ದೆಹಲಿ: ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ
ವಿಶೇಷ ಮತ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಮತದಾರರ ಪಟ್ಟಿಯನ್ನು ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ ಎಂದಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ವಿಶ್ವಾಸ ಕುಂದುತ್ತಿರುವ ಈ ಸಮಯದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ.
ಆಯೋಗವು ಆಡಳಿತದಲ್ಲಿರುವ ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾಬೀತುಪಡಿಸಬೇಕು. ಹಾಗೆ ಯಾವುದೇ ಆಡಳಿತ ಪರವಲ್ಲದೆ ಬದಲಾಗಿ ಭಾರತದ ಜನರಿಗೆ ತನ್ನ ಸಾಂವಿಧಾನಿಕ ಪ್ರಮಾಣವಚನ ಮತ್ತು ನಿಷ್ಠೆಯನ್ನು ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ತಕ್ಷಣವೇ ಪ್ರದರ್ಶಿಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.
ಇನ್ನು ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಅತ್ಯಂತ ಜಾಗರೂಕರಾಗಿರಬೇಕು. ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.












