ನವದೆಹಲಿ : ಮೇ; 17: 2023 ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಪುಷ್ಪ ಅಮರನಾಥ್, ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಹೆಸರು ಅಂತಿಮವಾಗಿದೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಹೆಸರು ಘೋಷಣೆ ಮಾಡುತ್ತಾರೆ. ಸಿದ್ದರಾಮಯ್ಯ ಸಿಎಂ ಆಗುವುದು ಕನ್ಫರ್ಮ್ ಆಗಿದೆ. ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ ಎಂದಿದ್ದಾರೆ.

ನಾವೆಲರೂ ಸಿದ್ದರಾಮಯ್ಯಗೆ ಶುಭಾಶಯ ತಿಳಿಸಿದ್ದೇವೆ. ಅವರು ಕೂಡ ತುಂಬಾ ಖುಷಿಯಾಗಿದ್ದಾರೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯವರನ್ನ ಭೇಟಿಯಾಗಿದ್ದಾರೆ. ಅವರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಾ.ಕೆ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.