾರ್ಯಕ್ರಮ ಜಾರಿಗೆ ತಂದಿದ್ದೆ, ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದರೆ ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ, ಅಸ್ಸಾಂ ನಲ್ಲಿ ಯಾಕೆ ಇಲ್ಲ? ನಮ್ಮ ಸರ್ಕಾರ ನೀಡುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದ್ದು ಬೊಮ್ಮಾಯಿ ಅವರು. ಮತ್ತೆ ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ಅಕ್ಕಿಯನ್ನು ಕಡಿತ ಮಾಡಿದವರು ಬಡವರ ಪರವಾಗಿ ಇರಲು ಸಾಧ್ಯವೇ?

ಇಂದಿರಾ ಗಾಂಧಿ ಅವರು ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದವರು. ಉಳುವವನೆ ಭೂಮಿಯ ಒಡೆಯ ಎಂಬ ಕಾಯ್ದೆಯನ್ನು ಜಾರಿಗೆ ಕೊಟ್ಟವರು ದೇವರಾಜ ಅರಸು ಅವರು. ಇಂದು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಉಳ್ಳವನನ್ನೇ ಭೂಮಿಯ ಒಡೆಯ ಮಾಡುತ್ತಿರುವುದು ಬಿಜೆಪಿ ಸರ್ಕಾರ. ಈ ಬಿಜೆಪಿ ಸರ್ಕಾರವನ್ನು 40% ಕಮಿಷನ್‌ ಸರ್ಕಾರ ಎಂದು ಹೇಳಿದವರು ಗುತ್ತಿಗೆದಾರರ ಸಂಘದವರು. ನ ಖಾವೂಂಗಾ ನ ಖಾನೆದೂಂಗ ಎಂದು ಹೇಳುವ ನರೇಂದ್ರ ಮೋದಿ ಅವರು ಯಾಕೆ ಸುಮ್ಮನಿದ್ದಾರೆ? ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಮೋದಿ ಅವರಿಗೆ ಪತ್ರ ಬರೆದು ಒಂದು ವರ್ಷ ಕಳೆದಿದೆ ಏನಾದರೂ ಕ್ರಮ ಕೈಗೊಂಡರಾ?

ಬಂಗಾರಪ್ಪ ಅವರು, ಕಾಗೋಡು ತಿಮ್ಮಪ್ಪ ಅವರು ಮುಖ್ಯಮಂತ್ರಿ, ಮಂತ್ರಿ ಆಗಿದ್ದರು ಇವರ ಆಸ್ತಿಪಾಸ್ತಿಗಳನ್ನು ನೋಡಿ, ಬಿಜೆಪಿಯವರ ಆಸ್ತಿಯನ್ನು ನೋಡಿ. ಕೋಟಿ ಕೋಟಿ ಲೂಟಿ ಮಾಡಿ ಆಸ್ತಿ ಮಾಡಿಕೊಂಡಿದ್ದಾರೆ. ಇವರಿಗೆ ನರೇಂದ್ರ ಮೋದಿ ಅವರು ರಕ್ಷಣೆ ನೀಡುತ್ತಿದ್ದಾರೆ. ಐಟಿ, ಇಡಿ ಅವರು ಕಾಂಗ್ರೆಸಿನವರನ್ನು ಹುಡುಕಿ ಹುಡುಕಿ ರೇಡ್‌ ಮಾಡಿ ಜೈಲಿಗೆ ಹಾಕುತ್ತಾರೆ. ಬಿಜೆಪಿಯವರೇನು ಹರಿಶ್ಚಂದ್ರರಾ? ಇಂದು ನೇಮಕಾತಿ, ವರ್ಗಾವಣೆ, ಗುತ್ತಿಗೆ ಕಾಮಗಾರಿಗಳಲ್ಲಿ ಲಂಚ ನಡೆಯುತ್ತಿದೆ. ಹೋಟೆಲ್‌ ನ ಮೆನುವಿನಂತೆ ಎಲ್ಲಾ ಅಧಿಕಾರಿಗಳಿಗೆ ಒಂದೊಂದು ರೇಟ್‌ ಫಿಕ್ಸ್‌ ಮಾಡಿದ್ದಾರೆ. ಇಂಥಾ ಸರ್ಕಾರ ಇರಬೇಕಾ?

ದೇಶದ ಯುವಕರನ್ನು ಜಾತಿ, ಧರ್ಮಗಳ ಆಧಾರದಲ್ಲಿ ಎತ್ತಿ ಕಟ್ಟಿ ಬಡಿದಾಡುವಂತೆ ಮಾಡಿದ್ದಾರೆ. ಹಿಜಾಬ್‌, ಪ್ರಾರ್ಥನಾ ಮಂದಿರಗಳ ಪ್ರಾರ್ಥನೆ ಮುಂತಾದ ವಿಚಾರಗಳಲ್ಲಿ ಬಿಜೆಪಿ ಅವರು ಮಧ್ಯಪ್ರವೇಶ ಮಾಡುತ್ತಿದ್ದಾರೆ. ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗುತ್ತಿದೆ. ಈ ದೇಶ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ, ಇದು ಸರ್ವ ಧರ್ಮಗಳ ನಾಡು. ಇದನ್ನು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನವೂ ಹೇಳುತ್ತದೆ. ಈ ಸಂವಿಧಾನದ ಕತ್ತು ಹಿಸುಕುವ ಕೆಲಸವನ್ನು ಮಾಡುತ್ತಿದ್ದಾರೆ. ನಾವದನ್ನು ಗಟ್ಟಿಧ್ವನಿಯಿಂದ ವಿರೋಧ ಮಾಡಬೇಕಾಗಿದೆ.

ದೇಶದಲ್ಲಿ ಜನರ ಮನಸುಗಳ ಒಡೆದಿವೆ, ಭ್ರಷ್ಟಾಚಾರ, ದುರಾಡಳಿತ, ಬೆಲೆಯೇರಿಕೆ ಮಿತಿಮೀರಿದೆ ಎಂಬ ಕಾರಣಕ್ಕೆ ರಾಹುಲ್‌ ಗಾಂಧಿ ಅವರು 3575 ಕಿ.ಮೀ ಪಾದಯಾತ್ರೆ ಮಾಡುತ್ತಿದ್ದಾರೆ. ಸ್ವತಂತ್ರ ಭಾರತದಲ್ಲಿ ಯಾವೊಬ್ಬ ನಾಯಕನೂ ಇಷ್ಟು ದೊಡ್ಡ ಪಾದಯಾತ್ರೆ ಮಾಡಿದ ನಿದರ್ಶನ ಇಲ್ಲ. ಇಂದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನ ಬದುಕುವುದು ಕಷ್ಟವಾಗಿದೆ. ಇಂಥಾ ಸರ್ಕಾರವನ್ನು ಕಿತ್ತು ಹಾಕಬೇಕು, ಈ ಹೋರಾಟ ಶಿವಮೊಗ್ಗ ಜಿಲ್ಲೆಯಿಂದಲೇ ಆರಂಭ ಆಗಬೇಕು.

RS 500
RS 1500

SCAN HERE

Pratidhvani Youtube

«
Prev
1
/
5518
Next
»
loading
play
Congress | DCM ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ.
play
D K Shivakumar | ಯಾವುದೇ ಕಾರಣಕ್ಕೂನಾವು ಕೆ ಆರ್ ಎಸ್ ಇಂದ ನೀರು ಕೊಡುವ ಸ್ಥಿತಿ ಉದ್ಭವಿಸುವುದಿಲ್ಲ|
«
Prev
1
/
5518
Next
»
loading

don't miss it !

ಜಟಿಲ ಸಿಕ್ಕುಗಳ ನಡುವೆ ರಂಗಭೂಮಿಯ ಆದ್ಯತೆಗಳು
ಅಂಕಣ

ಜಟಿಲ ಸಿಕ್ಕುಗಳ ನಡುವೆ ರಂಗಭೂಮಿಯ ಆದ್ಯತೆಗಳು

by ನಾ ದಿವಾಕರ
September 25, 2023
ಚಂದ್ರನ ಮೇಲೆ  ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌
ಇದೀಗ

ಚಂದ್ರನ ಮೇಲೆ ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌

by Prathidhvani
September 21, 2023
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ
Top Story

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

by ಪ್ರತಿಧ್ವನಿ
September 27, 2023
ರಸ್ತೆ ಹೊಂಡ ಗುಂಡಿಗಳಾಗಿ ವಾಹನ ಸಂಚಾರಕ್ಕೆ ಅಡ್ಡಿ: ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿಗಳು
Top Story

ರಸ್ತೆ ಹೊಂಡ ಗುಂಡಿಗಳಾಗಿ ವಾಹನ ಸಂಚಾರಕ್ಕೆ ಅಡ್ಡಿ: ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿಗಳು

by ಪ್ರತಿಧ್ವನಿ
September 23, 2023
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅನಾವರಣ
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅನಾವರಣ

by ಪ್ರತಿಧ್ವನಿ
September 22, 2023
Next Post
ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದು ಪಡಿಸಿದ ಕೇಂದ್ರ

ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದು ಪಡಿಸಿದ ಕೇಂದ್ರ

ಮೈಸೂರು ಪೇಂಟ್ ಆಧುನೀಕರಣಕ್ಕೆ ಅಗತ್ಯ ನೆರವು: ಸಿಎಂ ಬೊಮ್ಮಾಯಿ

ಮೈಸೂರು ಪೇಂಟ್ ಆಧುನೀಕರಣಕ್ಕೆ ಅಗತ್ಯ ನೆರವು: ಸಿಎಂ ಬೊಮ್ಮಾಯಿ

ಬಿಜೆಪಿಗೆ ಸುಮಲತಾ ಆಪ್ತರ ಸೇರ್ಪಡೆ; ಸಂಸದರು ಬಿಜೆಪಿ ಸೇರೋದು ಯಾವಾಗ ?

ಬಿಜೆಪಿಗೆ ಸುಮಲತಾ ಆಪ್ತರ ಸೇರ್ಪಡೆ; ಸಂಸದರು ಬಿಜೆಪಿ ಸೇರೋದು ಯಾವಾಗ ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist