ಬೆಂಗಳೂರು : ಮೇ.17: ಕರ್ನಾಟಕದ ಮುಂದಿನ ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಈಗ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನೀಡಿದ್ದರು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ.
ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಸಿದ್ದರಾಮಯ್ಯ ತವರೂರಿನಲ್ಲಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಘೋಷಣೆ ಆಗುತ್ತಿದ್ದಂತೆ ಸಿದ್ದು ಹುಟ್ಟೂರಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಜೊತೆಗೆ ಮೊಮ್ಮಗ ಧವನ್ ರಾಕೇಶ್ ಭಾವಚಿತ್ರ ಹಾಕಿ, ಮುಂದಿನ ವಾರಸುದಾರ ಎಂದು ಬರೆದಿದ್ದಾರೆ.

ಕರ್ನಾಟಕ ರಾಜ್ಯದ 24 ನೇ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಕೆಪಿಸಿಸಿ ವೆಬ್ ಸೈಟ್ ಟ್ವೀಟ್ ಮಾಡಿದೆ.

