• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸರ್ಕಾರಕ್ಕೆ ಬದ್ಧತೆಯೇ ಇಲ್ಲ, 40% ಕಮಿಷನ್ ಹೊಡೆಯುವುದರಲ್ಲೇ ಮುಳುಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

Any Mind by Any Mind
December 21, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ಸರ್ಕಾರಕ್ಕೆ ಬದ್ಧತೆಯೇ ಇಲ್ಲ, 40% ಕಮಿಷನ್ ಹೊಡೆಯುವುದರಲ್ಲೇ ಮುಳುಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
Share on WhatsAppShare on FacebookShare on Telegram

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಪ್ರಾಋಂಭವಾಗುವುದಕ್ಕೂ ಮುನ್ನ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸುದ್ದಿಘೋಷ್ಠಿಯನ್ನು ನಡೆಸಿ ಮೇಕೆದಾಟು ವಿಚಾರವನ್ನ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ADVERTISEMENT

 1968 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆಗೆ ಯೋಚನೆ ಮಾಡಿತ್ತು, ಆದರೆ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಆಗಿರಲಿಲ್ಲ. 2013 ನಾವು ಅಧಿಕಾರಕ್ಕೆ ಬಂದಮೇಲೆ ಯೋಜನೆಗೆ ಡಿ.ಪಿ.ಆರ್ ಸಿದ್ಧಪಡಿಸಿದ್ದೆವು. ಆಗ ಈ ಯೋಜನೆಯ ಅಂದಾಜು ವೆಚ್ಚ ರೂ. 5912 ಕೋಟಿ,  2018 ರಲ್ಲಿ ಡಿ.ಕೆ ಶಿವಕುಮಾರ್ ಅವರು ಸಚಿವರಾಗಿದ್ದ ವೇಳೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದರು. ಆಗ ರೂ. 9,500 ಕೋಟಿ ಯೋಜನಾ ವೆಚ್ಚ ಇತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ನಗರ ಹಾಗೂ ಸುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದು. ಸಮುದ್ರ ಪಾಲಾಗಿ ವ್ಯರ್ಥವಾಗುತ್ತಿರುವ 66 ಟಿ.ಎಂ.ಸಿ ನೀರನ್ನು ಮೇಕೆದಾಟು ಜಲಾಶಯದಲ್ಲಿ ಶೇಖರಿಸಿ, ಕುಡಿಯುವ ನೀರಿನ ಹಾಗೂ 440 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕೆ ಬಳಕೆ ಮಾಡುವ ಉದ್ದೇಶ ಹೊಂದಿದೆ. ಈಗ ಬೆಂಗಳೂರಿನ 30% ಜನರಿಗೆ ಕಾವೇರಿ ನೀರಿನ ಪೂರೈಕೆ ಆಗುತ್ತಿಲ್ಲ. ಇಡೀ ನಗರಕ್ಕೆ ಕಾವೇರಿ ನೀರು ಸರಬರಾಜು ಆಗಬೇಕೆಂದರೆ ಈ ಯೋಜನೆ ಜಾರಿಯಾಗಲೇಬೇಕು, ಇದರ ಜೊತೆಗೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.

ಈ ಯೋಜನೆಯಿಂದ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಹಲವು ಅನುಕೂಲ ಆಗಲಿದೆ. 2018 ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ನಡುವಿನ ಜಲವಿವಾದ ಇತ್ಯರ್ಥಗೊಂಡಿದ್ದು, ಸ್ವಾಭಾವಿಕ ವರ್ಷವೊಂದರಲ್ಲಿ ನಾವು 177.25 ಟಿ.ಎಂ.ಸಿ ನೀರು ಕೊಡಬೇಕು ಎಂದು ತೀರ್ಪು ಬಂದಿದೆ. ಈಗ ವ್ಯಾಜ್ಯ ಬಗೆಹರಿದಿರುವುದರಿಂದ ತಮಿಳುನಾಡಿನವರಿಗೆ ಅವರ ಪಾಲಿನ ನೀರನ್ನು ಪಡೆಯುವ ಹಕ್ಕು ಬಿಟ್ಟರೆ, ಯೋಜನೆಯ ಬಗ್ಗೆ ತಕರಾರು ಮಾಡುವ ಬೇರಾವ ಕಾನೂನಾತ್ಮಕ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ.

ಹಸಿರು ನ್ಯಾಯಾಧೀಕರಣದವರು ಕೂಡ ಈ ಯೋಜನೆಯ ಬಗ್ಗೆ ಯಾವ ಆಕ್ಷೇಪ ವ್ಯಕ್ತಪಡಿಸಿಲ್ಲ. ಹೀಗಿದ್ದಾಗ ಯಾವುದೇ ತಕರಾರು ಇಲ್ಲದಿದ್ದರೂ, ಯೋಜನಾ ವರದಿ ಸಿದ್ಧವಾಗಿದ್ದರೂ, ತಮಿಳುನಾಡಿಗೆ ಕಾನೂನಾತ್ಮಕವಾಗಿ ವಿರೋಧಿಸುವ ಹಕ್ಕು ಇಲ್ಲದಿದ್ದರೂ ಯೋಜನೆ ಅನುಷ್ಠಾನ ಆಗಿಲ್ಲ. ಡಬಲ್ ಇಂಜಿನ್ ಸರ್ಕಾರ ಎನ್ನುವ ಬಿಜೆಪಿ ಅವರು ಇಷ್ಟೊತ್ತಿಗೆ ಯೋಜನೆ ಕೈಗೆತ್ತಿಕೊಳ್ಳಬೇಕಿತ್ತಲ್ಲ. ಆದರೆ, ಯೋಜನೆಯನ್ನು ಇನ್ನು ಯಾಕೆ ಪ್ರಾರಂಭಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ ಬೇಸಿಗೆ ಸಮಯದಲ್ಲಿ ವಿವಿಧ ನಾಲೆಗಳ ಮೂಲಕ ಕೃಷಿ, ವಿದ್ಯುತ್ ಉತ್ಪಾದನೆ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದಾಗಿದೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ ತಮಿಳು ನಾಡಿಗೆ ಹೋಗಲಿದೆ. ಇದು ಅವರಿಗೆ ಇನ್ನೊಂದು ಲಾಭದ ವಿಚಾರ. ಆದರೆ, ತಮಿಳುನಾಡು ಸರ್ಕಾರ ಈ ಯೋಜನೆಯನ್ನು ಯಾಕೆ ವಿರೋದಿಸುತ್ತಿದೆ ಎಂದು ನಮ್ಮಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ನಾವು ಅಧಿಕಾರದಲ್ಲಿ ಇದ್ದಿದ್ದರೆ ಈ ಯೋಜನೆಯನ್ನು ಈಗಾಗಲೇ ಆರಂಭ ಮಾಡುತ್ತಿದ್ದೆವು. ಈ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಮೊದಲು ಬೆಂಗಳೂರಿನ ವರೆಗೆ ಪಾದಯಾತ್ರೆ ಮಾಡಿ, ಮತ್ತೆ ಸುತ್ತಮುತ್ತಲಿನ ಹತ್ತಾರು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡುತ್ತೇವೆ. ಒಟ್ಟು ಹತ್ತು ದಿನ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿರುವ ಇತರೆ ಸಂಘ, ಸಂಸ್ಥೆಗಳು ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡುತ್ತೇವೆ, ಆಸಕ್ತರು ಭಾಗವಹಿಸಬಹುದು. ಇದು ಪಕ್ಷದ ಕಾರ್ಯಕ್ರಮವಲ್ಲ, ರಾಜ್ಯದ ಹಿತದೃಷ್ಟಿಯಿಂದ ರೂಪಿಸಿರುವ ಹೋರಾಟ. ಸುಮಾರು ಹತ್ತು ಜಿಲ್ಲೆಗಳ 2.5 ಕೋಟಿ ಜನರಿಗೆ ಯೋಜನೆ ಜಾರಿಯಿಂದ ಅನುಕೂಲ ಆಗಲಿದೆ. ಹೀಗಾಗಿ ಕೂಡಲೇ ಸರ್ಕಾರ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂಬುದು ನಮ್ಮ ಆಗ್ರಹ.

ಬಿಜೆಪಿ ಸರ್ಕಾರಕ್ಕೆ ಬದ್ಧತೆಯೇ ಇಲ್ಲ. ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಯಾವೊಂದು ನೀರಾವರಿ ಯೋಜನೆಯನ್ನು ಕೈಗೆತ್ತಿಕೊಂಡಿಲ್ಲ. ಮಹದಾಯಿ, ಕೃಷ್ಣ ಮೇಲ್ದಂಡೆ, ಎತ್ತಿನಹೊಳೆ, ಭದ್ರ ಮೇಲ್ದಂಡೆ ಈ ಯಾವ ಯೋಜನೆಗಳ ಕೆಲಸವೂ ನಡೆಯುತ್ತಿಲ್ಲ. ಈ ಸರ್ಕಾರ 40% ಕಮಿಷನ್ ಹೊಡೆಯುವುದರಲ್ಲೇ ಮುಳುಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯವರು ರಾಷ್ಟ್ರೀಯ ಯೋಜನೆಗಳ ಅನುದಾನ ಬರುವ ಮೊದಲೇ ಟೆಂಡರ್ ಕರೆದು ಕಮಿಷನ್ ನುಂಗಿದ್ದಾರೆ. ಕೋವಿಡ್ ಹೆಸರಿನಲ್ಲಿ ಸಾವಿರಾರು ಕೋಟಿ ಹಣ ಭ್ರಷ್ಟಾಚಾರ ನಡೆಸಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು,ಈಗ ಹೋಗಿ ಹಣ ತಂದು ನೀರಾವರಿ ಯೋಜನೆಯ ಕೆಲಸ ಮಾಡಸಿ ನೋಡೋಣ ಎಂದು ಸವಾಲೆಸೆದಿದ್ದಾರೆ.

ಸರ್ಕಾರ ಮೇಕೆದಾಟು ಯೋಜನೆಯನ್ನು ಇಂದೇ ಆರಂಭ ಮಾಡಿದರೆ ನಾವು ಪಾದಯಾತ್ರೆಯನ್ನು ರದ್ದುಮಾಡಿ, ಯೋಜನೆಯ ಗುದ್ದಲಿ ಪೂಜೆಯಲ್ಲಿ ಭಾಗವಹಿಸುತ್ತೇವೆ. ಪಾದಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲಾ ಶಾಸಕರು, ಮುಖಂಡರು, ಸಂಸದರು, ಮಾಜಿ ಸಚಿವರು, ನಾಡಿನ ಬಗ್ಗೆ ಕಾಳಜಿ ಇರುವ ಎಲ್ಲರೂ ಇರುತ್ತಾರೆ. ನಮ್ಮ ಹೋರಾಟಕ್ಕೆ ಇತರೆ ಪಕ್ಷದ ಮುಖಂಡರು ಬಂದು ಬೆಂಬಲಿಸಿದರೆ ಸಂತೋಷ ಎಂದು ಹೇಳಿದ್ದಾರೆ.

ವಿದ್ಯಾರ್ಥಿ ಸಂಘಟನೆ, ಎನ್.ಜಿ.ಒ ಗಳು, ರೈತ, ದಲಿತ, ಕನ್ನಡ ಪರ, ಆಟೋ ಚಾಲಕರ, ಟ್ಯಾಕ್ಸಿ ಚಾಲಕರ, ಕಾರ್ಮಿಕ ಮುಂತಾದ ಎಲ್ಲಾ ಸಂಘಟನೆಗಳಿಗೂ ಹೋರಾಟದಲ್ಲಿ ಭಾಗವಹಿಸಲು ವಿನಮ್ರವಾಗಿ ಆಹ್ವಾನ ನೀಡುತ್ತೇನೆ.  ಮೇಕೆದಾಟು ಯೋಜನೆ ನಮ್ಮ ಹಕ್ಕು, ಅದರ ಜಾರಿಯಾಗಬೇಕು ಎಂಬುದು ನಮ್ಮ ಆಶಯ. ಇದರಲ್ಲಿ ರಾಜಕೀಯ ಹಿತಾಸಕ್ತಿಯ ಮಾತು ಬರಲ್ಲ. ಜನರ ಹಿತಾಸಕ್ತಿ ಮಾತ್ರ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಘೋಘೋಷ್ಠಿಯಲ್ಲಿ ಹೇಳಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

2023ರ ಚುನಾವಣೆಗೆ ಸಿದ್ಧತೆ : ರಾಜ್ಯಾದ್ಯಕ್ಷ ಸ್ಥಾನದಿಂದ ಕಟೀಲ್ ಗೆ ಕೊಕ್, ಮುಂದಿನ ಬಿಜೆಪಿ ಸಾರಥಿ ಯಾರಾಗಬಹುದು?

Next Post

ಬೆಳಗಾವಿಯಲ್ಲಿ ನಾಯಕರ ವಲಸೆಗೆ ಮುನ್ನುಡಿ ; ಮುಂಬೈ ಕರ್ನಾಟಕದಲ್ಲಿ ರಾಜಕೀಯ ಭೂಕಂಪ ಸಂಭವದ ಮುನ್ಸೂಚನೆಯೆ?

Related Posts

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್
Top Story

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ...

Read moreDetails
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
Next Post
ಬಿಜೆಪಿಗೆ ಬಲವರ್ಧನೆ, ಕಾಂಗ್ರೆಸ್ ಗೆ ಹಿನ್ನಡೆ, ಜೆಡಿಎಸ್ ಗೆ ಆತಂಕ!

ಬೆಳಗಾವಿಯಲ್ಲಿ ನಾಯಕರ ವಲಸೆಗೆ ಮುನ್ನುಡಿ ; ಮುಂಬೈ ಕರ್ನಾಟಕದಲ್ಲಿ ರಾಜಕೀಯ ಭೂಕಂಪ ಸಂಭವದ ಮುನ್ಸೂಚನೆಯೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada