ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ಮೋದಿ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ಈಗಾಗಲೇ ಅನೇಕ ಬಾರಿ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಗೆ ವಿಸಿಟ್ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಮುದ್ದೇನಹಳ್ಳಿ ಗ್ರಾಮಕ್ಕೆ ಆಗಮಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸರ್ ಎಂ ವಿಶ್ವೇಶ್ವರಯ್ಯ ಸಮಾಧಿ ಸ್ಮಾರಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸಚಿವ ಸುಧಾಕರ್ಗೆ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ , ಎಸ್ಪಿ ಡಿ.ಎಲ್ ನಾಗೇಶ್ ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಮುದ್ದೇನಹಳ್ಳಿಗೆ ಆಗಮಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸಿದ್ದರಾಮಯ್ಯ ವಿಧಾನಸಭಾ ಚುನಾವಣೆಗೆ ಕ್ಷೇತ್ರ ಆಯ್ಕೆ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಮಗೆ ನಮ್ಮ ಲೀಡರ್ದು ಗೊತ್ತಲ್ವಾ.. ಅವರಿಗೆ ಒಳ್ಳೆಯದಾಗಲಿ. ಸಿದ್ದರಾಮಯ್ಯ ಎರಡು ಕಡೆಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ. ಒಂದು ಕಡೆ ನಿಂತು ಗೆಲ್ಲೋದು ಆರಾಮ ಅಂತಾ ನನಗೆ ಎನಿಸುತ್ತಿದೆ. ಎರಡು ಕುದುರೆ ಮೇಲೆ ಸವಾರಿ ಮಾಡೋದು ಒಳ್ಳೆಯದಲ್ಲ ಅನ್ನೋದು ಅವರಿಗೆ 2018ರಲ್ಲಿಯೇ ಅವರಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.












