• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಟೆನ್ಶನ್ ಇನ್ನೆರಡು ದಿನ ಕಂಟಿನ್ಯೂ! ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
August 31, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಟೆನ್ಶನ್ ಇನ್ನೆರಡು ದಿನ ಕಂಟಿನ್ಯೂ! ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Share on WhatsAppShare on FacebookShare on Telegram

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿನ (Muda Scam) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ (Governor) ಆದೇಶವನ್ನು ವಜಾಗೊಳಿಸುವಂತೆ ಮನವಿ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ (High Court) ಮೆಟ್ಟಿಲೇರಿದ್ದರು.

ADVERTISEMENT

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಾದ ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ಮುಂದೂಡಿದೆ. ಸುದೀರ್ಘ ವಾದ -ಪ್ರತಿವಾದ ಆಲಿಸಿದ ಪೀಠ, ಸೋಮವಾರ ಮಧ್ಯಾಹ್ನ 3.3ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

ಬೆಳಗ್ಗೆಯಿಂದಲೇ ನಡೆಯುತ್ತಿದ್ದ ವಾದ:ಪ್ರತಿವಾದವಿಚಾರಣೆ ವೇಳೆ ವಾದ ಆರಂಭಿಸಿದ ಪ್ರೊ ರವಿವರ್ಮ ಕುಮಾರ್, ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಾಧ್ಯವಿಲ್ಲ, ಯಾಕೆಂದರೆ ಅರ್ಜಿದಾರರು ದೂರು ನೀಡುವಾಗ ದೇಶದಲ್ಲಿ ನೂತನ ಬಿಎನ್‌ಎಸ್ ಕಾಯ್ದೆ ಜಾರಿಗೆ ಬಂದಿರಲಿಲ್ಲ, ಆಗ ಇನ್ನೂ ಐಪಿಸಿ ಕಾಯ್ದೆ ಇತ್ತು. ಹೀಗಾಗಿ ರಾಜ್ಯಪಾಲರು ಅರ್ಟಿಕಲ್ 20 ಪರವಾಗಿ ಉಲ್ಲೇಖಿಸಿಲ್ಲ ಎಂದು ವಾದ ಮಂಡಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 17a ಮತ್ತು 19ರಲ್ಲಿ ವ್ಯತ್ಯಾಸಗಳಿವೆ. ರಾಜ್ಯಪಾಲರು ಕರ್ತವ್ಯದಂತೆ 17a ಉಲ್ಲೇಖಿಸಿದ್ದಾರೆ, ಕಾನೂನಿನ ಪ್ರಕಾರ ಗವರ್ನರ್ ನೋಟಿಸ್‌ ನೀಡುವ ಅಗತ್ಯ ಇಲ್ಲ. 17ಎ ಮತ್ತು 19 ಸಂದರ್ಭದಲ್ಲಿ ನೋಟಿಸ್‌ ನೀಡಬೇಕಿಲ್ಲ. ರಾಜ್ಯಪಾಲರು ವಿವೇಚನೆ ಬಳಸಿ ಅನುಮತಿ ನೀಡಿದ್ದಾರೆ, ಅಬ್ರಾಹಂ ಪ್ರಕರಣದಲ್ಲಿ ನೋಟಿಸ್ ನೀಡಲಾಗಿದೆ.ಯಾವ ಸೆಕ್ಷನ್‌ ಅಡಿ ಆರೋಪ ಪಟ್ಟಿ ಸಲ್ಲಿಸಬೇಕು ಎಂದು ತನಿಖಾಧಿಕಾರಿ ನಿರ್ಧರಿಸ್ತಾರೆ ಎಂದು ಹೇಳಿದರು.

ಅಲ್ಲದೇ, ಬಿಎನ್‌ಎಸ್‌ ಉಲ್ಲೇಖಿಸಲಾಗಿದೆ ಅನ್ನೋದು ಅಪ್ರಸ್ತುತ. ಸಿಎಂ ಸಿದ್ದರಾಮಯ್ಯ ಯಾವುದೇ ಶಿಫಾರಸು ಮಾಡಿಲ್ಲ ಎಂದಿದ್ದಾರೆ, ಪಿಸಿ ಕಾಯಿದೆ 17a ಅಗತ್ಯವೇ ಇಲ್ಲ, ಅಭಿಯೋಜನೆ ನೀಡುವಾಗ ವಿವೇಚನೆ ಬಳಸಲಾಗಿದೆ ಅನ್ನೋದನ್ನ ತಿಳಿಸಬೇಕಿದೆ ಎಂದ ತುಷಾರ್ ಮೆಹ್ತಾ, ನನ್ನ ಮತ್ತೊದು ವಾದ ಏನೆಂದರೆ ರಾಜ್ಯಪಾಲರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು. ಹಾಗೂ ಸಚಿವ ಸಂಪುಟದ ತೀರ್ಮಾನವನ್ನ ಪರಿಗಣಿಸಬಾರದು ಎಂದರೆ ಇಲ್ಲಿ ಆರೋಪವಿರುವುದು ಸಿಎಂ ಮೇಲೆ. ಅವರ ಪತ್ನಿಯ ಅಸ್ತಿ ಇವರಿಗೆ ಅನ್ವಯ ಆಗಲ್ಲ ಎಂದರೆ, ಇದಕ್ಕೆ 17a ಅಡಿಯಲ್ಲಿ ಅನುಮತಿ ಬೇಕಾಗಿರಲಿಲ್ಲ. ಇದೊಂದು ಸೂಸೈಡ್ ವಾದ. ನಾನು ರಾಜ್ಯಪಾಲರ ಕಡತವನ್ನ ಇಲ್ಲಿ ಹಂಚಿಕೊಳ್ತೇನೆ, ಅರ್ಜಿದಾರರಿಗೂ ನೀಡ್ತಿನಿ ಎಂದು ಹೇಳಿದರು.

ತಾತ್ಕಾಲಿಕ ರಿಲೀಫ್ ನೀಡಿದ್ದ ಕೋರ್ಟ್: ಆಗಸ್ಟ್19ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆ ಮುಂದೂಡಿತ್ತು. ಗುರುವಾರ ಎರಡೂ ಕಡೆ ವಾದ ಆಲಿಸಿದ ನ್ಯಾಯಾದೀಶ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನ ಆಗಸ್ಟ್​ 31ಕ್ಕೆ ಮುಂದೂಡಿದ್ದರು. ಶನಿವಾರ ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯುವ ತನಕ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದ್ದರು.

ಅಭಿಷೇಕ್ ಮನು ಸಿಂಘ್ವಿ ವಾದವೇನು?.

ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಆದರೆ ಸೆಕ್ಷನ್ 17-ಎ ಅನ್ವಯವಾಗುವುದಿಲ್ಲ. ಜೊತೆಗೆ ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಆರೋಪಗಳಿಗೆ ಯಾವುದೇ ಶೋಕಾಸ್‌ ನೋಟಿಸ್‌ ನೀಡದೆ ನೇರವಾಗಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ. ಜತೆಗೆ ರಾಜ್ಯಪಾಲರು ಸಚಿವ ಸಂಪುಟ ಸಭೆಯ ಸಲಹೆಯನ್ನು ಪಡೆಯದೇ ತರಾತುರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರಾಜ್ಯಪಾಲರ ಅನುಮತಿಯನ್ನು ರದ್ದು ಪಡಿಸಬೇಕು ಎಂದು ಮನವಿ ಮಾಡಿದ್ದರು.

ಸಿದ್ದರಾಮಯ್ಯ ಅವರ ರಿಟ್ ಅರ್ಜಿಗೆ ರಾಜ್ಯಪಾಲರು ಮತ್ತು ದೂರುದಾರ ಪ್ರದೀಪ್ ಇಬ್ಬರು ಪ್ರತಿವಾದಿಗಳು ಆಕ್ಷೇಪಣೆಯನ್ನು ಸಲ್ಲಿಸಿಲ್ಲ. ಜನರು ಆಯ್ಕೆ ಮಾಡಿರೋ ಸರ್ಕಾರವನ್ನ ರಾಜ್ಯಪಾಲರ ಇಂತಹ ಕ್ರಮಗಳಿಂದ ಬದಲಾಯಿಸಲಾಗದು. ಅಲ್ಲದೆ ಪೊಲೀಸ್ ಅಧಿಕಾರಿ ಅನುಮತಿಯಿಲ್ಲದೆ ತನಿಖೆ ಮಾಡುವಂತಿಲ್ಲ. ಪಿಸಿ ಕಾಯ್ದೆ 17ಎ ಅಡಿ ಪೂರ್ವಾನುಮತಿ ಬೇಕು. 17ಎ ಪಾಲನೆಯಾಗದಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಎರಡೂ ಅಂಶಗಳನ್ನು ರಾಜ್ಯಪಾಲರು ಪಾಲಿಸಿಲ್ಲ ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್​ಮುಂದೆ ಪ್ರಸ್ತಾಪಿಸಿದ್ದರು.

Tags: CM SiddaramaiahCongress PartyHigh Court KarnatakaMuda Case
Previous Post

ಯಾರೋ ಅಪ್ಪು ಎಂದು ಹೊಡೆಯಲು ಹೋದ ದರ್ಶನ ಅಭಿಮಾನಿ..!

Next Post

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್​

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್​

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada