ಇಂದು ದೆಹಲಿಯತ್ತ (Delhi) ಹೊರಟಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿನ ಬೆಳವಣಿಗೆಗಳಿಂದ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಂದು ಖುದ್ದು ರಾಹುಲ್ ಗಾಂಧಿ (Rahul gandhi) ಭೇಟಿಗೆ ಅವಕಾಶ ಕೇಳಿರುವ ಸಿಎಂ ಸಿದ್ದರಾಮಯ್ಯರಿಂದ ತೀವ್ರ ಬೇಸರ ವ್ಯಕ್ತಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗಿನ ಬಗ್ಗೆ ರಾಹುಲ್ ಗಾಂಧಿ ಮುಂದೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ಹೊರ ಹಾಕುವ ಸಾಧ್ಯತೆಯಿದ್ದು ಮತ್ತೊಂದೆಡೆ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಡಿಕೆಶಿ ನಾಯಕತ್ವ ಬದಲಾವಣೆಗಾಗಿ ಹೈಕಮಾಂಡ್ ಮುಂದೆ ಪಟ್ಟು ಹಿಡಿಯುವ ಸಾಧ್ಯತೆಯಿದೆ.

ಇದೇ ವೇಳೆ ಶಾಸಕರ ಜೊತೆಗಿನ ಒನ್ ಟು ಒನ್ ಮೀಟಿಂಗ್ ರಿಪೋರ್ಟ್ ಬಗ್ಗೆ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕೂಡ ಚರ್ಚೆ ನಡೆಸಲಿದ್ದು,ಸಚಿವರ ಕಾರ್ಯವೈಖರಿ, ಕ್ಷೇತ್ರದ ಸಮಸ್ಯೆ, ಅನುದಾನ ಸೇರಿದಂತೆ ಶಾಸಕರ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.