• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, October 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಿಷತ್ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ಸಂಚಲನ ಸೃಷ್ಟಿಸಿದ ವಿಜಯೇಂದ್ರ ಹೇಳಿಕೆ..!

ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು: ಬಿ.ವೈ. ವಿಜಯೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
October 17, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪರಿಷತ್ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ಸಂಚಲನ ಸೃಷ್ಟಿಸಿದ ವಿಜಯೇಂದ್ರ ಹೇಳಿಕೆ..!
Share on WhatsAppShare on FacebookShare on Telegram

ಚಿತ್ರದುರ್ಗ : ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ADVERTISEMENT
Darshan Puttannaiah : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿದ ದರ್ಶನ್ ಪುಟ್ಟಣ್ಣಯ್ಯ..! #congressmla

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುಖ್ಯಮಂತ್ರಿಗಳೇ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಬಹಿರಂಗಪಡಿಸಿದ್ದಾರೆ. ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಮಾಡಲು ಸಾಧ್ಯವಿಲ್ಲ. ಸ್ಟಿಂಗ್ ಆಪರೇಷನ್‌ನ ಪಿತಾಮಹ ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣದ ಕುರಿತು ಸೂಕ್ತ ತನಿಖೆಯಾಗಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ದೊಡ್ಡ ಸ್ಥಾನದಲ್ಲಿರಲಿ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ ಮೈಸೂರು ದಸರಾ ಸಂದರ್ಭದಲ್ಲಿ ದನಕರುಗಳ ಜಾತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ದನಕರುಗಳಿಗೆ ಮೇವು ಹಾಗೂ ರೈತರಿಗೆ ಊಟದ ವ್ಯವಸ್ಥೆ ಇಲ್ಲದಿರುವುದು ಬೇಸರದ ಸಂಗತಿ. ದಸರಾ ವೀಕ್ಷಣೆಗೆ ಬಂದ ಮಹಿಳೆಯರಿಗೂ ಊಟದ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬ ದೂರುಗಳಿವೆ. ಮೈಸೂರು ದಸರಾದಲ್ಲಿ ಇಂತಹ ಅವ್ಯವಸ್ಥೆ ಹಿಂದೆಂದೂ ಕಂಡಿರಲಿಲ್ಲ. ದಸರಾಗೆ ಬಂದವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಟಿಂಗ್ ಆಪರೇಷನ್ ವಿಚಾರದಲ್ಲೇ ಮುಳುಗಿದ್ದು, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಬೆಳವಣಿಗೆಗಳು ನಡೆಯಲಿವೆ. ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದರೂ ರೈತರಿಗೆ ಕೇವಲ 2,500 ರೂಪಾಯಿ ಪರಿಹಾರ ಘೋಷಿಸಿ ಸರ್ಕಾರ ಕೈಕಟ್ಟಿ ಕುಳಿತಿದೆ. ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ರಾಜ್ಯ ಸರ್ಕಾರ ವಿವೇಚನೆಯಿಂದ ವರ್ತಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ : ಸೌದಿ ಅರೇಬಿಯಾಗೆ ತೆರಳುವ ವಿಮಾನಗಳ ಹಾರಾಟ ರದ್ದು : ಅ. 24ರವರೆಗೆ ಜಿದ್ದಾ, ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ | Air India

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಜೆಡಿಎಸ್ ಸ್ವತಂತ್ರವಾಗಿ ಹೋರಾಟ ನಡೆಸಲು ತೀರ್ಮಾನಿಸಿದೆ. ಅವರು ಹೋರಾಟ ಮಾಡಲಿ. ಬಿಜೆಪಿ ತನ್ನದೇ ಆದ ರೀತಿಯಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ. ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತು ಪಾದಯಾತ್ರೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರು ರೈತ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಶೀಲಿಸಲು ಸಮಿತಿಯನ್ನೂ ರಚಿಸಲಾಗಿದೆ. ದಸರಾ ಮುಗಿದ ಬಳಿಕ ಸಮಿತಿ ರೈತರ ಅಹವಾಲುಗಳನ್ನು ಆಲಿಸಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ರಾಹುಲ್‌ ಗಾಂಧಿಯಿಂದ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿ..!

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿಯ ಜೊತೆಗೆ ರಾಜ್ಯ ಸರ್ಕಾರದ ಜವಾಬ್ದಾರಿಯೂ ಇದೆ. ರಾಜ್ಯ ಸರ್ಕಾರವು ಕಬ್ಬಿಗೆ ಸೂಕ್ತ ರಾಜ್ಯ ಸಲಹಾ ಬೆಲೆ (SAP) ನಿಗದಿಪಡಿಸಬೇಕು. ರೈತರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 1,000 ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸವಾಗುತ್ತಿದೆ ಎಂಬ ರೈತರ ಆರೋಪಗಳಲ್ಲೂ ಸತ್ಯಾಂಶವಿರುವ ಸಾಧ್ಯತೆಯಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು. ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಕುಟುಕಿದ್ದಾರೆ.

CS Patil | : 🌧️☔ ರಾಜ್ಯಕ್ಕೆ ಈಶಾನ್ಯ ಮಾರುತಗಳ ಪ್ರಭಾವ ಎಷ್ಟಿದೆ..? ಎಲ್ಲೆಲ್ಲಿ ಎಷ್ಟು ಮಳೆಯಾಗುತ್ತೆ..? #weather

ಕಾಂಗ್ರೆಸ್ ಮುಖಂಡರ ಹೇಳಿಕೆಗಳನ್ನು ಗಮನಿಸಿದರೆ, ವಿವಿಧ ಸಂಘಟನೆಗಳಿಗೆ ಕಾಂಗ್ರೆಸ್‌ನಿಂದ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂಬ ಆರೋಪಗಳು ಸ್ಪಷ್ಟವಾಗುತ್ತಿವೆ. ಚುನಾವಣಾ ಸೋಲಿನಿಂದ ಹತಾಶರಾಗಿರುವ ರಾಹುಲ್ ಗಾಂಧಿ ವಿವಿಧ ಸಂಘಟನೆಗಳನ್ನು ಬಳಸಿಕೊಂಡು ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಕಮ್ಯುನಿಸ್ಟ್ ಪಕ್ಷಗಳನ್ನು ಬಳಸಿಕೊಂಡು ದೇಶದಲ್ಲಿ ಅಸ್ಥಿರತೆ ಉಂಟುಮಾಡುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಇಂತಹ ಪ್ರಯತ್ನಗಳು ತಾತ್ಕಾಲಿಕವಾಗಿದ್ದು, ದೇಶದ ಜನರು ಇದಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Tags: B Y VijayendraBJP Karnataka< Sting OperationCongress GovernmentDK ShivakumarFarmers protestHD KumaraswamyKarnataka PoliticsPratidhvaniRahul Gandhi
Previous Post

BREAKING : ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು ಮಂಜೂರು | Abhijit Deepke

Next Post

ವಿದ್ಯಾರ್ಥಿಗಳಿಗೆ ಸಂಸತ್‌ ಚಟುವಟಿಕೆ ಅರಿವು ಮೂಡಿಸಲು 20 ವರ್ಷದ ಅನುಭವ ಧಾರೆ ಎರೆಯಲು ಸಿದ್ಧ : ಸಚಿವ ಶಿವಲಿಂಗೇಗೌಡ

Related Posts

ಬೆಂಗಳೂರಿನಲ್ಲಿ ಮಳೆ ಕಾಟ, ಭಾರತ–ವೆಸ್ಟ್ ಇಂಡೀಸ್ ಪಂದ್ಯಕ್ಕೆ ಹಿನ್ನಡೆ; ಸರಣಿ ಗೆಲ್ಲೋರು ಯಾರು?
Top Story

ಬೆಂಗಳೂರಿನಲ್ಲಿ ಮಳೆ ಕಾಟ, ಭಾರತ–ವೆಸ್ಟ್ ಇಂಡೀಸ್ ಪಂದ್ಯಕ್ಕೆ ಹಿನ್ನಡೆ; ಸರಣಿ ಗೆಲ್ಲೋರು ಯಾರು?

by ಪ್ರತಿಧ್ವನಿ
October 17, 2026
0

ಬೆಂಗಳೂರು: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ವಿಳಂಬವಾಗಿದೆ. ಐದು...

Read moreDetails
‘ಕೊನೆಯುಸಿರು ಇರುವವರೆಗೂ ದರ್ಶನ್‌ರನ್ನು ಮರೆಯಲ್ಲ’; ಯುವ ದಸರಾ ವೇದಿಕೆಯಲ್ಲಿ ಭಾವುಕರಾದ ರಚಿತಾ ರಾಮ್!

‘ಕೊನೆಯುಸಿರು ಇರುವವರೆಗೂ ದರ್ಶನ್‌ರನ್ನು ಮರೆಯಲ್ಲ’; ಯುವ ದಸರಾ ವೇದಿಕೆಯಲ್ಲಿ ಭಾವುಕರಾದ ರಚಿತಾ ರಾಮ್!

October 17, 2026
ಈ ಸರ್ಕಾರ ಸ್ಟಿಂಗ್ ಕಿರಾತಕನ ಬೂಟ್ ಪಾಲಿಶ್ ಮಾಡುತ್ತಿದೆ : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶ..!

ಈ ಸರ್ಕಾರ ಸ್ಟಿಂಗ್ ಕಿರಾತಕನ ಬೂಟ್ ಪಾಲಿಶ್ ಮಾಡುತ್ತಿದೆ : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶ..!

October 17, 2026
Push for arrest of 'sting' kingpin: H.D. Kumaraswamy takes to the streets

ಸ್ಟಿಂಗ್ ಕಿಂಗ್‌ಪಿನ್ ಬಂಧನಕ್ಕೆ ಬಿಗಿಪಟ್ಟು: ರೊಚ್ಚಿಗೆದ್ದು ರಸ್ತೆಗಿಳಿದ ಹೆಚ್.ಡಿ. ಕುಮಾರಸ್ವಾಮಿ

October 17, 2026
Travel insurance becomes mandatory for offline train tickets starting Oct 27: Supreme Court issues significant order

ಅ. 27 ರಿಂದ ಆಫ್‌ಲೈನ್ ರೈಲು ಟಿಕೆಟ್‌ಗಳಿಗೂ ಪ್ರಯಾಣ ವಿಮೆ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

October 17, 2026
Next Post
ವಿದ್ಯಾರ್ಥಿಗಳಿಗೆ ಸಂಸತ್‌ ಚಟುವಟಿಕೆ ಅರಿವು ಮೂಡಿಸಲು 20 ವರ್ಷದ ಅನುಭವ ಧಾರೆ ಎರೆಯಲು ಸಿದ್ಧ : ಸಚಿವ ಶಿವಲಿಂಗೇಗೌಡ

ವಿದ್ಯಾರ್ಥಿಗಳಿಗೆ ಸಂಸತ್‌ ಚಟುವಟಿಕೆ ಅರಿವು ಮೂಡಿಸಲು 20 ವರ್ಷದ ಅನುಭವ ಧಾರೆ ಎರೆಯಲು ಸಿದ್ಧ : ಸಚಿವ ಶಿವಲಿಂಗೇಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada