• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
January 15, 2026
in Top Story, ಕರ್ನಾಟಕ
0
ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ
Share on WhatsAppShare on FacebookShare on Telegram

ರಾಯಚೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಪೀಠಾಧಿಪತಿ ಸಿದ್ದರಾಮನಂದ ಸ್ವಾಮೀಜಿ (50)(Siddha Ramananda Swamiji) ಅವರು ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಇಂದು (ಗುರುವಾರ) ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಅಸ್ತಂಗತರಾಗಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT
Sri Ramulu on Siddaramaiah : ಪಾದಯಾತ್ರೆಗೆ ಹೈಕಮಾಂಡ್‌ ಒಪ್ಪಿಗೆ ಕೊಟ್ಟಿಲ್ವ ಸರ್..? #siddaramaiah #bjp

ಸಿದ್ದರಾಮನಂದ ಸ್ವಾಮೀಜಿ ಅವರು ಇತ್ತೀಚೆಗಷ್ಟೇ ಜನವರಿ 12, 13 ಮತ್ತು 14ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ ಪೂಜಾರಿಗಳ ಶಿಬಿರ ಯಶಸ್ವಿಯಾಗಿ ನಡೆದಿದ್ದು, ರಾಜಕೀಯ ಪ್ರಭಾವವಿಲ್ಲದ ಕಾರ್ಯಕ್ರಮವೆಂದು ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿತ್ತು.

ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಸರಿಯಾಗಿ ಊಟ ಮತ್ತು ನಿದ್ರೆ ಮಾಡದೇ ನಿರಂತರವಾಗಿ ಭಾಗವಹಿಸಿದ್ದ ಸ್ವಾಮೀಜಿ ಅವರು ಬುಧವಾರ ರಾತ್ರಿ ಲೋ ಬಿಪಿಯಿಂದ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಭಕ್ತರು, ಶಿಷ್ಯರು ಹಾಗೂ ಹಾಲುಮತ ಸಮಾಜದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

Priyank Kharge : ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕ್‌ ಖರ್ಗೆ ಆಕ್ರೋಶ..! #marega #vbramg #pratidhvani

ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Tags: DeathRaichurSiddha Ramananda SwamijiSwamiji
Previous Post

ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

Next Post

Allu Arjun: ಅಲ್ಲು ಅರ್ಜುನ್‌ಗೆ ಲೋಕೇಶ್ ಕನಕರಾಜ್ ಆಕ್ಷನ್ ಕಟ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
Allu Arjun: ಅಲ್ಲು ಅರ್ಜುನ್‌ಗೆ ಲೋಕೇಶ್ ಕನಕರಾಜ್ ಆಕ್ಷನ್ ಕಟ್

Allu Arjun: ಅಲ್ಲು ಅರ್ಜುನ್‌ಗೆ ಲೋಕೇಶ್ ಕನಕರಾಜ್ ಆಕ್ಷನ್ ಕಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada