• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Any Mind by Any Mind
March 2, 2022
in ಕರ್ನಾಟಕ, ದೇಶ
0
ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಯುದ್ಧಗ್ರಸ್ತ ಯುಕ್ರೇನ್ ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ  ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ ಎಂದು ಮಾಜಿ ಸಿಎಂ ಸಿದ್ಸರಾಮಯ್ಯ ಕಿಡಿಕಾರಿದ್ದಾರೆ.

ADVERTISEMENT

ಕಳೆದ ಕೆಲವು ತಿಂಗಳುಗಳಿಂದ ಯುಕ್ರೇನ್ ಮತ್ತು ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ದ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ದ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ತನ್ನನ್ನು ವಿಶ್ವಗುರು ಎಂದು ಕೊಂಡಾಡುತ್ತಾ ಭಕ್ತರು ನಡೆಸುತ್ತಿರುವ ಬೋಪರಾಕ್ ಭಜನೆಗೆ ಪ್ರಧಾನಿಯವರು ತಲೆ ತೂಗುತ್ತಾ ಕಾಲಹರಣ ಮಾಡಿದರೇ ವಿನಹ ಯುದ್ಧಗ್ರಸ್ತ ಯುಕ್ರೇನ್ ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಹೇಳಿದ್ದಾರೆ.

ಯುಕ್ರೇನ್‌ನಲ್ಲಿ ಕರ್ನಾಟಕದ
ವೈದ್ಯಕೀಯ ವಿದ್ಯಾರ್ಥಿ ನವೀನ್ ಸಾವಿಗೆ ಯುದ್ದದಾಹಿ
ರಷ್ಯಾ ಸೇನೆ
ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ @PMOIndia ಮತ್ತು @BJP4India ಸರ್ಕಾರವೂ ಅಷ್ಟೇ ಹೊಣೆ.
2/3#UkraineRussiaWar

— Siddaramaiah (@siddaramaiah) March 1, 2022

ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕರ್ತವ್ಯ ಪ್ರಜ್ಞೆಯಿಂದಾಗಿ ಕೇಂದ್ರ ಸರ್ಕಾರದ ವೈಫಲ್ಯಗಳ ಪಟ್ಟಿಯನ್ನು ಪೂರ್ಣವಾಗಿ ನೀಡಲು ನಾನು ಬಯಸುವುದಿಲ್ಲ.ಯುಕ್ರೇನ್ ಮತ್ತು ರಷ್ಯಾ ನಡುವಿನ ಈಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಲೇ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಯುಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಯುಕ್ರೇನ್ ಮತ್ತು ರಷ್ಯಾ ದೇಶಗಳೆರಡರ ವೈಷಮ್ಯದ ನಡುವೆ ಸಿಕ್ಕಿಹಾಕಿಕೊಂಡು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಯುಕ್ರೇನ್ ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್  ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಆಗಿನ ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ  ಆ ಕಾರ್ಯಚಾರಣೆ ಬಗ್ಗೆ ನರೇಂದ್ರ ಮೋದಿ ಸರ್ಕಾರದಂತೆ ಪ್ರಚಾರ ಮಾಡಿ ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ ಎಂದು ಟೀಕಿಸಿದ್ದಾರೆ.

ಯುಕ್ರೇನ್‌ ಯುದ್ದಕ್ಕೆ ಅಮಾಯಕ ನಾಗರಿಕರು ಬಲಿಯಾಗುತ್ತಿರುವುದು‌ ದುರದೃಷ್ಟಕರ.

ಪ್ರಧಾನಿ @narendramodi ಮತ್ತು @MEAIndia ಅಂತರರಾಷ್ಟ್ರೀಯ ಸಂಬಂಧಗಳನ್ನು‌ ಬಳಸಿಕೊಂಡು ಯುದ್ದದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸಬೇಕು
3/3#UkraineRussiaWar

— Siddaramaiah (@siddaramaiah) March 1, 2022

ಆದರೆ ನರೇಂದ್ರ ಮೋದಿ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚಾರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಕೇಂದ್ರ ಸರ್ಕಾರ ಯುಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿ ಪಡಿಸಬೇಕು.

ವಿದೇಶದಲ್ಲಿ ವೈದ್ಯಕೀಯ ಪದವಿ‌ ಪಡೆದು ಬರುವವರು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯ ಇರುವ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ ಎಂಬ ಸಚಿವ ಪ್ರಹ್ಲಾದ ಜೋಷಿಯವರ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದಾಗಿದೆ. ಕೇಂದ್ರದ ನರೇಂದ್ರ ಮೋದಿ‌ ಸರ್ಕಾರ ಏಕರೂಪದ ಪರೀಕ್ಷೆಯ ನೆಪದಲ್ಲಿ ನೀಟ್ ಪರೀಕ್ಷೆಯನ್ನು ಗೊಂದಲಮಯವಾಗಿ ಮಾಡಿರುವ ಕಾರಣದಿಂದ ಆಗಿರುವ ಅನಾಹುತಗಳ‌ ಬಗ್ಗೆ ‌ ಚರ್ಚಿಸಲು ಇದು ಸರಿಯಾದ ಕಾಲ‌ ಅಲ್ಲ. ಸಚಿವರು ಇಂತಹ ಉಡಾಫೆ ಹೇಳಿಕೆಗಳಿಂದ ಕಾಲಹರಣ ಮಾಡುವ ಬದಲಿಗೆ ಯುಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ಹರಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags: BJPCongress PartyRussiaRussian Ukraine WarRussiaUkraineCrisisUkraineUkraine President Volodymyr ZelenskyUkraineConflictUkraineInvasionUkraineUnderAttackಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನೀಟ್‌ನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು : ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Next Post

ರಷ್ಯಾ ಉಕ್ರೇನ್ ಬಿಕ್ಕಟ್ಟು | ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು!

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ರಷ್ಯಾ ಉಕ್ರೇನ್ ಬಿಕ್ಕಟ್ಟು | ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು!

ರಷ್ಯಾ ಉಕ್ರೇನ್ ಬಿಕ್ಕಟ್ಟು | ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada