ಸಿದ್ದರಾಮಯ್ಯ (Siddaramaiah) ಲಕ್ಕಿ ಲಾಟರಿ ಹೊಡೆದುಬಿಟ್ಟ. ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು (Sonia gandhi) ಮೊದಲು ಭೇಟಿ ಮಾಡಿಸಿದವನೇ ನಾನು.ಆದ್ರೆ ಅವನ ಗ್ರಹಚಾರ ಚೆನ್ನಾಗಿತ್ತು ಸಿಎಂ ಆಗಿಬಿಟ್ಟ ಅಂತ ಶಾಸಕ ಬಿ.ಆರ್.ಪಾಟೀಲ್ (BR Patil) ಪರೋಕ್ಷವಾಗಿ ತಮ್ಮ ಬೇಸರ ಹೊರಹಾಕಿದ್ದಾರೆ.

ಇಂದು ಕೆ.ಆರ್.ಪೇಟೆಗೆ ಆಗಮಿಸಿದ್ದ ವೇಳೆ ಶಾಸಕ ಬಿ.ಆರ್ ಪಾಟೀಲ್ ಆಪ್ತರ ಜೊತೆ ದೂರವಾಣಿ ಮೂಲಕ ಬಿ.ಆರ್.ಪಾಟೀಲ್ ಮಾತನಾಡುತ್ತಿರುವ ವೇಳೆ ಈ ರೀತಿ ಹೇಳಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ನನಗೆ ಗಾಡು ಇಲ್ಲ, ಫಾದರು ಇಲ್ಲ. ರಾಜ್ಯ ಉಸ್ತುವಾರಿ ಸುರ್ಜೆವಾಲರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಅವರು ಸಹ ನನ್ನ ಮಾತನ್ನ ಗಂಭೀರವಾಗಿ ಆಲಿಸಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ನೋಡೋಣ ಅಂತ ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದಾರೆ.