• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿಯವರ ಸರ್ಕಾರವೇ ನಮ್ಮ ಜಿ.ಎಸ್.ಡಿ.ಪಿಯನ್ನು ಶ್ಲಾಘಿಸಿದೆ; ಬೊಮ್ಮಾಯಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
October 24, 2021
in ಕರ್ನಾಟಕ, ರಾಜಕೀಯ
0
ಮೋದಿಯವರ ಸರ್ಕಾರವೇ ನಮ್ಮ ಜಿ.ಎಸ್.ಡಿ.ಪಿಯನ್ನು ಶ್ಲಾಘಿಸಿದೆ; ಬೊಮ್ಮಾಯಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
Share on WhatsAppShare on FacebookShare on Telegram

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಚುನಾವಣಾ ಪ್ರಚಾರದ ವೇಳೆ ಮಾಡಿರುವ ಆರೋಪಗಳಿಗೆ ಸರಣಿ ಟ್ವೀಟ್‌ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ADVERTISEMENT

2008-2013 ರ ವರೆಗಿನ ಬಿ ಜೆ ಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ ಶೇ. 94.18 ರಷ್ಟು ಏರಿಕೆಯಾಗಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ  ಏರಿಕೆಯಾಗಿದ್ದು ಶೇಕಡಾ 78 ರಷ್ಟು ಮಾತ್ರ. ನಾವು 2012-13 ರಲ್ಲಿ ಅಧಿಕಾರಕ್ಕೆ ಬಂದಾಗ ಇದ್ದ ಸಾಲ ರೂ. 1,21,000 ಕೋಟಿ. 2017-18 ರಲ್ಲಿ ನಮ್ಮ ಸರ್ಕಾರದ ಕೊನೆ ಬಜೆಟ್ ವೇಳೆ ಇದ್ದ ಸಾಲ ರೂ.2,42,420 ಕೋಟಿ ಎಂದು ತಿಳಿಸಿದ್ದಾರೆ.

ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ ಮಾಡಿರುವ ಸಾಲ ರೂ. 69,000 ಕೋಟಿ.

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ರೂ.2,14,479 ಕೋಟಿ ಹೆಚ್ಚು ಸಾಲ ಮಾಡಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾದ  ಮೂರು ವರ್ಷಗಳಲ್ಲಿ ಸುಮಾರು ರೂ.1,90,000 ಕೋಟಿ  ಸಾಲ ಮಾಡಿದ್ದಾರೆ.

ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ ರೂ. 72,000 ಕೋಟಿಗೆ ತಲುಪಲಿದೆ. ಕಳೆದ ವರ್ಷ ರೂ. 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೊನಾ ನಿರ್ವಹಣೆಗೆ ಖರ್ಚು ಮಾಡಿದ್ದು 5,400 ಕೋಟಿ ರೂ.ಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು?  ಎಂದು ಪ್ರಶ್ನಿಸಿದ್ದಾರೆ.

ಜಿ ಎಸ್ ಡಿ ಪಿ ಯಲ್ಲಿ ಶೇಕಡಾವಾರು ಸಾಲದ ಪ್ರಮಾಣ ನಮ್ಮ ಸರ್ಕಾರದ ಅವಧಿಯಲ್ಲಿ 17 ರಿಂದ 20 ರ ಒಳಗೆ ಇತ್ತು. ಇದು ದೇಶದಲ್ಲಿಯೇ ಅತ್ಯುತ್ತಮ ನಿರ್ವಹಣೆಯಾಗಿತ್ತು. ಆದರೆ ಈಗ ಅದು 26.9 ರಷ್ಟಾಗಿದೆ. ನಿಯಮಗಳ ಪ್ರಕಾರ ಇದು ಶೆ. 25 ನ್ನು ಮೀರುವಂತಿಲ್ಲ. ಸಾಲಕ್ಕಾಗಿ ನಿಯಮಗಳನ್ನೇ ತಿದ್ದಿದವರು ನೀವು ಎಂದು ಬಿಜೆಪಿಯ ವಿರುದ್ದ ಆರೋಪಿಸಿದ್ದಾರೆ.

2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಜಿ.ಎಸ್.ಡಿ.ಪಿ ಕೇವಲ 6,01,582 ಕೋಟಿ ಇತ್ತು. ನಾನು ಅಧಿಕಾರದಿಂದ ಇಳಿದಾಗ ಅದು ರೂ.14,08,585 ಕೋಟಿಗೆ ಏರಿಕೆಯಾಯಿತು.

ರಾಜ್ಯ ಸರ್ಕಾರದ ಜಿ.ಎಸ್.ಡಿ.ಪಿ ಎಷ್ಟು ಎಂದು ಹೇಳುವುದು ನಾವಲ್ಲ. ಕೇಂದ್ರ ಸರ್ಕಾರ. @narendramodi ಅವರ @BJP4India ಸರ್ಕಾರವೇ ನಮ್ಮ ಜಿ.ಎಸ್.ಡಿ.ಪಿ ಯನ್ನು ಶ್ಲಾಘಿಸಿತ್ತು. ನಮ್ಮ 5 ವರ್ಷದ ಅವಧಿಯಲ್ಲಿ ಜಿ.ಎಸ್.ಡಿ.ಪಿ ಯ ಪ್ರಮಾಣ 8,07,003 ರಷ್ಟು ಹೆಚ್ಚಾಯಿತು.
7/9#ಬುರುಡೆಬೊಮ್ಮಾಯಿ

— Siddaramaiah (@siddaramaiah) October 23, 2021

ಈ ಜಿ ಎಸ್ ಡಿ ಪಿ ಎಷ್ಟು ಎಂದು ಹೇಳುವುದು ನಾವಲ್ಲ ಕೇಂದ್ರ ಸರ್ಕಾರ. ಮೋದಿಯವರ ಸರ್ಕಾರವೇ ನಮ್ಮ ಜಿ.ಎಸ್.ಡಿ.ಪಿ ಯನ್ನು ಶ್ಲಾಘಿಸಿತ್ತು. ನಮ್ಮ 5 ವರ್ಷದ ಅವಧಿಯಲ್ಲಿ ಜಿ.ಎಸ್ ಡಿ ಪಿ ಯ ಪ್ರಮಾಣ ರೂ. 8,07,003 ರಷ್ಟು ಹೆಚ್ಚಾಯಿತು.

2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ ಹೆಚ್ಚಾದ ಜಿಎಸ್ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ ಮಾತ್ರ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ.

ಕೇಂದ್ರವು ನಮ್ಮ ರಾಜ್ಯದಿಂದ ಪ್ರತಿ ವರ್ಷ ರೂ. 2,50,000 ಕೋಟಿಗೂ ಹೆಚ್ಚು ಹಣವನ್ನು ತೆರಿಗೆ-ಸುಂಕಗಳಿಂದ ಸಂಗ್ರಹಿಸುತ್ತದೆ. ಪ್ರತಿ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಎರಡರಿಂದಲೇ ರೂ. 30,000 ಕೋಟಿಗೂ ಹೆಚ್ಚಿನ ಹಣವನ್ನು ರಾಜ್ಯದ ಜನರಿಂದ ಸುಲಿಯುತ್ತಿದೆ ಎಂದು ಸರಣಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಹಾಗು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Tags: BJPByElectionbypollCongress PartyCovid 19Karnataka bypollsindhagiಉಪಚುನಾವಣೆಕರೋನಾಕೋವಿಡ್-19ಜಿಎಸ್‌ಟಿಜಿಎಸ್‌ಡಿಪಿಬಸವರಾಜ್‌ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಸಿಂಧಗಿಹಾನಗಲ್‌
Previous Post

ಟ್ವೆಂಟಿ-20 ವಿಶ್ವಕಪ್‌ – ಇಂದು ಭಾರತ – ಪಾಕಿಸ್ತಾನ್ ಹಣಾಹಣಿ

Next Post

ಯುವ ನೀತಿ ಸಮಿತಿಯಲ್ಲಿ ಚಕ್ರವರ್ತಿ ಸೂಲಿಬೆಲೆ: ಶರಣ್ ಪಂಪ್ವೆಲ್, ಡ್ರೋಣ್ ಪ್ರತಾಪ್ ಏಕಿಲ್ಲ ಎಂದು ಜನರ ವ್ಯಂಗ್ಯ!

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

by ಪ್ರತಿಧ್ವನಿ
May 25, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು,...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
ಯುವ ನೀತಿ ಸಮಿತಿಯಲ್ಲಿ ಚಕ್ರವರ್ತಿ ಸೂಲಿಬೆಲೆ: ಶರಣ್ ಪಂಪ್ವೆಲ್, ಡ್ರೋಣ್ ಪ್ರತಾಪ್ ಏಕಿಲ್ಲ ಎಂದು ಜನರ ವ್ಯಂಗ್ಯ!

ಯುವ ನೀತಿ ಸಮಿತಿಯಲ್ಲಿ ಚಕ್ರವರ್ತಿ ಸೂಲಿಬೆಲೆ: ಶರಣ್ ಪಂಪ್ವೆಲ್, ಡ್ರೋಣ್ ಪ್ರತಾಪ್ ಏಕಿಲ್ಲ ಎಂದು ಜನರ ವ್ಯಂಗ್ಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada