• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನದಿಂದ ನೆಲಕಚ್ಚುತ್ತಿರುವ ಉದ್ಯಮಕ್ಕೆ ಅಗತ್ಯ ನೆರವು ನೀಡಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Any Mind by Any Mind
June 23, 2021
in ಕರ್ನಾಟಕ, ರಾಜಕೀಯ
0
ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ
Share on WhatsAppShare on FacebookShare on Telegram

ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕರೋನ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ, ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ.

ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ.

ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೆ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲಿಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ.

ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡಿ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ.

ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್ ಗಳು, ಡೆಕೊರೇಟರ್ ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ.

ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೆ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ.

ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ.

ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂಗಳ  ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೆ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ 1500 ಕೋಟಿ ರೂಗಳು ಮಾತ್ರ.  ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕ ಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ.

ಆದ್ದರಿಂದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10000 ರೂಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ, ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು.

ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

Tags: Karnataka GovernmentsiddaramaiahYediyurappa
Previous Post

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಎಂಟ್ರಿ: ಎರಡು ಪ್ರಕರಣಗಳು ಇರುವುದಾಗಿ ಖಚಿತಪಡಿಸಿದ ಸಚಿವ ಸುಧಾಕರ್

Next Post

ಫ್ಲೈಯಿಂಗ್‌ ಸಿಖ್‌ ನನ್ನು ಮಣಿಸಿದ್ದ ಕೊಡಗಿನ ಕ್ರೀಡಾ ವೀರನ ಬಗ್ಗೆ ನಿಮಗೆ ಗೊತ್ತೆ ?

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಫ್ಲೈಯಿಂಗ್‌ ಸಿಖ್‌ ನನ್ನು ಮಣಿಸಿದ್ದ ಕೊಡಗಿನ ಕ್ರೀಡಾ ವೀರನ ಬಗ್ಗೆ ನಿಮಗೆ ಗೊತ್ತೆ ?

ಫ್ಲೈಯಿಂಗ್‌ ಸಿಖ್‌ ನನ್ನು ಮಣಿಸಿದ್ದ ಕೊಡಗಿನ ಕ್ರೀಡಾ ವೀರನ ಬಗ್ಗೆ ನಿಮಗೆ ಗೊತ್ತೆ ?

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada