• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಕ್ಕಿಂ ಹಿಮಪಾತದಲ್ಲಿ 6 ಜನ ದುರ್ಮರಣ ; 80 ಮಂದಿ ಪ್ರವಾಸಿಗರು ನಾಪತ್ತೆ..!

ಪ್ರತಿಧ್ವನಿ by ಪ್ರತಿಧ್ವನಿ
April 4, 2023
in Top Story, ದೇಶ
0
ಸಿಕ್ಕಿಂ ಹಿಮಪಾತದಲ್ಲಿ 6 ಜನ ದುರ್ಮರಣ ; 80 ಮಂದಿ  ಪ್ರವಾಸಿಗರು ನಾಪತ್ತೆ..!
Share on WhatsAppShare on FacebookShare on Telegram

ಸಿಕ್ಕಿಂ: ಏ.೦೪: ಇಂದು ಮಧ್ಹಾಹ್ನ ಸಿಕ್ಕಿಂನಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಕನಿಷ್ಠ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ. ಹಿಮಪಾತದಿಂದ ಆರು ಪ್ರವಾಸಿಗರನ್ನು ರಕ್ಷಿಸಲಾಗಿದೆ. ಭಾರತ-ಚೀನಾ ಗಡಿಯಲ್ಲಿ ಗ್ಯಾಂಗ್ಟಾಕ್ ಮತ್ತು ನಾಥುಲಾವನ್ನು ಸಂಪರ್ಕಿಸುವ ಜವಾಹರಲಾಲ್ ನೆಹರು ರಸ್ತೆಯ 14 ನೇ ಮೈಲಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಐವತ್ತಕ್ಕೂ ಹೆಚ್ಚು ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ADVERTISEMENT

“ಮೃತರಲ್ಲಿ ನಾಲ್ವರು ಪುರುಷರು, ಒಬ್ಬ ಮಹಿಳೆ ಮತ್ತು ಮಗು ಸೇರಿದ್ದಾರೆ. ಇವರ ಗುರುತು ಪತ್ತೆಯಾಗಿಲ್ಲ” ಎಂದು ಸಿಕ್ಕಿಂ ಪೊಲೀಸ್‌ನ ಇನ್ಸ್‌ಪೆಕ್ಟರ್ ಜನರಲ್ಸೋ ನಮ್ ತೇನ್ಸಿಂಗ್ ಭುಟಿಯಾ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ದವರೆಗಿನ ಮಾಹಿತಿಯಂತೆ ಸುಮಾರು 50 ಪ್ರವಾಸಿಗರು ಹಿಮಪಾತದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ರಕ್ಷಣಾತಂಡಗಳು ಪ್ರಯತ್ನಿಸುತ್ತಿವೆ. ಹಲವು ಪ್ರವಾಸಿಗರು ಹಿಮಪಾತದಲ್ಲಿ ಸಿಲುಕಿದ್ದಾರೆ. ರಾಜ್ಯ ಪೊಲೀಸರು ಮತ್ತು ಸ್ಥಳೀಯ ಸ್ವಯಂಸೇವಕರು ಅವರ ರಕ್ಷಣೆಗೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರವಾಸಿಗರಿಗೆ 13 ನೇ ಮೈಲ್‌ವರೆಗೆ ಹೋಗಲು ಅನುಮತಿ ನೀಡಲಾಗಿದ್ದರೂ, ಅನೇಕರು 15 ನೇ ಮೈಲ್‌ಗೆ ಹೋಗಿದ್ದರು ಎಂದು ಸಿಕ್ಕಿಂ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 80 ಪ್ರವಾಸಿಗರು ಹಿಮಕುಸಿತದಿಂದ ಗಾಯಗೊಂಡಿರಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಇವರಲ್ಲಿ ಮೂವತ್ತು ಜನರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ರಾಜ್ಯ ರಾಜಧಾನಿ ಗ್ಯಾಂಗ್ಟಾಕ್‌ನ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

ಗ್ಯಾಂಗ್ಟಕ್ ಅನ್ನು ನಾಥು ಲಾ ಜತೆ ಸಂಪರ್ಕಿಸುವ ಜವಾಹರಲಾಲ್ ನೆಹರು ರಸ್ತೆಯಲ್ಲಿನ 15ನೇ ಮೈಲಿಯಲ್ಲಿ ಮಂಗಳವಾರ ಬೆಳಿಗ್ಗೆ 11.10ರ ವೇಳೆಗೆ ಹಿಮಪಾತ ಅಪ್ಪಳಿಸಿದೆ. ಆ ಸಮಯದಲ್ಲಿ ಸುಮಾರು ನೂರೈವತ್ತಕ್ಕೂ ಹೆಚ್ಚು ಪ್ರವಾಸಿಗರು ಆ ಪ್ರದೇಶದಲ್ಲಿದ್ದರು ಎನ್ನಲಾಗಿದೆ.

ಸಿಕ್ಕಿಂನ ಕೆಲವು ಎತ್ತರದ ಪ್ರದೇಶಗಳಲ್ಲಿ ಮಾರ್ಚ್‌ 11ರ ಮಧ್ಯಾಹ್ನ ಭಾರೀ ಹಿಮಪಾತವಾಗಿತ್ತು. ಈ ಸಂದರ್ಭದಲ್ಲಿ ಸುಮಾರು 400 ಪ್ರವಾಸಿಗರೊಂದಿಗೆ ಕನಿಷ್ಠ 100 ವಾಹನಗಳು ಸಿಕ್ಕಿಹಾಕಿಕೊಂಡಿವೆ. ಈ ರೀತಿ ವಾಹನಗಳಲ್ಲಿ ಸಿಲುಕಿದ ಪ್ರವಾಸಿಗರನ್ನು ರಾಜ್ಯ ಪೊಲೀಸ್ ಮತ್ತು ನಾಗರಿಕ ಆಡಳಿತದ ಸಹಯೋಗದೊಂದಿಗೆ ತ್ರಿಶಕ್ತಿ ಪೊಲೀಸ್‌ ಪಡೆಗಳು ಆಪರೇಷನ್ ಹಿಮ್ರಹತ್ ಆರಂಭಿಸಿದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

Tags: 30 people have been rescued50 people are still trappedChild among 7 deadGangtokIndo-China border.Nathu La mountain in SikkimRescue operationssikkimSikkim avalancheSikkimAvalanche
Previous Post

ಕೋಲಾರ ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ ; ತಾಲೂಕು ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಹೇಳಿದ್ದೇನು?

Next Post

ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!

ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada