ಸಿಂಧೂರ ಆಗಲಿ-ಹಿಜಾಬ್ ಆಗಲಿ ಎರಡು ನಮ್ಮ ನಮ್ಮ ಸಂಸ್ಕಂತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ-ಹಿಜಾಬ್ ಹಾಕುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾವುದೇ ಸಂಸ್ಕಂತಿಯನ್ನು ಬಲವಂತದಿಂದ ತಡೆಯುವುದು ತಪ್ಪು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದ ಅವರು, ಹಣೆಗೆ ಕುಂಕುಮ ಇಡುವ ಮಕ್ಕಳನ್ನು ಕಾಲೇಜುಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಮತ್ತು ಸಿಂಧೂರ ವಿವಾದದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದು ಯಾರಿಗೂ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಹಿಜಾಬನ್ನು ಹಿಂದಿನಿಂದಲೂ ಧರಿಸಿಕೊಂಡು ಬರುತ್ತಿದ್ದರು. ಕೇಸರಿ ಶಾಲು ಹಿಂದಿನಿಂದ ಯಾರೂ ಹಾಕುತ್ತಿರಲಿಲ್ಲ. ಹಿಜಾಬ್ ಅನ್ನು ವಿರೋಧಿಸುವುದಕ್ಕೋಸ್ಕರವೇ ಕೇಸರು ಶಾಲು ಹಾಕಿಸುವುದು ಅತ್ಯಂತ ಸಣ್ಣ ತನ. ಇದು ಕೇಸರಿ ಶಾಲಿಗೂ ಮಾಡುವ ಅವಮನ. ಕೇಸರಿ ಶಾಲನ್ನು ಅಮಾನವೀಯ, ಅನಾಗರಿಕ ಕಾರಣಗಳಿಗೆ ಬಳಸಬಾರದು ಎಂದು ಹೇಳಿದ್ದಾರೆ.






