ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ವರುಣದಲ್ಲಿ ಗೆದ್ದು ರಾಜ್ಯದ ಸಿಎಂ ಸ್ಥಾನವನ್ನು ಅಲಂಕರಿಸಿದ ಬಳಿಕ ಇದೇ ಮೊದಲಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಕ್ಷೇತ್ರಕ್ಕೆ ಮರಳುತ್ತಿದ್ದಾರೆ. ಜೂನ್ 10ರಂದು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆಯನ್ನು ಹಮ್ಮಿಕೊಂಡಿದ್ದು ಬೃಹತ್ ಸಂಖ್ಯೆಯಲ್ಲಿ ಅಭಿಮಾನಿಗಳು ಸಿದ್ದರಾಮಯ್ಯರಿಗೆ ಸ್ವಾಗತ ಕೋರಲು ಸಜ್ಜಾಗಿದ್ದಾರೆ.

ಕೃತಜ್ಞತಾ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ. ವರುಣದ ಬಿಳಿಗೆರೆ ಎಂಬಲ್ಲಿ ಈ ಕೃತಜ್ಞತಾ ಸಮಾವೇಶ ನಡೆಯಲಿದೆ. ಈ ಹಿನ್ನೆಯಲ್ಲಿಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯ್ತು.
ಸಿಎಂ ಸಿದ್ದರಾಮಯ್ಯರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲು ಜಿಲ್ಲಾ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದ್ದು ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ ಬಿಜೆ ವಿಜಯ ಕುಮಾರ್, ನಗರಧ್ಯಕ್ಷ ಆರ್ ಮೂರ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು.