• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುಟುಕಿದ ಕುಮಾರಸ್ವಾಮಿ.. ಸರ್ಕಾರದ ವಿರುದ್ಧ ಕಿಡಿಕಾರಿದ್ದಕ್ಕೆ ತಿರುಗೇಟು..!

ಕೃಷ್ಣ ಮಣಿ by ಕೃಷ್ಣ ಮಣಿ
November 14, 2023
in ಕರ್ನಾಟಕ
0
ಬರಕ್ಕಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ನಿಮಗೆ ದೊಡ್ಡ ಸಂಕಷ್ಟವಾಗಿದೆ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ADVERTISEMENT

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ರು. ಆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ನೇರವಾಗಿಯೇ ಟಾಂಗ್‌ ಕೊಡುವ ಕೆಲಸ ಮಾಡಿದ್ದರು. ಗ್ಯಾರಂಟಿಗೂ ಕುಮಾರಸ್ವಾಮಿ ಅವರಿಗೂ ಏನು ಸಂಬಂಧ..? ಅವರು ಯೋಜನೆಯ ಲಾಭ ಪಡೆದವರೂ ಅಲ್ಲ, ಯೋಜನೆಯನ್ನು ಜಾರಿ ಮಾಡಿದವರೂ ಅಲ್ಲ. ಅವರದ್ದು ಪಂಚರತ್ನ ಯಾತ್ರೆ ಎಂದಿದ್ದರು. ಗ್ಯಾರಂಟಿಗಳ ಬಗ್ಗೆ ಕುಮಾರಸ್ವಾಮಿಗೆ ಏನ್​ ಗೊತ್ತಿದೆ.. ಅವ್ರೇನು ಫಲಾನುಭವಿಗಳಾ ಅಂತ ಕೇಳಿದ್ದ ಡಿ.ಕೆ ಶಿವಕುಮಾರ್​​ ವ್ಯಂಗ್ಯಕ್ಕೆ ಕುಮಾರಸ್ವಾಮಿ ಜಾಲತಾಣಗಳಲ್ಲಿ ಪದಪುಂಜಗಳನ್ನು ಪೋಣಿಸಿ ವಾಗ್ದಾಳಿ ಮಾಡಿದ್ದಾರೆ.

ಆವೇಶ ಆರೋಗ್ಯಕ್ಕೆ ಒಳ್ಳೇದಲ್ಲ.. ಹಾನಿಕಾರಕ..

ಡಿಸಿಎಂ ಎನ್ನುವುದನ್ನು ಡೂಪ್ಲಿಕೇಟ್‌ ಸಿಎಂ ಎಂದಿರುವ ಕುಮಾರಸ್ವಾಮಿ, ಡಿಸಿಎಂ ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ. ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ ಅನ್ನೋದು ನೆನಪಿರಲಿ ಎಂದು ಪರೋಕ್ಷವಾಗಿ ಎಚ್ಚರಿಕೆಯನ್ನೂ ರವಾನಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ರೆ, ನಾಲಿಗೆ ಹೀಗೆ ಮಾತನಾಡುತ್ತದೆ.. ಅದರಲ್ಲಿ ಅಚ್ಚರಿಯೇನೂ ಇಲ್ಲ.. ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಆಡಳಿತದಲ್ಲಿ ಇದ್ದೀವಿ ಅಂತ ತಲೆಯೇ ನಿಲ್ಲುತ್ತಿಲ್ಲ. ಸಮಯ ಬೇಕು, ಆಗ ತಿರುಗುವ ತಲೆ ತಾನಾಗೇ ನಿಲ್ಲುತ್ತದೆ ಎಂದು ಹೇಳುವ ಮೂಲಕ ಅಧಿಕಾರ ಶಾಶ್ವತ ಅಲ್ಲ ಎನ್ನುವುದನ್ನು ನೆನಪಿಸಿದ್ದಾರೆ. ಪಂಚರತ್ನದ ಬಗ್ಗೆ ಮಾತನಾಡಿದ್ದ ಡಿಕೆಶಿಗೆ ಮತ್ತೆ ಕೌಂಟರ್‌ ಕೊಟ್ಟಿದ್ದು, ಪಂಚರತ್ನ ರಾಜ್ಯಕ್ಕಾಗಿ ನಾನು ರೂಪಿಸಿದ್ದ ಪಂಚಸೂತ್ರಗಳು. ಗ್ಯಾರಂಟಿಗಳು ಶಾಶ್ವತ ‘ಆರ್ಥಿಕವೈಕಲ್ಯ’ರನ್ನಾಗಿಸುವ ತಂತ್ರಗಳು. ಎಲೆಕ್ಷನ್‌ ಗೆಲ್ಲಲು ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡ್ಬೇಕು. ನಿಮ್ಮ ಸಚಿವರು ಹೇಳಿದ್ದ ಈ ಹೇಳಿಕೆಗೆ ನನ್ನ ಸಹಮತವಿದೆ. ಗ್ಯಾರಂಟಿಗಳು ಎಷ್ಟು ಜನರಿಗೆ ತಲುಪಿದೆ. ಆರ್ಥಿಕ ಹೊರೆ ಎಷ್ಟು? ಶ್ವೇತಪತ್ರ ಹೊರಡಿಸಿ ಆಮೇಲೆ ಚರ್ಚೆಗೆ ಬನ್ನಿ ನಾನು ರೆಡಿಯಿದ್ದೀನಿ ಎನ್ನುವ ಮೂಲಕ ಚಲುವರಾಯಸ್ವಾಮಿ ಹೇಳಿದ್ದ ಚೀಪ್‌ ಗಿಮಿಕ್‌ ಅನ್ನೋ ಹೇಳಿಕೆಯನ್ನು ನೆನಪು ಮಾಡಿದ್ದಾರೆ.

CM ವಿರುದ್ಧದ ಆರೋಪಕ್ಕೆ ಉತ್ತರ ಕೊಟ್ಟ ಸಿದ್ದು..

ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುಳ್ಳು ಆರೋಪಗಳ ಮೂಲಕ ದಿನನಿತ್ಯ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರೇ ನನ್ನನ್ನು ಟೀಕಿಸುವುದರಿಂದ ನಿಮ್ಮ ಮನಸಿಗೆ ಶಾಂತಿ ಸಿಗುವುದಿದ್ದರೆ, ನಿಮ್ಮ ದ್ವೇಷ ಅಸೂಯೆ ಮುಂದುವರಿಯಲಿ. ಚುನಾವಣಾ ಸೋಲಿನ ನಿಮ್ಮ ನಿರಾಸೆ, ಅದರಿಂದಾಗಿರುವ ಹತಾಶೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ರಾಜ್ಯದ ಬಡವರನ್ನು ಯಾಕೆ ಈ ರೀತಿ ದ್ವೇಷಿಸುತ್ತಿದ್ದೀರಿ..? ಬಡವರ ಕಲ್ಯಾಣಕ್ಕಾಗಿಯೇ ರೂಪಿಸಲಾಗಿರುವ ಯೋಜನೆಗಳನ್ನು ಯಾಕೆ ವಿರೋಧಿಸುತ್ತಿದ್ದೀರಿ? ಕಳೆದ ಚುನಾವಣೆಯಲ್ಲಿ ಅವರು ನಿಮ್ಮ ಪಕ್ಷವನ್ನು ತಿರಸ್ಕರಿಸಿದ್ದಕ್ಕಾಗಿ ಈ ದ್ವೇಷವೇ ? ಎಂದು ಕುಟುಕಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು. ಆ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ ಎಂದಿದ್ದಾರೆ. ಇದೇ ರೀತಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡಕ್ಕೂ ರಾಜ್ಯದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಬಹಳ ಮುಖ್ಯವಾಗಿ ರಾಜ್ಯದ ಬಡಜನರನ್ನು ಗುರಿಯಾಗಿಸಿಕೊಂಡು ರೂಪಿಸಿದ್ದೇವೆ. ಅದು ಶ್ರೀಮಂತರು ಇಲ್ಲವೇ ಉದ್ಯಮಿಗಳಿಗೆ ನೆರವಾಗುವ ತೆರಿಗೆ ವಿನಾಯಿತಿಯೂ ಅಲ್ಲ, ಅವರ ಸಾಲ ಮನ್ನಾ ಮಾಡುವ ಯೋಜನೆಯೂ ಅಲ್ಲ. ವಂಚಕ ಉದ್ಯಮಿಗಳಿಗೆ ನೆರವಾಗಲು ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸೊಲ್ಲೆತ್ತಲಾಗದ ಕುಮಾರಸ್ವಾಮಿ ಮೂರು ಹೊತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ಜಗ್ಗಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು: ಸಿಎಂ ಸಿದ್ದರಾಮಯ್ಯ

Next Post

ತೆಲಂಗಾಣ ಹೈಕೋರ್ಟ್ ಜಡ್ಜ್ ಸುಮಲತಾ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ತೆಲಂಗಾಣ ಹೈಕೋರ್ಟ್ ಜಡ್ಜ್ ಸುಮಲತಾ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

ತೆಲಂಗಾಣ ಹೈಕೋರ್ಟ್ ಜಡ್ಜ್ ಸುಮಲತಾ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada