• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರೈತರ-ಗ್ರಾಹಕರ ಹಿತಾಸಕ್ತಿ ಕಾಪಾಡುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
November 26, 2022
in ಕರ್ನಾಟಕ, ರಾಜಕೀಯ
0
ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಜಾದ್ ಪಡೆದಿದ್ದಾರೆ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭವನ್ನು ಪೂರ್ಣವಾಗಿ ಹೈನುಗಾರರಿಗೇ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ADVERTISEMENT

ಸರ್ಕಾರದ ಹಾದಿ ತಪ್ಪಿದ ನೀತಿಗಳಿಂದಾಗಿ ರಾಜ್ಯದ ಹಾಲು ಉತ್ಪಾದಕರು, ಹಾಲು ಉತ್ಪಾದಕ ಮಂಡಳಿಗಳೂ ಸಹ ವಿಪರೀತ ಒತ್ತಡದಲ್ಲಿರುವ ಪರಿಣಾಮ 94 ಲಕ್ಷ ಲೀಟರುಗಳಿಗೆ ತಲುಪಿದ್ದ ಹಾಲಿನ ಸಂಗ್ರಹವು ಈ ತಿಂಗಳಲ್ಲಿ 77 ಲಕ್ಷ ಲೀಟರುಗಳಿಗೆ ಕುಸಿದಿದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ನೋಂದಾಯಿತ ಹಾಲು ಉತ್ಪಾದಕರಿದ್ದಾರೆ. ಅವರಲ್ಲಿ ಸರಾಸರಿ 9 ಲಕ್ಷ ಜನರಿಗೆ ಸರ್ಕಾರ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಹಾಲನ್ನು ಯಥೇಚ್ಛವಾಗಿ ಉತ್ಪಾದಿಸುತ್ತಿದ್ದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಮುಂತಾದ ಜಿಲ್ಲೆಗಳ ರೈತರೆ ಹಸುಗಳನ್ನು ಸಾಕಲು ನಿರಾಸಕ್ತಿ ತೋರಿಸುತ್ತಿದ್ದಾರೆ.

ನಮ್ಮ ಸರ್ಕಾರ ಇದ್ದಾಗ 2013 ರಿಂದ 2018ರ ಅವಧಿಯಲ್ಲಿ ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂಪಾಯಿಗಳಷ್ಟು ಹೆಚ್ಚಿಸಿದ್ದೆವು. ವರ್ಷಕ್ಕೆ 4700 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾಯಿಸಿದ್ದೆವು. ನಮ್ಮ ಸರ್ಕಾರದ ನಿರ್ಧಾರದಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017ರ ವೇಳೆಗೆ 73 ಲಕ್ಷ ಲೀಟರಿಗೆ [28 ಲಕ್ಷ ಲೀಟರು] ಏರಿಕೆಯಾಗಿತ್ತು. ಇದರಿಂದಾಗಿ ರೈತರ ಬದುಕಿನಲ್ಲಿ ಚೈತನ್ಯ ಮೂಡಿತ್ತು.

ಆದರೆ ಸರ್ಕಾರ ತನ್ನ ಪಶುಪಾಲಕ ವಿರೋಧಿ ನೀತಿಗಳಿಂದಾಗಿ ಹಾಲು ಉತ್ಪಾದಕರ ಬದುಕನ್ನು ನಿರ್ನಾಮ ಮಾಡಲು ಹೊರಟಿದೆ. ಸರ್ಕಾರ ಕಾಲ ಕಾಲಕ್ಕೆ ಬಿಡುಗಡೆ ಮಾಡಬೇಕಾದ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುತ್ತಿಲ್ಲ. ಇತ್ತೀಚಿನ ಪತ್ರಿಕೆಗಳ ವರದಿ ಪ್ರಕಾರ ಅನೇಕ ಜಿಲ್ಲೆಗಳ ಹಾಲು ಉತ್ಪಾದಕರಿಗೆ ಕಳೆದ 7-8 ತಿಂಗಳಿಂದ ಪ್ರೋತ್ಸಾಹ ಧನವನ್ನು ನೀಡಿಲ್ಲ. ಇದರ ಬಾಬತ್ತು ನೂರಾರು ಕೋಟಿಗಳಷ್ಟು ಬಾಕಿ ಇದೆ.

ಕಳೆದ 5 ವರ್ಷಗಳಲ್ಲಿ ಜಾನುವಾರುಗಳಿಗೆ ನೀಡುವ ಹಿಂಡಿ, ಬೂಸ ಮುಂತಾದ ಪಶು ಆಹಾರದ ಬೆಲೆಗಳು ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಿವೆ. 2017-18 ರಲ್ಲಿ 49 ಕೆಜಿ ಬೂಸಾದ ಬೆಲೆ 450ರೂ ಇದ್ದದ್ದು ಈಗ 1300 ರಿಂದ 1350 ರೂಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ ಇದ್ದದ್ದು ಈಗ 1400 ಕ್ಕೂ ಹೆಚ್ಚಾಗಿದೆ. ಆದರೆ ಹಾಲಿನ ದರಗಳು ಮಾತ್ರ ಹೆಚ್ಚಾಗಿಲ್ಲ. ಇದರಿಂದಾಗಿ ನಮ್ಮ ರೈತರು ಜಾನುವಾರುಗಳನ್ನು ಸಾಕಣೆ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಪ್ರತಿ ತಿಂಗಳು 3000 ಟನ್ ಹಾಲಿನ ಪುಡಿಯನ್ನು ‘ಕ್ಷೀರ ಭಾಗ್ಯ’ ಯೋಜನೆಯಡಿ ಶಾಲೆ ಮತ್ತು ಅಂಗನವಾಡಿಗಳ ಮಕ್ಕಳಿಗಾಗಿ ನೀಡಲಾಗುತ್ತಿದೆ. ಆದರೆ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಈಚೆಗೆ ಹಾಲಿನ ಪುಡಿಗೆ ನೀಡುವ ದರಗಳನ್ನು ಪರಿಷ್ಕರಿಸಿಲ್ಲ. 1 ಕೆಜಿ ಹಾಲಿನ ಪುಡಿ ಉತ್ಪಾದಿಸಲು ಜಿಎಸ್‍ಟಿ ಬಿಟ್ಟು 310ರೂ ತಗಲುತ್ತಿದೆ. ಆದರೆ ಸರ್ಕಾರ ಪ್ರತಿ ಕೆಜಿಗೆ ಕೇವಲ 275ರೂಗಳನ್ನು ಮಾತ್ರ ನೀಡುತ್ತಿದೆ.

ಮಾರುಕಟ್ಟೆಯಲ್ಲಿ ಕೆಎಂಎಫ್ ಒಂದು ಕೆಜಿ ಹಾಲಿನ ಪುಡಿಯನ್ನು 350 ರೂಗೆ ಮಾರಾಟ ಮಾಡುತ್ತಿರುವುದರಿಂದ ಪ್ರತಿ ವರ್ಷ 250 ಕೋಟಿ ರೂ ನಷ್ಟವಾಗಿ ಕೆಎಂಎಫ್ ಒತ್ತಡಕ್ಕೆ ಸಿಲುಕಿದೆ.

ಸರ್ಕಾರ ಕೆಎಂಎಫ್‍ಗೆ ಮಾಡುತ್ತಿರುವ ಅನ್ಯಾಯದಿಂದಾಗಿ ರಾಜ್ಯದ ಜನರು ಮತ್ತು ಬೆಲೆ ಏರಿಕೆಯ ಹೊರೆಯನ್ನು ಅನುಭವಿಸುತ್ತಿದ್ದಾರೆ. ಸರ್ಕಾರ ಹಾಲು, ಮೊಸರಿಗೆ ಲೀಟರಿಗೆ 2 ರೂ ಹೆಚ್ಚು ಮಾಡಿದ್ದಾರೆ. ಆದರೆ ಕಳೆದ ಎರಡು ತಿಂಗಳಲ್ಲಿ ಪ್ರತಿ ಕೆಜಿ ತುಪ್ಪದ ಬೆಲೆಯನ್ನು ಸದ್ದಿಲ್ಲದೆ 140 ರೂ ಹೆಚ್ಚಿಸಿದ್ದಾರೆ. ಎಲ್ಲ ಸಿಹಿ ಪದಾರ್ಥಗಳು, ಪನ್ನೀರ್ ಮುಂತಾದವುಗಳ ಬೆಲೆಯನ್ನೂ ಸಹ ಶೇ.15 ರಷ್ಟು ಹೆಚ್ಚಿಸಿದ್ದಾರೆ. 10ರೂಗಳಿಗೆ ಮಾರುತ್ತಿದ್ದ ಒಂದು ಸಣ್ಣ ಮೈಸೂರುಪಾಕಿಗೆ 5 ರೂ ಹೆಚ್ಚಿಸಿ ಈಗ 15ರೂಗೆ ಮಾರುತ್ತಿದ್ದಾರೆ. ಆದರೆ ಏರಿಕೆಯಾಗಿರುವ ಹಾಲಿನ ದರವನ್ನು ಹೊರತುಪಡಿಸಿ ಉಳಿದ ಉತ್ಪನ್ನಗಳ ಹೆಚ್ಚುವರಿ ಹಣವನ್ನು ನಮ್ಮ ರೈತರಿಗೆ ವರ್ಗಾಯಿಸದೆ ಮೋಸ ಮಾಡಲಾಗುತ್ತಿದೆ. ತುಪ್ಪ, ಪನ್ನೀರ್, ಸಿಹಿ ತಿಂಡಿಗಳ ಬೆಲೆ ಹೆಚ್ಚಿಸಲಾಗಿದೆ ಎಂಬ ವಿಷಯವನ್ನು ಪ್ರಚಾರ ಮಾಡದೆ ಬಚ್ಚಿಡಲಾಗಿದೆ.

ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿದೆ. ಅವುಗಳಿಗೆ ಲಸಿಕೆ ಹಾಕಲು ವೈದ್ಯರುಗಳೇ ಇಲ್ಲ. ಸಂಚಾರಿ ಆಸ್ಪತ್ರೆ ಮಾಡುತ್ತೇವೆಂದು ಆಂಬ್ಯುಲೆನ್ಸುಗಳನ್ನು ಖರೀದಿಸಿ ಧೂಳು ತಿನ್ನಿಸಲಾಗುತ್ತಿದೆ. ಖರೀದಿಗೆ ಇರುವ ಉತ್ಸಾಹವು ಅವುಗಳನ್ನು ಬಳಸುವುದರಲ್ಲಿ ಇಲ್ಲವಾಗಿದೆ. ಆದ್ದರಿಂದ ಈ ಕೂಡಲೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ನಂದಿನಿ ತುಪ್ಪ ಸೇರಿದಂತೆ ಇತರೆ ಉತ್ಪನ್ನಗಳಿಗೆ ಹೆಚ್ಚು ಮಾಡಿರುವ ಬೆಲೆಗಳಿಂದ ಬರುವ ಲಾಭವೆಲ್ಲವನ್ನೂ ರೈತರಿಗೆ ವರ್ಗಾಯಿಸಬೇಕು.

ಕ್ಷೀರಭಾಗ್ಯ ಯೋಜನೆಯಡಿ ಕೆಎಂಎಫ್ ನಿಂದ ಖರೀದಿಸುತ್ತಿರುವ 36 ಸಾವಿರ ಟನ್ ಹಾಲಿನ ಪುಡಿಗೆ ನೀಡುತ್ತಿರುವ ಬೆಲೆಯನ್ನು ಪರಿಷ್ಕರಿಸಿ ಮಾರುಕಟ್ಟೆ ದರದಲ್ಲಿ ಖರೀದಿಸಿ ಕೆಎಂಎಫ್ ಮತ್ತು ರೈತರನ್ನು ಉಳಿಸಬೇಕು. ಚರ್ಮಗಂಟು ರೋಗ ತಡೆಯಲು ಕೂಡಲೆ ಸಮರೋಪಾದಿಯಲ್ಲಿ ಲಸಿಕೆ ಹಾಕಿ ಮುಗಿಸಬೇಕು. ವಿವಿಧ ಕಾರಣಗಳಿಂದಾಗಿ ಮರಣ ಹೊಂದುತ್ತಿರುವ ಕುರಿ ಮೇಕೆ ಮತ್ತು ದೊಡ್ಡ ಜಾನುವಾರುಗಳಿಗೆ ಪರಿಹಾರ ನೀಡುವಿಕೆಯನ್ನು ತ್ವರಿತಗೊಳಿಸಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಮುಕ್ತಾಯಗೊಳಿಸಬೇಕು.

ಜಾನುವಾರು ಹತ್ಯಾ ಕಾಯ್ದೆಯ ನೆಪದಲ್ಲಿ ರೈತರಿಗೆ ವಿಪರೀತ ಕಿರುಕುಳ ನೀಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಆರೆಸ್ಸೆಸ್ಸಿಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡುತ್ತಿದ್ದೀರಿ. ಆದರೆ ನಮ್ಮ ರೈತರ ಜಾನುವಾರುಗಳು ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು. ಸರ್ಕಾರ ಕೂಡಲೆ ಮಧ್ಯ ಪ್ರವೇಶಿಸಿ ರೈತರು ಮತ್ತು ಗ್ರಾಹಕರ ಇಬ್ಬರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕವಾಗಿ ಸಮಸ್ಯೆಗಳನ್ನು ಪರಿಹರಿಸಬೇಕು. ಪಶುಭಾಗ್ಯ ಯೋಜನೆಯನ್ನು ಸಶಕ್ತಗೊಳಿಸಬೇಕು. ಸರ್ಕಾರಿ ನೌಕರರಿಂದ 11000 ರೂಪಾಯಿಗಳನ್ನು ದೋಚಲು ಹೊರಟಿರುವ ಯೋಜನೆಯನ್ನು ಕೂಡಲೆ ನಿಲ್ಲಿಸಬೇಕು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬ್ಯೂಟಿ ಇದೆ ಟ್ಯಾಲೆಂಟ್‌ ಇದೆ ಆದರೆ ನಿಯತ್ತಿಲ್ಲ | Rashmika Mandanna | Rishab Shetty |

Next Post

SHARATH BACCHE GOWDA | MTB ನಾಗರಾಜ್ ಗೆ ಬಚ್ಚೇಗೌಡರಿಂದ ಮಾತಿನ ಚಾಟಿ ಏಟು | MTB NAGARAJ | HOSKOTE |

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
SHARATH BACCHE GOWDA | MTB ನಾಗರಾಜ್ ಗೆ ಬಚ್ಚೇಗೌಡರಿಂದ ಮಾತಿನ ಚಾಟಿ ಏಟು | MTB NAGARAJ | HOSKOTE |

SHARATH BACCHE GOWDA | MTB ನಾಗರಾಜ್ ಗೆ ಬಚ್ಚೇಗೌಡರಿಂದ ಮಾತಿನ ಚಾಟಿ ಏಟು | MTB NAGARAJ | HOSKOTE |

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada