• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡಬೇಕು – ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Any Mind by Any Mind
April 29, 2021
in Uncategorized
0
ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡಬೇಕು – ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
Share on WhatsAppShare on FacebookShare on Telegram

ಕರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸರ್ಕಾರ ಹೇರಿರುವ ಕರೋನಾ ಕರ್ಪ್ಯೂ ಸಂಧರ್ಭದಲ್ಲಿ ಬಡವರಿಗೆ ಹೊರೆಯಾಗಬಾರದು, ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ 10 ಕೆಜಿಯಂತೆ ಅಕ್ಕಿ ಉಚಿತವಾಗಿ ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಬಾಣಂತಿಯವರು ಹಾಗೂ ಮಕ್ಕಳನ್ನು ಹೊರತು ಪಡಿಸಿ 18 ವರ್ಷ ಮೀರಿದ ಎಲ್ಲರಿಗೂ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

18 ವರ್ಷ ಮೀರಿದವರಿಗೆ ಮೇ ಒಂದರಿಂದ ಲಸಿಕೆ ನೀಡುವುದಾಗಿ ಪ್ರಧಾನಿಯವರು ಘೋಷಿಸಿದ್ದಾರೆ. ಇದೀಗ ಸಣ್ಣ ವಯಸ್ಸಿನವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಕರೋನಾ  ಸೋಂಕು ವ್ಯಾಪಕವಾಗದಂತೆ ತಡೆಯಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಉತ್ತಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಕೊಟ್ಟ ಸಲಹೆ ಎಂದು ಅದನ್ನು ಸ್ವೀಕರಿಸದೆ ಇರಬಾರದು, ಗಂಭೀರವಾಗಿ ಪರಿಗಣಿಸಬೇಕು – ಸಿದ್ದರಾಮಯ್ಯ

My suggestion should be taken seriously – Siddaramaiah says to the Government#Siddaramaiah #Karnataka #karnatakalockdown #COVID19India #CoronaSecondWave
#COVID19 pic.twitter.com/Y85na0MWBl

— Pratidhvani (@PratidhvaniNews) April 29, 2021

ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹದಿನೆಂಟು ವರ್ಷ ಮೀರಿದವರಿಗೆ ಲಸಿಕೆ ನೀಡಲು  ಎರಡು ಕೋಟಿ ವರೆಗೂ ಡೋಸ್  ಬೇಕಾಗುತ್ತದೆ. ಬಾಣಂತಿಯರು, ಮಕ್ಕಳನ್ನು ಹೊರತುಪಡಿಸಿ ಎಲ್ಲರಿಗೂ ಕಡ್ಡಾಯವಾಗಿ ಲಸಿಕೆ ನೀಡಬೇಕು.  ದೇಶದಲ್ಲಿ ಲಸಿಕೆಗೆ ಕೊರತೆ ಇದೆ. ಆದರೆ, ಎಲ್ಲ ರಾಜ್ಯಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಲಸಿಕೆ ಪೂರೈಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಕೋರೊನಾ ಸೋಂಕಿನಿಂದ ದೂರವಿರಲು 18 ವರ್ಷ ಮೀರಿದವರು ಲಸಿಕೆ ಪಡೆದುಕೊಳ್ಳಬೇಕು ಎಂದು ಜನರಲ್ಲಿ ನಾನು ಮನವಿ ಮಾಡುತ್ತೇನೆ. ಇದರಿಂದ ರೋಗ ಹರಡುವುದನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ.

ಬೆಡ್ ಗಳ ಕೊರತೆ ನಿವಾರಿಸಿ :

ಐಸಿಯು ಬೆಡ್ ಗಳಿಗೆ ರಾಜ್ಯದಲ್ಲಿ ತೀವ್ರ ಕೊರತೆ ಇದೆ. ಬೆಂಗಳೂರಿನಲ್ಲಿಯೂ ಇದೇ ಪರಿಸ್ಥಿತಿ ಇದೆ.  ವಿಕ್ಟೋರಿಯಾ ಆಸ್ಪತ್ರೆಯಲ್ಲಿ 750 ಹಾಸಿಗೆಗಳಿವೆ. ಆದರೆ 65 ಹಾಸಿಗೆಗಳಿಗೆ ಮಾತ್ರ ಐಸಿಯು ಸೌಲಭ್ಯವಿದೆ. ಕನಿಷ್ಟ 250 ಬೆಡ್ ಗಳಿಗಾದರೂ ಐಸಿಯು ಸೌಲಭ್ಯ ಒದಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.  

ಜೊತೆಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಬೇಕು. ತಕ್ಷಣ ಆಸ್ಪತ್ರೆಗೆ 100 ಮಂದಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು. ನಿವೃತ್ತ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆಯನ್ನೂ ಈ ಸಂದರ್ಭದಲ್ಲಿ ಬಳಸಿಕೊಳ್ಳುವುದು ಸೂಕ್ತ ಎಂದವರು ಸಲಹೆ ನೀಡಿದ್ದಾರೆ.

karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು ವಿತರಿಸಿ -ಸಿದ್ದರಾಮಯ್ಯ

ಬೆಂಗಳೂರಿನಲ್ಲಿ 22 ಸಾವಿರ ಮಂದಿ ನಿತ್ಯ ಸೋಂಕಿಗೆ ಗುರಿಯಾಗುತ್ತಿದ್ದಾರೆ. ಇದು ಇನ್ನೂ ಐದು ಪಟ್ಟು ಹೆಚ್ಚಾಗಲಿದೆ ಎಂದು ಡಾ. ದೇವಿಪ್ರಸಾದ್ ಶೆಟ್ಟಿಯವರು ಹೇಳಿದ್ದಾರೆ. ಹೀಗಾಗಿ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ಇದಕ್ಕೂ ಮೊದಲು ಸರ್ಕಾರ ಜನರು ಮತ್ತು ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಾನು ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಹಲವಾರು ಸಲಹೆಗಳನ್ನು ನೀಡಿದ್ದೇನೆ. ಈ ಬಗ್ಗೆ ಸರ್ಕಾರ ಉದಾಸೀನ ಮಾಡಬಾರದು. ನೀಡಿರುವ ಸಲಹೆಗಳನ್ನು ಜಾರಿಗೆ ತರುವ ಕೆಲಸ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ಯಾಕೇಜ್ ಘೋಷಣೆ ಮಾಡಿ :

ಸರ್ಕಾರ ಈಗ 14 ದಿನಗಳ ಕರ್ಫ್ಯೂ ಜಾರಿಗೆ ತಂದಿದೆ. ಇದಕ್ಕೆ ನಮ್ಮ ವಿರೋಧವಿಲ್ಲ. ಇದರಿಂದ ತೊಂದರೆಗೆ ಒಳಗಾಗುವ ಕೂಲಿ ಕಾರ್ಮಿಕರು, ನಿತ್ಯದ ದುಡಿಗೆ ಅವಲಂಬಿಸಿರುವ ಜನರಿಗೆ ಪ್ಯಾಕೇಜ್ ಘೋಷಿಸಬೇಕು. ಹತ್ತು ಕೆಜಿ ಆಹಾರ ಧಾನ್ಯ, ಒಂದು ಕುಟುಂಬಕ್ಕೆ ಹತ್ತು ಸಾವಿರ ರೂ.ಗಳ ಹಣಕಾಸು ನೆರವು ಒದಗಿಸಬೇಕು. ಕಾರ್ಮಿಕರು ಲಕ್ಷಾಂತರ ಸಂಖ್ಯೆಯಲ್ಲಿ ತಮ್ಮ ಊರುಗಳಿಗೆ ವಲಸೆ ಹೋಗಿದ್ದಾರೆ. ಅವರಿಗೆ ಅವರ ಹಳ್ಳಿಗಳಲ್ಲಿ ಉದ್ಯೋಗ ಸಿಗುವಂತೆ ಮಾಡಬೇಕು. ಇದಕ್ಕಾಗಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬಳಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಸತ್ಯ ಹೇಳಿದರೆ ಟೀಕೆ ಎನ್ನುವುದೇಕೆ ?

ಕರೋನಾ  ಸಂದರ್ಭದಲ್ಲಿ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ ಎಂದು ಸಚಿವರು ಹೇಳಿಕೆ ಕೊಡುತ್ತಿದ್ದಾರೆ. ಸತ್ಯ ಹೇಳಿದರೆ ಟೀಕೆ ಎನ್ನುವುದೇಕೆ ? ಶವಸಂಸ್ಕಾರಕ್ಕೂ ಜನ ಪರದಾಡುತ್ತಿರುವುದು ಸತ್ಯ ಅಲ್ಲವೇ ? ಅದನ್ನು ಸರ್ಕಾರದ ಗಮನಕ್ಕೆ ತಂದರೆ ಟೀಕೆ ಎಂದು ಭಾವಿಸುವುದೇಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Siddaramaiah ಕೊಟ್ಟ ಸಲಹೆ ಎಂದು ಅದನ್ನು ಸ್ವೀಕರಿಸದೆ ಇರಬಾರದು, ಗಂಭೀರವಾಗಿ ಪರಿಗಣಿಸಬೇಕು - ಸಿದ್ದರಾಮಯ್ಯ | Covid

ಉಮೇಶ್‌ ಕತ್ತಿ ಅವರನ್ನು ವಜಾ ಮಾಡಿ :

ಕೇಂದ್ರ ಸರ್ಕಾರ ಆಹಾರ ಧಾನ್ಯ ಕೊಡುವ ವರೆಗೆ ಉಪವಾಸ ಬಿದ್ದು ಸಾಯಬೇಕೆ ಎಂದು ಕೇಳಿದವರಿಗೆ ಸಾಯುವುದೇ ಉತ್ತಮ ಎಂದು ಸಚಿವ ಉಮೇಶ್ ಕತ್ತಿಯವರು ಹೇಳಿದ್ದಾರೆ. ಇದು ಉದ್ಧಟತನ ಮತ್ತು ದುರಹಂಕಾರದ ಮಾತು. ಮಂತ್ರಿಯಾಗಿ ಮುಂದುವರಿಯಲು ಅವರು ನಾಲಾಯಕ್. ಮಂತ್ರಿಗಳ ಪರವಾಗಿ ಮುಖ್ಯಮಂತ್ರಿಗಳು ವಿಷಾದ ವ್ಯಕ್ತಪಡಿವುದಲ್ಲ. ಕೂಡಲೇ ಕತ್ತಿಯವರನ್ನು ವಜಾ ಮಾಡಬೇಕು. ಇಂತಹ ಮಂತ್ರಿಗಳಿಂದ ಜನರಿಗೆ ರಕ್ಷಣೆ ಸಿಗುವುದಾದರೂ ಹೇಗೆ ? ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರದ ಇದ್ದಾಗ ಬಡ ಕುಟುಂಬಗಳಿಗೆ ಒಬ್ಬರಿಗೆ ಏಳು ಕೆಜಿ ಪ್ರಕಾರ ಅಕ್ಕಿ ನೀಡಲಾಗುತ್ತಿತ್ತು. ಈಗ ಅಕ್ಕಿಪ್ರಮಾಣ ಕಡಿಮೆ ಮಾಡುವುದರ ಜೊತೆಗೆ ನಾವೂ ಏನೂ ಮಾಡಲಾಗದು ಸಾಯಿರಿ ಎಂದು ಹೇಳುವ ಮಟ್ಟಕ್ಕೆ ಸಚಿವರು ಬಂದಿದ್ದಾರೆ. ಸಚಿವರ ಇಂತಹ ಹೇಳಿಕೆ ಖಂಡನೀಯ. ಕತ್ತಿ ಅವರನ್ನು ಮಂತ್ರಿ ಮಂಡಲದಿಂದ ಕೂಡಲೇ ಕೈ ಬಿಡಬೇಕು ಎಂದು ಅವರು ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಇದು ಅತ್ಯಂತ ಬೇಜವಾಬ್ದಾರಿಯುತ ಸರ್ಕಾರ. ಇಂತಹ ಮಂತ್ರಿಗಳನ್ನು ಯಡಿಯೂರಪ್ಪ ಅವರು ಸಹಿಸಿಕೊಳ್ಳುವುದನ್ನು ಬಿಟ್ಟು ರಾಜಿನಾಮೆ ಪಡೆಯುವುದು ಉತ್ತಮ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹತ್ತು ಕೆಜಿ ಅಕ್ಕಿ ಕೊಡಿ :

ಬಡ ಕುಟುಂಬಗಳಿಗೆ ವ್ಯಕ್ತಿಗೆ ಹತ್ತು ಕೆಜಿ ನೀಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ರಾಜ್ಯದ ಜನರನ್ನು ರಕ್ಷಿಸುವ ದೃಷ್ಟಿಯಿಂದ ಹತ್ತು ಕೆಜಿ ನೀಡುವುದು ಒಳ್ಳೆಯದೇ ಅಲ್ಲವೇ ? ಏಳು ಕೆಜಿ ಅಕ್ಕಿ, ಮೂರು ಕೆಜಿ ರಾಗಿ ಕೊಡಲಿ. ರಾಗಿ ಬೇಡ ಎನ್ನುವವರಿಗೆ ಹತ್ತು ಕೆಜಿ ಪ್ರಕಾರ ಅಕ್ಕಿಯನ್ನೇ ವಿತರಿಸಲಿ. ಜೋಳ, ರಾಗಿ ಕೊಡಿ ಎಂದು ಜನ ಕೇಳಿರಲಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದಾರೆ.

Previous Post

ಎಲ್ಲರಿಗೂ ಉಚಿತ ಲಸಿಕೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಂಗಿ ಊದಿದೆ – ಹೆಚ್ಡಿ ಕುಮಾರಸ್ವಾಮಿ ಕಿಡಿ

Next Post

ನನ್ನ ಕ್ಷೇತ್ರದಲ್ಲಿ ಬೆಡ್‌ ಕೊರತೆ ಇದೆ, ಆಕ್ಸಿಜನ್‌ ಸಿಗದೆ ನನ್ನ ಸಂಬಂಧಿಕರೇ ಮೃತಪಟ್ಟಿದ್ದಾರೆ -ಶಾಸಕ ಕೆ ಜೆ ಜಾರ್ಜ್

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ನನ್ನ ಕ್ಷೇತ್ರದಲ್ಲಿ ಬೆಡ್‌ ಕೊರತೆ ಇದೆ, ಆಕ್ಸಿಜನ್‌ ಸಿಗದೆ ನನ್ನ ಸಂಬಂಧಿಕರೇ ಮೃತಪಟ್ಟಿದ್ದಾರೆ -ಶಾಸಕ ಕೆ ಜೆ ಜಾರ್ಜ್

ನನ್ನ ಕ್ಷೇತ್ರದಲ್ಲಿ ಬೆಡ್‌ ಕೊರತೆ ಇದೆ, ಆಕ್ಸಿಜನ್‌ ಸಿಗದೆ ನನ್ನ ಸಂಬಂಧಿಕರೇ ಮೃತಪಟ್ಟಿದ್ದಾರೆ -ಶಾಸಕ ಕೆ ಜೆ ಜಾರ್ಜ್

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada