ಪಂಜಾಬಿ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೊದಲ ಬಾರಿ ಆರೋಪಿಯನ್ನು ಬಂಧಿಸಿದ್ದಾರೆ.
ಉತ್ತರಾಖಂಡ್ ನ ಡೆಹ್ರಡೂನ್ ನಲ್ಲಿ ಐವರ ಜೊತೆ ಬಂಧಿಸಲಾಗಿದ್ದ ಮನ್ ಪ್ರೀತ್ ಎಂಬಾತನನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.
ಮನ್ ಪ್ರೀತ್ ಡ್ರಗ್ ಡೀಲರ್ ಆಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 4 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಕೂಡ ಈತನನ್ನು ಕೊಲೆ, ಕೋಮುಗಲಭೆ, ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪಗಳಲ್ಲಿ ಬಂಧಿಸಲಾಗಿತ್ತು.