Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೊಟ್ಟ ಕುದುರೆ ಏರಲಾರದವ ವೀರ ಅಲ್ಲ: ಸಮ್ಮಿಶ್ರ ಸರ್ಕಾರ ಪತನಕ್ಕೆ ಹೆಚ್‌ಡಿಕೆಯನ್ನು ಕುಟುಕಿದ ಸಿದ್ದು

ಪ್ರತಿಧ್ವನಿ

ಪ್ರತಿಧ್ವನಿ

January 24, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ: ತೋಟದ ಮನೆಗೆ ನುಗ್ಗಿದ ಚಿರತೆ

ತುಮಕೂರಿನಲ್ಲಿ ಇಂದು ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿರುವ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿಗೆ ಕೇವಲ 70 ಕಿ.ಮೀ ದೂರದಲ್ಲಿದ್ದರೂ ತುಮಕೂರು ಎಷ್ಟು ಅಭಿವೃದ್ಧಿ ಆಗಬೇಕಿತ್ತು ಆ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಿಲ್ಲ ಎಂದು ಅವರು ಹೇಳಿದ್ದಾರೆ.

ಡಾ. ನಂಜುಂಡಪ್ಪ ಅವರ ವರದಿ ಪ್ರಕಾರ ತುಮಕೂರಿನ 10 ತಾಲೂಕುಗಳಲ್ಲಿ 8 ತಾಲೂಕುಗಳು ಹಿಂದುಳಿದವು. ನಾವು ಅಧಿಕಾರಕ್ಕೆ ಬಂದಾಗ 2013 ರಲ್ಲಿ ತುಮಕೂರಿನ ಜನರ ತಲಾಆದಾಯ 43,687 ರೂ. ಇತ್ತು. ನಾವು ಅಧಿಕಾರದಿಂದ ಇಳಿಯುವಾಗ ತಲಾಆದಾಯ 1,74.884 ರೂ. ಆಗಿತ್ತು. ಈಗಿನ ತಲಾ ಆದಾಯ 1,84,000 ರೂ. ಇದೆ. ಕಳೆದ 5 ವರ್ಷಗಳಲ್ಲಿ 9,200 ರೂ. ಜಾಸ್ತಿಯಾಗಿದೆ. ಇದು ತುಮಕೂರು ಜಿಲ್ಲೆಗೆ ಬಿಜೆಪಿ ಸರ್ಕಾರದ ಕೊಡುಗೆ, ಈ ಅಂಕಿಅಂಶಗಳನ್ನು ರಾಜ್ಯ ಬಿಜೆಪಿ ಸರ್ಕಾರವೇ ನೀಡಿರುವುದು.

ಬಿಜೆಪಿ ಪಕ್ಷ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿರುವುದಲ್ಲ, ಆಪರೇಷನ್‌ ಕಮಲ ಮಾಡಿ ಶಾಸಕರನ್ನು ಖರೀದಿಸಿ ಅನೈತಿಕ ಮಾರ್ಗದ ಮೂಲಕ ಸರ್ಕಾರ ರಚನೆ ಮಾಡಿರುವುದು. ಬಿಜೆಪಿ ಪಕ್ಷ ಕಳೆದ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆದ್ದಿದ್ದರೂ ಕಾಂಗ್ರೆಸ್‌ ಪಕ್ಷ ಪಡೆದ ಒಟ್ಟು ಮತಗಳ ಪ್ರಮಾಣ ಬಿಜೆಪಿಗಿಂತ ಹೆಚ್ಚಿದೆ. ನಮಗೆ 38.15% ಮತಗಳು ಬಂದಿದ್ದರೆ, ಬಿಜೆಪಿಗೆ 36.42% ಮತ ಬಂದಿತ್ತು. ಅಂದರೆ ಜನರ ಆಶೀರ್ವಾದ ಯಾರ ಪರವಾಗಿದೆ ಎಂದು ಅರ್ಥ? ನಮ್ಮ ಪರವಾಗಿದೆ ಅಲ್ಲವೇ?

ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ಜೆಡಿಎಸ್‌ ಗೆ ಬೇಷರತ್‌ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು, ಇದನ್ನೇ ಕುಮಾರಸ್ವಾಮಿ ಅವರು ಆಗಾಗ ಕಾಂಗ್ರೆಸ್‌ ನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎನ್ನುತ್ತಾರೆ, ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಏಕೈಕ ಕಾರಣಕ್ಕೆ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದು, ಕುಮಾರಸ್ವಾಮಿ ಏನು ಮಹಾನ್‌ ಪರೋಪಕಾರಿ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಬೆಂಬಲ ನೀಡಿದ್ದಲ್ಲ. 2006ರಲ್ಲಿ ಕುಮಾರಸ್ವಾಮಿ ಅವರು ಧರಂ ಸಿಂಗ್‌ ಅವರನ್ನು ಕಿತ್ತುಹಾಕಿ ಬಿಜೆಪಿ ಜೊತೆ ಹೋದರಲ್ಲ ಇದಕ್ಕೆ ಏನನ್ನಬೇಕು? ಬಿಜೆಪಿ ಜೊತೆ ಹೋಗಿದ್ದ ಕುಮಾರಸ್ವಾಮಿ ಅವರದ್ದು ಯಾವ ರೀತಿ ಜಾತ್ಯತೀತ ಪಕ್ಷ? ಸಿದ್ದರಾಮಯ್ಯ ಅವರ ಮಾತು ಕೇಳಿಕೊಂಡು ಸುರ್ಜೇವಾಲಾ ಅವರು ನಮ್ಮನ್ನು ಬಿಜೆಪಿಯ ಬಿ ಟೀಮ್‌ ಎಂದು ಕರೆದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಬಿಜೆಪಿ ಜೊತೆ ಹೋಗಿದ್ದ ನಿಮ್ಮನ್ನು ಏನೆಂದು ಕರೆಯಬೇಕು ನೀವೇ ಹೇಳಿ ಕುಮಾರಸ್ವಾಮಿ ಅವರೇ?

ನಮ್ಮ ಸರ್ಕಾರ ಹೋಗಲು ಸಿದ್ದರಾಮಯ್ಯ ಕಾರಣ ಎಂದು ಕುಮಾರಸ್ವಾಮಿ ಹೇಳುತ್ತಾರೆ, ಕೊಟ್ಟ ಕುದುರೆ ಏರಲಾರದವ ವೀರನು ಅಲ್ಲ, ಶೂರನೂ ಅಲ್ಲ. ಇದು ಕುಮಾರಸ್ವಾಮಿ ಅವರಿಗೆ ಹೊಂದಿಕೆಯಾಗುತ್ತದೆ. ಕೊಟ್ಟ ಅಧಿಕಾರವನ್ನು ಉಳಿಸಿಕೊಳ್ಳಲಾಗದೆ ಈಗ ನಮ್ಮ ಮೇಲೆ ಗೂಬೆ ಕೂರಿಸಲಿ ಎಂದು ನಾವು ನಿಮಗೆ ಅಧಿಕಾರ ನೀಡಿದ್ದಾ ಕುಮಾರಸ್ವಾಮಿ? ಬಿಜೆಪಿಗೂ ಜೆಡಿಎಎಸ್‌ ಗೂ ಯಾವ ವ್ಯತ್ಯಾಸವೂ ಇಲ್ಲ, ಬಿಜೆಪಿ ಬಹಿರಂಗವಾಗಿ ಅಲ್ಪಸಂಖ್ಯಾತರ ವಿರೋಧ ಮಾಡಿದರೆ, ಜೆಡಿಎಸ್‌ ನವರು ಒಳಗೊಳಗೆ ವಿರೋಧ ಮಾಡುತ್ತಾರೆ. ಇಂಥವರ ಮಾತುಗಳನ್ನು ಅಲ್ಪಸಂಖ್ಯಾತ ಬಂಧುಗಳು ನಂಬಿ ಮೋಸ ಹೋಗಬಾರದು.

ನರೇಂದ್ರ ಮೋದಿ ಹೇಳುವ ಸಬ್‌ ಕ ಸಾಥ್‌ ಸಬ್‌ ಕ ವಿಕಾಸ್‌ ನಲ್ಲಿ ಮಕ್ಕಳು, ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು, ಯುವಕರನ್ನು ಹೊರಗಿಟ್ಟಿದ್ದಾರೆ. ಮೋದಿಜೀ ಯಾಕ್ರೀ ಇಂಥಾ ಸುಳ್ಳುಗಳನ್ನು ಹೇಳುತ್ತೀರಿ? ಮೋದಿ ಅವರು ಈ ದೇಶವನ್ನು ಸಾಲಗಾರರ ದೇಶವಾಗಿ ಮಾಡಿದ್ದಾರೆ. ಸ್ವಾತಂತ್ರ್ಯ ನಂತರದಿಂದ ಮನಮೋಹನ್‌ ಸಿಂಗ್‌ ಅವರ ಸರ್ಕಾರದ ಕೊನೆಯವರೆಗೆ ದೇಶದ ಒಟ್ಟು ಸಾಲ ಇದ್ದದ್ದು 53 ಲಕ್ಷ ಕೋಟಿ. ಈ ವರ್ಷದ ಮಾರ್ಚ್‌ ಅಂತ್ಯಕ್ಕೆ ದೇಶದ ಒಟ್ಟು ಸಾಲ 153 ಲಕ್ಷ ಕೋಟಿಗೆ ತಲುಪಲಿದೆ. 9 ವರ್ಷದಲ್ಲಿ ಮೋದಿ ಅವರು 100 ಲಕ್ಷ ಕೋಟಿ ಸಾಲ ಮಾಡಿದ್ದಾರೆ.

ಮೋದಿ ಅವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು, ಮಾಡಿದ್ದಾರ? ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ಅಕ್ಕಿ, ಗೋದಿ, ಕಬ್ಬು, ಅಡುಗೆ ಎಣ್ಣೆ ಬೆಲೆಗಳು ಎಷ್ಟಿತ್ತು ಎಂದು ಕಾಂಗ್ರೆಸ್‌ ಪಕ್ಷ ಇಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದೆ. ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್‌ ಇದ್ದರೆ ಈ ಲೆಕ್ಕ ತಪ್ಪು ಎಂದು ಹೇಳಲಿ. 414 ರೂ. ಇದ್ದ ಗ್ಯಾಸ್‌ ಬೆಲೆ ಇಂದು 1150 ರೂ. ಆಗಿದೆ. ಇಷ್ಟು ದುಡ್ಡು ಕೊಡಲು ರಾಜ್ಯದ ತಾಯಂದಿರಿಗೆ ಕಷ್ಟವಾಗಲ್ವ? ರೈತರು ಬಳಸುವ ಡಿಎಪಿ ಬೆಲೆ 450 ರೂ. ಇದ್ದದ್ದು ಇಂದು 1400 ರೂ. ಆಗಿದೆ. ಇದೇನಾ ಅಚ್ಚೇದಿನ್? ಇದಕ್ಕೆ ಕಾರಣವಾದ ಬಿಜೆಪಿ ಸರ್ಕಾರ ಇರಬೇಕ?

ಬಿಜೆಪಿ ಒಂದು ಕೋಮುವಾದಿ ಪಕ್ಷ, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ರನ್ನು ಪರಸ್ಪರ ಎತ್ತಿಕಟ್ಟಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹಿಜಾಬ್‌, ಹಲಾಲ್‌ ಇವೆಲ್ಲ ವಿವಾದವಾಗಿಸುವುದು ಜನರಿಗೆ ಬೇಕಿತ್ತಾ? ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ಜನರಿಗೆ ವ್ಯಾಪಾರ ನಿರ್ಬಂಧ ಮಾಡುವಂತ ಕೀಳು ಮಟ್ಟಕ್ಕೆ ಇಳಿದ ಬಿಜೆಪಿಗೆ ನಾಚಿಕೆಯಾಗಬೇಕು. ಅಂಬೇಡ್ಕರರ ಸಂವಿಧಾನದ ಆಶಯ ಏನು? ಎಲ್ಲರಿಗೂ ಸಮಪಾಲು, ಸಮಬಾಳು, ಸಹಿಷ್ಣುತೆ, ಸಹಬಾಳ್ವೆಯಲ್ಲಿ ನಂಬಿಕೆಯಿಟ್ಟುಕೊಂಡವರು ನಾವು, ಮನುಷ್ಯತ್ವಕ್ಕೆ ವಿರುದ್ಧ ಇರುವವರು ಬಿಜೆಪಿಯವರು. ಕುವೆಂಪು ಅವರು ನಾಡನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದರು, ರಾಷ್ಟ್ರಗೀತೆಯನ್ನು ಹಾಡುತ್ತಲೇ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಜಗತ್ತಿನ ಯಾವ ಧರ್ಮವೂ ಬೇರೆಯವರನ್ನು ಕೊಲ್ಲು ಎಂದು ಹೇಳುವುದಿಲ್ಲ. ಮನುಷ್ಯ ಮನುಷ್ಯನನ್ನು ಪ್ರೀತಿಸು ಎಂದು ಎಲ್ಲ ಧರ್ಮಗಳು ಹೇಳುತ್ತವೆ. ಬಿಜೆಪಿ ಅಧಿಕಾರಕ್ಕೆ ಬಂದು ಜನ ಆತಂಕದಿಂದ ಬದುಕುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಜನ ನೆಮ್ಮದಿಯಿಂದ ಬದುಕಬೇಕು ಎಂದಾದರೆ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆದು ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು.

ಸ್ಯಾಂಟ್ರೋ ರವಿಯನ್ನು ಬಿಜೆಪಿಯವರೇ ಗುಜರಾತಿಗೆ ಕಳಿಸಿ, ಕಣ್ಣೆರೊಸಲು ಇವರೇ ಹಿಡಿದುಕೊಂಡು ಬಂದರು. ಬಿಜೆಪಿಯವರು ಅವನ ಜೊತೆ ಷಾಮೀಲಾಗದೆ ಹೋಗಿದ್ದರೆ ಪೊಲೀಸ್‌ ಅಧಿಕಾರಿಗಳನ್ನು ಆತ ವರ್ಗಾವಣೆ ಮಾಡಿಸಲು ಸಾಧ್ಯವಾಗುತ್ತಿತ್ತಾ? ಸ್ಯಾಂಟ್ರೋನನ್ನು ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಅರ್ಜಿಯನ್ನೂ ಹಾಕಲಿಲ್ಲ. ಇದೆಲ್ಲ ಒಂದು ನಾಟಕ ಅಷ್ಟೆ.

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಸಾವಿಗೆ ಸಚಿವ ಈಶ್ವರಪ್ಪ ಕಾರಣ. ತುಮಕೂರಿನ ಗುತ್ತಿಗೆದಾರ ಪ್ರಸಾದ್‌ ಅವರು ದೇವರಾಯನದುರ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡರು, ಇದಕ್ಕೆ ಯಾರು ಕಾರಣ? ಬೆಂಗಳೂರಿನ ಮಹದೇವಪುರದ ಪ್ರದೀಪ್‌ ಎಂಬುವ ವ್ಯಕ್ತಿ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ, ಶಾಸಕ ಅರವಿಂದ ಲಿಂಬಾವಳಿ ಅವರು ಪ್ರದೀಪ್‌ ಗೆ ಅನ್ಯಾಯ ಮಾಡಿದ್ದ ಜನರ ಜೊತೆ ಸೇರಿಕೊಂಡಿದ್ದು ಆತ ಸಾಯಲು ಕಾರಣ. ಕೆ.ಆರ್‌ ಪುರಂನ ಇನ್ಸ್‌ ಪೆಕ್ಟರ್‌ ಆತ್ಮಹತ್ಯೆ ಮಾಡಿಕೊಂಡಾಗ ಶವ ನೋಡಲು ಹೋದ ಸಚಿವ ಎಂಟಿಬಿ ನಾಗರಾಜ್‌ ಅವರು 70-80 ಲಕ್ಷ ಲಂಚ ಕೊಟ್ಟು ವರ್ಗಾವಣೆ ಮಾಡಿಕೊಂಡು ಬಂದರೆ ಸಾಯದೆ ಇನ್ನೇನು ಎಂದಿದ್ದರು. ಶಿವಕುಮಾರ್‌ ಎಂಬ ಗುತ್ತಿಗೆದಾರ ತನಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. 40% ಕಮಿಷನ್‌ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸುಮಾರು 20 ರಿಂದ 30 ಸಾವಿರ ಕೋಟಿ ಬಿಲ್‌ ಹಣವನ್ನು ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ನೀಡದೆ ಬಾಕಿ ಉಳಿಸಿಕೊಂಡಿದೆ.

ನಾವು ಅಧಿಕಾರಕ್ಕೆ ಬಂದರೆ ಬಡಜನರಿಗೆ ಉಚಿತವಾಗಿ 10 ಕೆ.ಜಿ ಅಕ್ಕಿ ನೀಡುತ್ತೇವೆ. ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದರೆ ಗುಜರಾತ್‌, ಉತ್ತರ ಪ್ರದೇಶದಲ್ಲಿ ಉಚಿತವಾಗಿ ಅಕ್ಕಿ ನೀಡುತ್ತಿದ್ದಾರ? ಯಾಕೆ ಕೊಡುತ್ತಿಲ್ಲ ಬೊಮ್ಮಾಯಿ? ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಜನಸಂಖ್ಯೆಗೆ ಅನುಗುಣವಾಗಿ ಹಣ ಖರ್ಚು ಮಾಡುವ ಎಸ್‌,ಸಿ,ಪಿ/ಟಿ,ಎಸ್‌,ಪಿ ಯೋಜನೆ ಜಾರಿ ಮಾಡಿದ್ದು ನಮ್ಮ ಸರ್ಕಾರ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ದೇಶದಲ್ಲೆ ಮೊದಲ ಬಾರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಿದವರು ನಾವು.

ಮೊನ್ನೆ ಪ್ರಧಾನಿಗಳು ಕಲಬುರಗಿಯಲ್ಲಿ ಹಕ್ಕುಪತ್ರ ಹಂಚಿದರು. ಆದರೆ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಕಾನೂನು ರೂಪಿಸಿ ಜಾರಿಗೆ ಕೊಟ್ಟಿದ್ದು ನಾವು. ಅಡುಗೆ ಮಾಡಿದವರು ನಾವು, ಊಟ ಮಾಡಿದ್ದು ಬಿಜೆಪಿ. ತಾಂಡಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕಾನೂನು ತಂದಿದ್ದು ನಾವು. ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ, ನಮ್ಮವರು ಜನರಿಗೆ ಸತ್ಯ ಹೇಳಿದರೆ ಸಾಕು.

ಬಿಜೆಪಿಯವರ ವಿರುದ್ಧ ನಾವು ಆರೋಪ ಮಾಡಿದ್ದಕ್ಕೆ ಈಗ ಅವರು ನಮ್ಮ ವಿರುದ್ಧ ಲೋಕಾಯುಕ್ತ ತನಿಖೆ ಮಾಡಿಸುತ್ತೇವೆ ಎನ್ನುತ್ತಿದ್ದಾರೆ. ಕಳ್ಳನಿಗೆ ಕಳ್ಳ ಎಂದರೆ ಕೋಪ ಬರುತ್ತಂತೆ ಹಾಗೆ ಬಿಜೆಪಿಯವರು ನಮ್ಮ ಮೇಲೆ ಮುಗಿಬಿದ್ದಿದ್ದಾರೆ. ಹಿಂದೆ 5 ವರ್ಷ ವಿರೋಧ ಪಕ್ಷದಲ್ಲಿದ್ದಾಗ, ಕಳೆದ ಮೂರೂವರೆ ವರ್ಷದಿಂದ ಅಧಿಕಾರದಲ್ಲಿದ್ದಾಗ ಚಕಾರವೆತ್ತದ ಬಿಜೆಪಿ ಈಗ ನಾವು 40% ಕಮಿಷನ್‌ ಹಗರಣಗಳನ್ನು ಬಿಚ್ಚಿಡಲು ಆರಂಭ ಮಾಡಿದ ಮೇಲೆ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದನ್ನು ಜನ ನಂಬುತ್ತಾರ?

ನಾವು ಮಾಡುವ ಆರೋಪ, ಬಿಜೆಪಿ ಮಾಡುತ್ತಿರುವ ಆರೋಪ ಎಲ್ಲವನ್ನು ಸುಪ್ರೀಂ ಕೋರ್ಟ್‌ ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಒಂದು ಸಮಿತಿ ರಚಿಸಿ ತನಿಖೆಗೆ ವಹಿಸಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಇದಕ್ಕೆ ಬೊಮ್ಮಾಯಿ ಅವರಿಗೆ ಧಮ್‌, ತಾಕತ್‌ ಇದೆಯಾ ಹೇಳಲಿ. ಬಹಳಾ ದಿನ ಭ್ರಷ್ಟಾಚಾರ ಮಾಡಿ ಉಳಿಯಲು ಸಾಧ್ಯವಾಗಲ್ಲ. ವಿಧಾನಸೌಧದ ಗೋಡೆಗಳು ಕೂಡ ಲಂಚ, ಲಂಚ ಎಂದು ಪಿಸುಗುಟ್ಟಲು ಆರಂಭ ಮಾಡಿದೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಕೊಬ್ಬರಿಗೆ ಪ್ರೋತ್ಸಾಹಧನವನ್ನು ನೀಡಿದ್ದೆವು. ಬರಗಾಲ ಬಂದಾಗ ಪ್ರತೀ ತೆಂಗಿನ ಗಿಡಕ್ಕೆ 1000 ರೂ. ನೀಡಿದ್ದೆವು. ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊಬ್ಬರಿ, ತೆಂಗಿಗೆ ಪ್ರೋತ್ಸಾಹಧನವನ್ನು ಖಂಡಿತಾ ನೀಡುತ್ತೇವೆ. ನಿಮ್ಮ ಸಹಕಾರ ಕಾಂಗ್ರೆಸ್‌ ಗೆ ಇರಲಿ. ಕೋಮುವಾದಿ, ಭ್ರಷ್ಟ ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕುವ ಕೆಲಸವನ್ನು ತುಮಕೂರಿನ ಜನ ಮಾಡಬೇಕು. ತುಮಕೂರಿನ ಎಲ್ಲಾ ನಾಯಕರು ಒಂದಾಗಿ ಜಿಲ್ಲೆಯ 11 ಕ್ಷೇತ್ರಗಳ ಪೈಕಿ ಕನಿಷ್ಠ 8 ರಿಂದ 9 ಸ್ಥಾನಗಳನ್ನು ಗೆಲ್ಲಲು ಶ್ರಮಿಸಿಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ಟರ್ಕಿ, ಸಿರಿಯಾದಲ್ಲಿ 24 ಗಂಟೆಗಳ ಅವಧಿಯಲ್ಲಿ ಪ್ರಬಲ ಮೂರು ಭೂಕಂಪ: 2300 ಕ್ಕೂ ಅಧಿಕ ಸಾವು
ವಿದೇಶ

ಟರ್ಕಿ, ಸಿರಿಯಾದಲ್ಲಿ 24 ಗಂಟೆಗಳ ಅವಧಿಯಲ್ಲಿ ಪ್ರಬಲ ಮೂರು ಭೂಕಂಪ: 2300 ಕ್ಕೂ ಅಧಿಕ ಸಾವು

by ಪ್ರತಿಧ್ವನಿ
February 6, 2023
Nimika Rathnakar: ಡಿ ಬಾಸ್ ಅಭಿಮಾನಿ ಒಬ್ರು ನನ್ನತ್ರ ಬಂದು ಏನು ಕೇಳಿದ್ರು ಗೊತ್ತಾ? | Darshan | Kranti Success
ಸಿನಿಮಾ

Nimika Rathnakar: ಡಿ ಬಾಸ್ ಅಭಿಮಾನಿ ಒಬ್ರು ನನ್ನತ್ರ ಬಂದು ಏನು ಕೇಳಿದ್ರು ಗೊತ್ತಾ? | Darshan | Kranti Success

by ಪ್ರತಿಧ್ವನಿ
February 3, 2023
ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರುಗೆ ಆಗಮನ
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರುಗೆ ಆಗಮನ

by ಪ್ರತಿಧ್ವನಿ
February 5, 2023
ಕಿಮ್ಮನೆ ನನ್ನ ನಡುವೆ ಟಿಕೆಟ್ ಶೀಥಲ ಸಮರವಷ್ಟೇ ಎಂದ ಆರ್ ಎಂ ಮಂಜುನಾಥ್ ಗೌಡ
ಇತರೆ

ಕಿಮ್ಮನೆ ನನ್ನ ನಡುವೆ ಟಿಕೆಟ್ ಶೀಥಲ ಸಮರವಷ್ಟೇ ಎಂದ ಆರ್ ಎಂ ಮಂಜುನಾಥ್ ಗೌಡ

by ಪ್ರತಿಧ್ವನಿ
February 6, 2023
ಮೈಸೂರು: “ಮೇಯರ್ ಆನ್ ಲೈನ್ ಅದಾಲತ್” ಕಾರ್ಯಕ್ರಮಕ್ಕೆ ಚಾಲನೆ
Top Story

ಮೈಸೂರು: “ಮೇಯರ್ ಆನ್ ಲೈನ್ ಅದಾಲತ್” ಕಾರ್ಯಕ್ರಮಕ್ಕೆ ಚಾಲನೆ

by ಪ್ರತಿಧ್ವನಿ
February 8, 2023
Next Post
ತಾಖತ್ ಇದ್ದರೆ ನನ್ನ ವಿರುದ್ದದ ಆರೋಪದ ಬಗ್ಗೆ ತನಿಖೆ ನಡೆಸಿ: ಸಿದ್ದರಾಮಯ್ಯ

ತಾಖತ್ ಇದ್ದರೆ ನನ್ನ ವಿರುದ್ದದ ಆರೋಪದ ಬಗ್ಗೆ ತನಿಖೆ ನಡೆಸಿ: ಸಿದ್ದರಾಮಯ್ಯ

Veerappa : ಪಂಜಾಬ್ ಗಿಂತ ಹಸಿರುಭೂಮಿ ಕೋಲಾರ ಆಗುತ್ತೆ ನಮ್ ಸಿದ್ದರಾಮಯ್ಯ ಮಾಡ್ತಾರೆ | Prajadhwani Yatre

Veerappa : ಪಂಜಾಬ್ ಗಿಂತ ಹಸಿರುಭೂಮಿ ಕೋಲಾರ ಆಗುತ್ತೆ ನಮ್ ಸಿದ್ದರಾಮಯ್ಯ ಮಾಡ್ತಾರೆ | Prajadhwani Yatre

BK Hariprasad : ಬಿಜೆಪಿ ಸರ್ಕಾರ ಬಡವರನ್ನು ವಿಕಾಸ ಮಾಡ್ಲಿಲ್ಲ, ವಿನಾಶ ಮಾಡಿದೆ |Congress Praja Dhwani Yatra

BK Hariprasad : ಬಿಜೆಪಿ ಸರ್ಕಾರ ಬಡವರನ್ನು ವಿಕಾಸ ಮಾಡ್ಲಿಲ್ಲ, ವಿನಾಶ ಮಾಡಿದೆ |Congress Praja Dhwani Yatra

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist