2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಬ್ಬರದ ಮತ ಪ್ರಚಾರ ಮಾಡ್ತಿದ್ದಾರೆ. ಇದೀಗ ವರುಣ ಕ್ಷೇತ್ರಕ್ಕೆ ಮತ್ತೆ ಪ್ರಚಾರಕ್ಕೆಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ. ಹೌದು.. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತ್ನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ʻಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಸಿದ್ದರಾಮಯ್ಯ ಸಿಡಿಮಿಡಿಗೊಂಡರು.
ʻಪ್ರತಾಪ್ ಸಿಂಹ ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಇಲ್ಲಿಗೆ ಬಂದು ಓಡಾಡುತ್ತಿದ್ದಾನೆ. ನನಗ್ಯಾಕೆ ಸೋಲಿನ ಭಯ. ಒಳ ಒಪ್ಪಂದ ಮಾಡಿಕೊಂಡವರು ಬಿಜೆಪಿ, ಜೆಡಿಎಸ್ನವರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ನೋಡಿಕೊಳ್ಳಿ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.ವರುಣಾ ಕ್ಷೇತ್ರದ ಮತದಾರರು ಹಿಂದೆಂದಿಗಿಂತಲೂ ಹೆಚ್ಚಿನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಆ ಕಾರಣ ಚುನಾವಣೆಯಲ್ಲಿ ಅಂತಹ ವ್ಯತ್ಯಾಸ ಕಾಣಿಸುತ್ತಿಲ್ಲ. 1978ರಿಂದಲೂ ನಾನು ವರುಣಾ ಹೋಬಳಿ ಪ್ರತಿನಿಧಿಸುತ್ತಿದ್ದೇನೆ. ಇಲ್ಲಿನ ಜನ ನನ್ನ ಮೇಲೆ ಪ್ರೀತಿ ಇರಿಸಿಕೊಂಡಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.