ಟರ್ಬನ್ ಧರಿಸಿದ ಸಿಖ್ ಧರ್ಮದ ಹುಡುಗನಿಗೆ ಖಾಸಗಿ ಶಾಲೆಯಲ್ಲಿ ಪ್ರವೇಶ ನಿರಾಕರಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಕ್ಕಳ ಸಹಾಯವಾಣಿಗೆ ದೂರು ದಾಖಲಿಸಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಗೆ (CWC) ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದೆ.
ಈ ಕುರಿತು ಮಾತನಾಡಿರುವ CWC ಅಧ್ಯಕ್ಷ ರೆನ್ನಿ ಡಿಸೋಜಾ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಟರ್ಬನ್ ಧರಿಸಲು ಅವಕಾಶ ನೀಡಲಾಗಿದೆ. ಇದು ಶಾಲಾ ಆಡಳಿತ ಮಂಡಳಿಯು ಹೈಕೋರ್ಟ್ ಹಿಜಾಬ್ ಕುರಿತಾಗಿ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸಿರಬಹುದು. ಈಗಾಗಲೇ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಿಗೆ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದೇನೆ ಎಂದರು.

ಈ ಕುರಿತು ರಾಷ್ಟ್ರೀಯ ಸಿಖ್ ಸಂಘಟನೆಯ ಸದಸ್ಯರು ಶಾಲಾ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದು ಫೆಬ್ರವರಿ 28ರಂದು ಶಾಲಾ ಮಂಡಳಿ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದೆ.
ಈ ಕುರಿತು ಖಾಸಗಿ ಶಾಲೆಯ ವಿರುದ್ದ ಯಾವುಧೇ ದೂರು ದಾಖಲಾಗಿಲ್ಲ ಎಂದುಇ DDPI ಮಲ್ಲೇಸ್ವಾಮಿ ತಿಳಿಸಿದ್ದಾರೆ.













