ಮುಂದಿನ ತಿಂಗಳು ನಡೆಯುವ ರಾಷ್ಟ್ರಪತಿ ಚುನಾವಣೆ ಸಂಬಂಧ ವಿರೋಧ ಪಕ್ಷಗಳು ಈಗಾಗಲೇ ಸರಣಿ ಸಭೆ ನಡೆಸಿದ್ದು ಒಮ್ಮತದ ಅಭ್ಯರ್ಥಿ ಘೋಷಣೆಗೆ ಪರದಾಡುತ್ತಿವೆ.
ಈ ಮಧ್ಯೆ ರಾಷ್ಟ್ರಪತಿ ಅಭ್ಯರ್ಥಿ ರೇಸ್ನಲ್ಲಿ ಮಾಜಿ ಕೇಂದ್ರ ಸಚಿವ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೆಸರು ಪ್ರಮುಖವಾಗಿ ವಿರೋಧ ಪಕ್ಷಗಳ ಒಮ್ಮತ್ತದ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.
ಈಗಾಗಲೇ ಶರದ್ ಅಭ್ಯರ್ಥಿಯಾದರೆ ಕಾಂಗ್ರೆಸ್ ಬೆಂಬಲ ನೀಡುವುದಾಗಿ ಹೇಳಿದೆ ಎಂದು ತಿಳಿದು ಬಂದಿದೆ. ಕಳೆದ ಶನಿವಾರ ಸೋನಿಯಾ ಗಾಂಧಿ ನೀಡಿದ್ದ ಸಂದೇಶವನ್ನ ಹೊತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂಬೈನಲ್ಲಿ ಪವಾರ್ರನ್ನು ಬೇಟಿ ಮಾಡಿ ಮಾತುಕತೆ ನಡೆಸಿರುವುದು ಈ ಬೆಳವಣಿಗೆಗ ಇಂಬು ನೀಡಿದೆ.
ಆದರೆ, ಈ ಬೆಳವಣಿಗೆ ಕುರಿತು ಶರದ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದೇ ವೇಳೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಪವಾರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.
ಖರ್ಗೆ ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ನಾಯಕರ ಅಣತಿಯಂತೆ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ಮಮತಾ ಬ್ಯಾನರ್ಜಿ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಚುನಾವಣೆ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಸಭೆ ನಡೆಸಿದ್ದಾರೆ. ಈ ವೇಳೆ ಸೋನಿಯಾ ಗಾಂಧಿ ಮಮತಾರ ಜೊತೆ ದೂರವಾಣಿಯಲ್ಲಿ ಕೆಲಕಾಲ ಚರ್ಚೆ ನಡೆಸಿದ್ದಾರೆ.
ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಪವಾರ್ ಹಲವು ಸರ್ಕಾರಗಳ ರಚಿಸುವಲ್ಲಿ ಹಾಗು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮಹಾರಾಷ್ಟ್ರದ ಆಡಳಿತರೂಢ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಬಿಜೆಪಿಯೂ ಪಕ್ಷದ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಅಥವಾ ಕೇಂದ್ರ ಸಚಿವ ರಾಜನಾಥ್ ಸಿಂಗ್ಈ ಇಬ್ಬರಲ್ಲಿ ಒಬ್ಬರು ನಾಯಕರನ್ನು ಒಮ್ಮತದ ಅಭ್ಯರ್ಥಿಯಾಗಿ ಘೋಷಿಸಲು ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಲು ನಿರ್ಧರಿಸಿದೆ.
2017ರಲ್ಲಿ ಬಿಜೆಪಿಯೂ ತನ್ನ ಮೈತ್ರಿಕೂಟವಾದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಮೊದಲು ಘೋಷಿಸಿತ್ತು. ಆ ನಂತರ ವೆಂಕಯ್ಯ ನಾಯ್ಡುರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.
ಒಂದು ವೇಳೆ ಪಕ್ಷದ ಆಂತರಿಕ ವಲಯದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಮ್ಮತ ಮೂಡದಿದ್ದರೆ ಚುನಾವಣೆಗೆ ತಯಾರಿ ನಡೆಸಲಿದೆ ಎಂದು ವರದಿಯಾಗಿದೆ. ಈಗಾಗಲೇ ಹಲವು ಹಿರಿಯ ನಾಯಕರ ಹೆಸರುಗಳು ಚಾಲ್ತಿಯಲ್ಲಿದ್ದು ಬಿಜೆಪಿ ಅಂತಿಮ ಕ್ಷಣದಲ್ಲಿ ಅಚ್ಚರಿ ಮೂಡಿಸಿದ್ದರು ಹೊಸದೇನಿಲ್ಲ.
ರಾಷ್ಟ್ರಪತಿ ಚುನಾವಣೆಗೆ ಶಾಸಕರು ಹಾಗು ಸಂಸದರು ಮತ ಚಲಾಯಿಸಲಿದ್ದಾರೆ. ಚುನಾವಣೆಯಲ್ಲಿ ಯಾವ ಅಭ್ಯರ್ಥಿಯು ಶೇ.50ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರನ್ನು ವಿಜೇತರೆಂದು ಘೋಷಿಸಲಾಗುತ್ತದೆ.
ಸದ್ಯ ಬಿಜೆಪಿ ಮತ್ತು ಅದರ ಮೈತ್ರಿಕೂಟ ಪಕ್ಷಗಳಿಗೆ 13 ಸಾವಿರ ಮತಗಲ ಕೊರತೆಯಿದೆ. ಕಳೆದ ಭಾರೀ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಕೆಸಿಆರ್ ನೇತೃತ್ವದ ಟಿಆರ್ಎಸ್ ಪಕ್ಷ , ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಹಾಗು ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಬೆಂಬಲಿಸಿದ್ದವು.
ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೆಸಿಆರ್ ಬಿಜೆಪಿ ವಿರುದ್ದ ತೊಡೆ ತಟ್ಟಿದ್ದು ವಿರೋಧೆ ಪಕ್ಷಗಳನ್ನು ಒಟ್ಟುಗೂಡಿಸಿ ಆಡಳಿತರೂಢ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ.