ರಾಜ್ಯದಲ್ಲಿ ಸದ್ಯ ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ.

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಜೆಪಿಗರು ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸದೇ ಅಗೌರವ ತೋರಿದ್ದಕ್ಕೆ ಸಚಿವ ಡಾ. ಎಚ್ ಸಿ ಮಹದೇವಪ್ಪ ಬೇಸರವನ್ನು ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಸಚಿವರು, ಸಿಗಂದೂರು ಬ್ರಿಡ್ಜ್ ಮಾಡಿರೋದು ಐತಿಹಾಸಿಕ ನಿರ್ಧಾರ, ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ ಆದ್ರೆ ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ನಾನೇ ಮಾಡಿದ್ದು ಅಂತ ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ, ನಮ್ಮ ಸರ್ಕಾರಕ್ಕೆ ಜನತೆಗೆ ಒಳ್ಳೆಯದಾಗಬೇಕು ಅಂತ ಅಭಿಲಾಷೆ ಇದ್ದಿದ್ದಕ್ಕೆ ನಾವು ಕಳೆದ ಅವಧಿಯಲ್ಲಿ ಡಿಪಿಆರ್ ಮಾಡಿದ್ವಿ ಅಂತಾ ಸಚಿವ ಹೆಚ್.ಸಿ ಮಹದೇವಪ್ಪ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.