• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಪ್ರತಿಧ್ವನಿ by ಪ್ರತಿಧ್ವನಿ
May 20, 2026
in ರಾಜಕೀಯ
0
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
Share on WhatsAppShare on FacebookShare on Telegram

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರ ಬದಲಾವಣೆಗೆ ವೇದಿಕೆ ಸಜ್ಜಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ADVERTISEMENT
Wife Jail Visit: ದರ್ಶನ್​ ಭೇಟಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ | #pratidhvani

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಕಾಲಕಾಲಕ್ಕೆ ಕೇಳಿಬರುತ್ತಿವೆ. ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಒಳಒಪ್ಪಂದವಿದೆ ಎಂಬ ಊಹಾಪೋಹಗಳು ಆಗಾಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ. ಆದರೆ ಕಾಂಗ್ರೆಸ್ ನಾಯಕರು ಇದನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ.

ಸಾಧನಾ ಸಮಾವೇಶದ ವಿರುದ್ಧ ರೊಚ್ಚಿಗೆದ್ದ ಬಿಜೆಪಿ ನಾಯಕ.. #pratidhvani

ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಸರ್ಕಾರದ ಒಳಗಿನ ಅಸಮಾಧಾನ, ಕೆಲವು ಸಚಿವರ ಹೇಳಿಕೆಗಳು ಹಾಗೂ ನಾಯಕತ್ವದ ಬಗ್ಗೆ ಕೇಳಿಬರುತ್ತಿರುವ ಅಭಿಪ್ರಾಯಗಳು ದೆಹಲಿ ರಾಜಕೀಯಕ್ಕೂ ತಲುಪಿವೆ ಎನ್ನಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೋರಿದ್ದಾರೆ ಎಂಬ ಮಾಹಿತಿ ಪಕ್ಷದ ಒಳವಲಯದಲ್ಲಿ ಹರಿದಾಡುತ್ತಿದೆ.ಆದರೆ ಮುಖ್ಯಮಂತ್ರಿ ಕಚೇರಿಯಿಂದಾಗಲಿ, ಕಾಂಗ್ರೆಸ್ ಹೈಕಮಾಂಡ್‌ನಿಂದಾಗಲಿ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Santhosh Lad : ನಿಂತಲ್ಲೇ ಕಾಲೇಜು ವಿದ್ಯಾರ್ಥಿನಿಯ ಕಷ್ಟ ಪರಿಹರಿಸಿದ ಸಂತೋಷ್ ಲಾಡ್... #pratidhvani

ಸಿದ್ದರಾಮಯ್ಯ ದೆಹಲಿ ಭೇಟಿಯ ಉದ್ದೇಶ ಸರ್ಕಾರದ ಆಡಳಿತಾತ್ಮಕ ವಿಚಾರಗಳಿಗೋ ಅಥವಾ ರಾಜಕೀಯ ಬೆಳವಣಿಗೆಗಳಿಗೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಇನ್ನೊಂದೆಡೆ, ಕಾಂಗ್ರೆಸ್‌ನ ಕೆಲವು ನಾಯಕರು “ಸರ್ಕಾರ ಸ್ಥಿರವಾಗಿದೆ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ” ಎಂದು ಹೇಳುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾತ್ರ ಕಾಂಗ್ರೆಸ್ ಒಳಗಿನ ಬೆಳವಣಿಗೆಗಳನ್ನು ಟೀಕಿಸುತ್ತಿದ್ದಾರೆ.ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭೆ ಚುನಾವಣೆಯತ್ತ ರಾಜಕೀಯ ಪಕ್ಷಗಳು ಈಗಾಗಲೇ ತಂತ್ರ ರೂಪಿಸಲು ಆರಂಭಿಸಿವೆ.

Santhosh Lad : ಸಂತೋಷ್ ಲಾಡ್ ಅದ್ಭುತ ಭಾಷಣ.. #pratidhvani

ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಳಗಿನ ಶಕ್ತಿ ಪ್ರದರ್ಶನ, ನಾಯಕತ್ವ ಚರ್ಚೆಗಳು ಹಾಗೂ ದೆಹಲಿ ಭೇಟಿಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.ಸದ್ಯ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಯ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಡೆ ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

 

Tags: #cmchange#congress#dkshivakumar#HighCommand#karnatakacongress#KarnatakaPolitics#politicalnews#siddaramaiahpratidavani
Previous Post

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

Next Post

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

Related Posts

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?
ರಾಜಕೀಯ

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

by ಪ್ರತಿಧ್ವನಿ
May 20, 2026
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾರ್ಡಿಕ್ ಶೃಂಗಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ, ಕಾನೂನಿನ ಆಡಳಿತ ಹಾಗೂ ಜನಪರ ಮೌಲ್ಯಗಳೇ ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳನ್ನು ಸಹಜ ಪಾಲುದಾರರನ್ನಾಗಿಸಿವೆ” ಎಂದು...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

May 19, 2026
Next Post
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ "ಭಾರತ–ನಾರ್ಡಿಕ್" ಬಗ್ಗೆ ಹೇಳಿದ್ದೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada